ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಸಿಎಂ ಸಿದ್ದರಾಮಯ್ಯ

Date:

Advertisements

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ. ಬೆಂಗಳೂರು ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದ್ದರೆ ಅದಕ್ಕೆ ಅಡಿಪಾಯ ಹಾಕಿದ್ದು ಕೆಂಪೇಗೌಡರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶುಕ್ರವಾರ ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡಿದರು.

ಕೆಂಪೇಗೌಡರ 516ನೇ ಜಯಂತಿಯನ್ನು ಸರ್ಕಾರ, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಆಚರಿಸಲಾಗುತ್ತಿದೆ. 2013-18 ರ ಅವಧಿಯಲ್ಲಿ ನಮ್ಮ ಸರ್ಕಾರ ನಿರ್ಮಲಾನಂದ ಸ್ವಾಮೀಜಿ ಅವರೊಂದಿಗೆ ಚರ್ಚೆ ಮಾಡಿ ಜನ್ಮ ದಿನಾಂಕವನ್ನು ತಿಳಿದು, ಅಂದಿನಿಂದ ನಿರಂತರವಾಗಿ ಸರ್ಕಾರ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡುತ್ತಿದೆ. ಬೆಂಗಳೂರು ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದ್ದರೆ ಅದಕ್ಕೆ ಅಡಿಪಾಯ ಹಾಕಿದ್ದು ಕೆಂಪೇಗೌಡರು ಎಂದರು.

Advertisements

ಅವರನ್ನು ಸ್ಮರಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಬೆಂಗಳೂರಿನ ನಾಲ್ಕು ಭಾಗದಲ್ಲಿ ಗೋಪುರಗಳನ್ನು ಕಟ್ಟಿಸಿದ ಕೆಂಪೇಗೌಡರು ಅಂದೇ ಬೆಂಗಳೂರಿನ ಆಡಳಿತ ಹೇಗಿರಬೇಕೆಂದು ಅರಿತು ವೃತ್ತಿ ಆಧಾರಿತವಾಗಿ ನಗರತ್ ಪೇಟೆ, ಚಿಕ್ಕಪೇಟೆ, ಬಳೆಪೇಟೆ ಸೇರಿದಂತೆ ಅನೇಕ ಪೇಟೆಗಳನ್ನು ತಮ್ಮ ಆಡಳಿತಾವಧಿಯಲ್ಲಿ ನಿರ್ಮಿಸಿದ್ದರು. ಅವರ ಆಡಳಿತ ನಮಗೆಲ್ಲರಿಗೂ ಮಾದರಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇದನ್ನು ಓದಿದ್ದೀರಾ? ವಿಜಯಪುರ | 10 ಕೋಟಿ ಮೌಲ್ಯದ ಚಿನ್ನ ಕದ್ದಿದ್ದ ಗ್ಯಾಂಗ್‌ ಕೊನೆಗೂ ಪೊಲೀಸರ ಬಲೆಗೆ: ಬ್ಯಾಂಕ್‌ನ ಮ್ಯಾನೇಜರೇ ಸೂತ್ರಧಾರ!

ಸರ್ಕಾರ ಬೆಂಗಳೂರು ಅಭಿವೃದ್ಧಿ ಗೊಳಿಸುವ ಕನಸನ್ನು ನನಸು ಮಾಡಲಿದೆ. ಬೆಂಗಳೂರು ಅಭಿವೃದ್ಧಿ ಮಾಡುವ ಕನಸನ್ನು ನನಸು ಮಾಡುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಸುಮನಹಳ್ಳಿಯ ಜಗಜೀವನ್ ರಾಮ್ ನಗರದಲ್ಲಿ ಕೆಂಪೇಗೌಡ ಜಯಂತಿ ಆಚರಿಸಲಾಗುತ್ತಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಮಾನನಿಲ್ದಾಣದ ಬಳಿ ಇರುವ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದಾರೆ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

Download Eedina App Android / iOS

X