ಕೆರಗೋಡು ವಿವಾದ: ಮನೆಗಳ ಮೇಲೆ ಕೇಸರಿ ಬಾವುಟ ಹಾರಿಸುತ್ತಿರುವ ಬಿಜೆಪಿಗರು

Date:

ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಕೇಸರಿ ಧ್ವಜ ತೆಗೆದು, ರಾಷ್ಟ್ರಧ್ವಜ ಹಾರಿಸಿದ್ದರ ವಿರುದ್ಧ ಬಿಜೆಪಿ ಹಾಗೂ ಸಂಘಪರಿವಾರದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ ಸೃಷ್ಠಿಸಿದ ವಿವಾದಕ್ಕೆ ಜೆಡಿಎಸ್‌ ಕೂಡ ಬೆಂಬಲ ನೀಡಿದೆ. ಕೆರಗೋಡು ಗ್ರಾಮ ಪಂಚಾಯತಿಯ ಧ್ವಜಸ್ಥಂಭದಲ್ಲಿ ಕೇಸರಿ ಧ್ವಜವನ್ನೇ ಹಾರಿಸುತ್ತೇವೆಂದು ಕೆಲವು ಹಿಂದುತ್ವ ಕೋಮುವಾದಿ ಕಾರ್ಯಕರ್ತರು ದಂಧಲೆ ನಡೆಸುತ್ತಿದ್ದಾರೆ. ಇದೆಲ್ಲದರ ನಡುವೆ, ಕೆರಗೋಡು ಗ್ರಾಮದ ಬಿಜೆಪಿ ಕಾರ್ಯಕರ್ತರು ತಮ್ಮ ಮನೆಗಳ ಮೇಲೆ ಕೇಸರಿ ಧ್ವಜ ಹಾರಿಸಿದ್ದಾರೆ.

ಜನವರಿ 26ರ ಗಣರಾಜ್ಯೋತ್ಸವದಂದು ಗ್ರಾಮ ಪಂಚಾಯತಿ ಎದುರು ಸರ್ಕಾರಿ ಭೂಮಿಯಲ್ಲಿ ರಾಷ್ಟ್ರಧ್ವಜ ಹಾರಿಸುತ್ತೇವೆಂದು ಅನುಮತಿ ಪಡೆದು, ಅಂದು ಸಂಜೆ ಕೇಸರಿ ಧ್ವಜ ಹಾರಿಸಲಾಗಿತ್ತು. ಅದನ್ನು ತೆರವುಗೊಳಿಸಿದ್ದ ಜಿಲ್ಲಾಡಳಿತ, ರಾಷ್ಟ್ರಧ್ವಜ ಹಾರಿಸಿತ್ತು. ಅದನ್ನು ಬಿಜೆಪಿ ವಿವಾದಗೊಳಿಸಿದ್ದು, ರಾಜಕೀಯ ಲಾಭ ಪಡೆಯಲು ಮುಂದಾಗಿದೆ. ಧ್ವಜಸ್ಥಂಭದಲ್ಲಿ ಕೇಸರಿ ಧ್ವಜ ಹಾರಿಸುತ್ತೇವೆಂದು ಹಿಂದುತ್ವವಾದಿಗಳು ದಾಂಧಲೆ ನಡೆಸುತ್ತಿದ್ದಾರೆ.

ವಿವಾದಕ್ಕೆ ಮತ್ತಷ್ಟು ಪುಷ್ಠಿಕೊಟ್ಟಿರುವ ಬಿಜೆಪಿ, ಮನೆಗಳ ಮೇಲೆ ಕೇಸರಿ ಧ್ವಜ ಹಾರಿಸುವ ಅಭಿಯಾನ ಆರಂಭಿಸಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್ ಕೆರೆಗೋಡು ಗ್ರಾಮದಲ್ಲಿ ಮನೆಗಳ ಮೇಲೆ ಕೇಸರಿ ಧ್ವಜ ಕಟ್ಟಿ ಅಭಿಯಾನ ಶುರು ಮಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮನೆಗಳ ಮೇಲೆ ಕೇಸರಿ ಧ್ವಜ ಕಟ್ಟುವ ಅಭಿಯಾನವನ್ನು ಜಿಲ್ಲೆಯಾದ್ಯಂತ ನಡೆಸುತ್ತೇವೆ” ಎಂದು ಇಂದ್ರೇಶ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದ್ವಿತೀಯ ಪಿಯುಸಿ | ಮೊದಲ ದಿನ 18,231 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು

ರಾಜ್ಯಾದ್ಯಂತ ಮಾರ್ಚ್‌ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನ...

ಬಿಬಿಎಂಪಿ | ನೀರಿನ ಟ್ಯಾಂಕರ್ ಸ್ವಯಂ ನೋಂದಣಿಗೆ ಮಾರ್ಚ್‌ 7 ಕೊನೆ ದಿನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನೀರು ಪೂರೈಕೆ ಮಾಡುವ...

ರಾಮೇಶ್ವರಂ ಕೆಫೆ | ಎನ್‌ಐಎ, ಐಬಿಗೆ ಸ್ಪೋಟದ ಬಗ್ಗೆ ಮಾಹಿತಿ: ಅಲೋಕ್​ ಮೋಹನ್

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಒಟ್ಟು 9 ಮಂದಿ ಗಂಭೀರವಾಗಿ...

ಬೀದರ್‌ | ಕಾಂಗ್ರೆಸ್‌ನಿಂದ ಮಾದಿಗ ಸಮುದಾಯದ ಕಡೆಗಣನೆ: ಫರ್ನಾಂಡಿಸ್‌ ಹಿಪ್ಪಳಗಾಂವ್

2‌023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಮಾದಿಗ ಸಮುದಾಯದ ಒಬ್ಬರಿಗೂ...