ಕೆರಗೋಡು ವಿವಾದ; ಜೆಡಿಎಸ್‌ಗೆ ಮಂಡ್ಯ ಬಿಟ್ಟುಕೊಡದಂತೆ ಬಿಜೆಪಿಗರ ಒತ್ತಾಯ

Date:

Advertisements

ಕೆರಗೋಡಿನಲ್ಲಿ ಧ್ವಜ ವಿವಾದ ಹುಟ್ಟು ಹಾಕಿದ ಬಿಜೆಪಿ, ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ತನ್ನದೇ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು. ಜೆಡಿಎಸ್‌ಗೆ ಮಂಡ್ಯ ಬಿಟ್ಟುಕೊಡದೆ, ಬಿಜೆಪಿಯೇ ಕ್ಷೇತ್ರವನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಬಿಜೆಪಿಗರು ಒತ್ತಾಯಿಸುತ್ತಿದ್ದಾರೆ.

ಕೆರಗೋಡು ಗ್ರಾಮ ಪಂಚಾಯತಿ ಎದುರಿನ ಸರ್ಕಾರಿ ಜಾಗದಲ್ಲಿರುವ ಧ್ವಜಸ್ಥಂಭದಲ್ಲಿ ರಾಷ್ಟ್ರಧ್ವಜ ಹಾರಿಸುತ್ತೇವೆಂದು ಅನುಮತಿ ಪಡೆದಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತರು ಕೇಸರಿ ಧ್ವಜ ಹಾರಿಸಿದ್ದರು. ಅಧಿಕಾರಿಗಳು ಅದನ್ನು ತೆರವುಗೊಳಿಸಿ, ರಾಷ್ಟ್ರಧ್ವಜ ಹಾರಿಸಿದ್ದಾರೆ. ಕೇಸರಿ ಧ್ವಜ ತೆರವುಗೊಳಿಸಿದ್ದನ್ನೇ ದಾಳವಾಗಿಸಿಕೊಂಡಿರುವ ಬಿಜೆಪಿ, ವಿವಾದ ಸೃಷ್ಠಿಸಿ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸುತ್ತಿದೆ.

ಇದೆಲ್ಲದರ ನಡುವೆ, ಮಂಡ್ಯದ ಪಾಂಡವಪುರದಲ್ಲಿ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್‌ ಅವರು ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆ ನಡೆಸಿದ್ದಾರೆ. ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡದೆ, ಬಿಜೆಪಿಯೇ ಪಡೆದುಕೊಳ್ಳಬೇಕೆಂದು ನಾಯಕರ ಮೇಲೆ ಒತ್ತಡ ತರಲು ಜಿಲ್ಲಾ ಬಿಜೆಪಿಗರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

Advertisements

ಮಾಜಿ ಸಚಿವ ನಾರಾಯಣಗೌಡ, ಮಾಜಿ ಶಾಸಕ ಪ್ರೀತಂ ಗೌಡ ಸೇರಿದಂತೆ ಹಲವಾರು ಬಿಜೆಪಿಗರು ಮಂಡ್ಯ ಕ್ಷೇತ್ರವನ್ನು ಬಿಜೆಪಿಯೇ ಪಡೆಯಬೇಕೆಂದು ಹೇಳುತ್ತಿದ್ದಾರೆ. ಹಾಲಿ ಸಂಸದೆ ಸುಮಲತಾ ಅಂಬರೀಶ್‌ ಕೂಡ ಈ ಬಾರಿಯೂ ಮಂಡ್ಯದಲ್ಲೇ ಸ್ಪರ್ಧಿಸುತ್ತೇನೆ ಎನ್ನುತ್ತಿದ್ದು, ಮಂಡ್ಯವನ್ನು ಬಿಜೆಪಿ ಉಳಿಸಿಕೊಳ್ಳಬೇಕು. ಬಿಜೆಪಿಯಿಂದಲೇ ಸ್ಪರ್ಧಿಸುತ್ತೇನೆ ಎಂದು ಪಟ್ಟುಹಿಡಿದ್ದಾರೆ.

ಆದರೆ, ಜಿಲ್ಲೆಯಲ್ಲಿ ತನ್ನದೇ ಪ್ರಾಬಲ್ಯ ಹೊಂದಿರುವ ಜೆಡಿಎಸ್‌, ಏನೇ ಆದರೂ ಮಂಡ್ಯವನ್ನು ತನ್ನ ಪಾಲಿಗೆ ತೆಗೆದುಕೊಳ್ಳಲು ಕಸರತ್ತು ನಡೆಸುತ್ತಿದೆ. ಅಲ್ಲದೆ, ಮಂಡ್ಯದಲ್ಲಿ ಜೆಡಿಎಸ್‌ನಿಂದ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರೇ ಸ್ಪರ್ಧಿಸುತ್ತಾರೆಂಬ ಮಾತುಗಳೂ ಇವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X