ಕೆರಗೋಡು ಧ್ವಜ ವಿವಾದ | ಧ್ವಜ ತೆರವು ವಿಚಾರವಾಗಿ ಸರ್ಕಾರವೇ ನಕಲಿ ದಾಖಲೆ ಸೃಷ್ಟಿಸಿದೆ: ಕುಮಾರಸ್ವಾಮಿ

Date:

ಧ್ವಜ ತೆರವು ವಿಚಾರವಾಗಿ ಸರ್ಕಾರವೇ ನಕಲಿ ದಾಖಲೆ ಸೃಷ್ಟಿಸಿದೆ. ಕೆರಗೋಡಿನ ಬಸ್ ನಿಲ್ದಾಣದ ಧ್ವಜಸ್ತಂಭ ಸ್ಥಾಪನೆಗೆ ಮನವಿ ಮಾಡಿದ್ದ ಗೌರಿ ಶಂಕರ್ ಸೇವಾ ಟ್ರಸ್ಟ್, ಯಾವ ಧ್ವಜ ಅಂತ ಹೇಳಿರಲಿಲ್ಲ. ಅದಕ್ಕೆ ಅನುಮತಿ ನೀಡಲಾಗಿತ್ತು. ಈಗ ಸರ್ಕಾರವೇ ನಕಲಿ ದಾಖಲೆ ಸೃಷ್ಟಿ ಮಾಡಿಕೊಂಡು ಆರೋಪ ಮಾಡುತ್ತಿದೆ ಎಂದು ಮಾಜಿ ಸಿಎಂ ಎಚ್ ಡಿ‌ ಕುಮಾರಸ್ವಾಮಿ ಆರೋಪಿಸಿದರು.

- Advertisement -

ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿ ಸಚಿವ ಎನ್​ ಚಲುವರಾಯಸ್ವಾಮಿ ಮಾಡಿರುವ ಆರೋಪಗಳಿಗೆ ಸುದ್ದಿಗೋಷ್ಠಿ ನಡೆಸಿ ತೀಕ್ಷ್ಣ ತಿರುಗೇಟು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

“ಗೌರಿ ಶಂಕರ್ ಟ್ರಸ್ಟ್​ಗೆ ನವೆಂಬರ್ ತಿಂಗಳಲ್ಲಿ ಅನುಮತಿ ನೀಡಲಾಗಿತ್ತು. ಇಂಥದ್ದೇ ಧ್ವಜ ಎಂದು ಎಲ್ಲಿಯೂ ಉಲ್ಲೇಖಿಸಿರಲಿಲ್ಲ. 2023ರ ಡಿಸೆಂಬರ್ 29ರಂದು ಮತ್ತೆ ಹೊಸ ಅರ್ಜಿ ತೆಗೆದುಕೊಂಡಿದ್ದಾರೆ. ಅದನ್ನು ತಿದ್ದಿಕೊಂಡಿದ್ದಾರೆ. ಇದರಲ್ಲಿ ತ್ರಿವರ್ಣ ಧ್ವಜ, ಕನ್ನಡ ಧ್ವಜ ಹಾಕಲು ಅನುಮತಿ ನೀಡಿದ್ದೇವೆ ಎಂದಿದೆ. ಜನವರಿ ತಿಂಗಳಲ್ಲಿ ಪತ್ರ ಸೃಷ್ಟಿ ಮಾಡಿಕೊಳ್ಳಲಾಗಿದೆ. ಮುಚ್ಚಳಿಕೆಯಲ್ಲಿರುವ ಹೆಸರು, ಅರ್ಜಿಗಳಲ್ಲಿ ಬೇರೆ ಹೆಸರುಗಳು ಇವೆ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ನಿಮ್ಮಿಂದ ಕಲಿಯಬೇಕಾ ಚಲುವರಾಯಸ್ವಾಮಿ ಅವರೇ?

ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರ ವಿನಯಕ್ಕೆ ನಮಸ್ಕಾರ. ನಾನು ನಿಮ್ಮಿಂದ ಕಲಿಯಬೇಕಾ? 200 ಜನ ರೈತರು ಆತ್ಮಹತ್ಯೆ ಮಾಡಿಕೊಂಡರು. ನೀವು ಒಂದು ರೂಪಾಯಿ ಕೂಡ ಬಿಚ್ಚಿಲ್ಲ. ನನ್ನ ದುಡಿಮೆ ಹಣ ಕೊಟ್ಟು ಬಂದಿದ್ದೇನೆ. ಅದೂ ಸಹ ವರ್ಗಾವಣೆ ದಂಧೆಯಿಂದ ಬಂದ‌ ಹಣ ಅಲ್ಲ. ನಿಮ್ಮಿಂದ ವಿನಯ ಕಲಿಯಬೇಕಿಲ್ಲ. ನಾನು ಜಿಲ್ಲೆ ಹಾಳು ಮಾಡೋಕೆ‌ ಬಂದಿದ್ದೇನೆಯೇ? ಮಂಡ್ಯ ಜಿಲ್ಲೆಯ ಜನರ ಸರ್ಟಿಫಿಕೇಟ್‌ ನನ್ನ ಹತ್ರ ಇದೆ” ಎಂದರು.

“ನಾನು ಸೋಮವಾರದ ಭಾಷಣದಲ್ಲಿ ಬೆಂಕಿ‌‌ ಹಚ್ಚಿ‌, ಫ್ಲೆಕ್ಸ್ ಹರಿಯಿರಿ ಅಂತ ಹೇಳಿಲ್ಲ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂಬುದಾಗಿ ಆಗ್ರಹಿಸಿದ್ದೆ ಅಷ್ಟೆ. ಕೆರಗೋಡಿನ ಜನತೆ ಜನವರಿ 26 ರಂದು ರಾಷ್ಟ್ರ ಧ್ವಜ ಹಾರಿಸಿದ್ದಾರೆಯೇ ವಿನಃ ಸರ್ಕಾರ ಅಲ್ಲ. ಕಾಂಗ್ರೆಸ್ ಶಾಸಕರನ್ನು ಕರೆದಿಲ್ಲ ಎಂದು ಈ ಗಲಾಟೆ ಆರಂಭ ಆಗಿದೆ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮ ನೆಲೆ ನಿಂತರೂ ನಿಲ್ಲದ ನಾಟಕ

ಕೇಸರಿ ಶಾಲು ಹಾಕುವುದು ತಪ್ಪೇ?

“ಪಾಪ ಹಳೆಯ ಸ್ನೇಹಿತರು (ಚಲುವರಾಯಸ್ವಾಮಿ) ಹೇಳಿದ್ದಾರೆ, ಕುಮಾರಸ್ವಾಮಿ ಕೇಸರಿ ಶಾಲು‌‌ ಹಾಕಿಕೊಂಡು ಜೆಡಿಎಸ್ ಕಾರ್ಯಕರ್ತರ ಶಕ್ತಿ ಕೊನೆಗೊಳಿಸಲು ಹೊರಟಿದ್ದಾರೆ ಎಂದು. ನಾನು ಕೇಸರಿ ಶಾಲು ಹಾಕಿಕೊಂಡಿದ್ದು ಮಹಾನ್ ಅಪರಾಧವಾ? ಕಾಂಗ್ರೆಸ್​​ನವರಿಗೆ ಕೇಸರಿ ಮೇಲೆ ಯಾಕೆ ಸಂಕುಚಿತ ಮನೋಭಾವ? ಮಂಡ್ಯ ಉಸ್ತುವಾರಿ ಸಚಿವರಿಂದ ನಾನು ನನ್ನ ಪಕ್ಷವನ್ನು ಹೇಗೆ ಉಳಿಸಿಕೊಳ್ಳಬೇಕು ಎಂಬುದನ್ನು ಕಲಿಯಬೇಕಿಲ್ಲ. ನನಗೆ ಜನ ಕೊಟ್ಟಿರುವ ಪ್ರೀತಿ ಇದೆ” ಎಂದು ತಿರುಗೇಟು ನೀಡಿದರು.

“ಕಳೆದ ಎರಡು ದಿನಗಳಿಂದ ಮಂಡ್ಯದಲ್ಲಿ ಆರಂಭ ಆಗಿರುವ ಒಂದು ಘಟನೆಯಿಂದಾಗಿ ಈ‌ ಸರ್ಕಾರದ ಕೆಲ ನಡವಳಿಕೆ ಬಗ್ಗೆ ‌ಮತನಾಡಲೇಬೇಕಿದೆ. ಮಾಜಿ ಸಿಎಂ ದಿ. ದೇವರಾಜ ಅರಸು ಅವರಿಗಿಂತ ಸಿಎಂ ಸಿದ್ದರಾಮಯ್ಯ ಒಂದು ಹೆಜ್ಜೆ ಮುಂದೆ ಹೋಗಿ ಶೋಷಿತರ ಧ್ವನಿಯಾಗಿ ಚಿತ್ರದುರ್ಗದಲ್ಲಿ ಮಾಡಿದ ವೀರಾವೇಷದ ಭಾಷಣ ಕೇಳಿದ್ದೇನೆ. ಮತ್ತೊಂದೆಡೆ, ಮಂಡ್ಯದಲ್ಲಿ ನಮ್ಮ ಹಳೆಯ ಸ್ನೇಹಿತ ಮಾತನಾಡಿರುವುದನ್ನೂ ಕೇಳಿದ್ದೇನೆ. ಮಂಡ್ಯವನ್ನು ಹಾಳು ಮಾಡಲು ಕುಮಾರಸ್ವಾಮಿ ಬಂದಿದ್ದಾರೆ ಎಂದಿದ್ದಾರೆ. ಮಂಡ್ಯದಲ್ಲಿ ನೆಡೆದ ಘಟನೆಗೂ ನನಗೂ ಏನೂ ಸಂಬಂಧ ಎಂದು ಸಿಎಂ ಮತ್ತು ಉಸ್ತುವಾರಿ ಸಚಿವರನ್ನು ಕೇಳುತ್ತೇನೆ. ಬಿಜೆಪಿ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ನಾನು ಕೊನೆ ಹಂತದಲ್ಲಿ ಭಾಗಿಯಾಗಿದ್ದೆ” ಎಂದರು.

“ಮಂಡ್ಯ ಸಕ್ಕರೆ ಕಾರ್ಖಾನೆಗೆ ಹಣ ಬಿಡುಗಡೆ ಮಾಡಿಲ್ಲ ಎಂದು ಚಲುವರಾಯಸ್ವಾಮಿ ದೂರಿದ್ದಾರೆ. ನಾನು ಸಿಎಂ ಆಗಿದ್ದಾಗ ಕಾಂಗ್ರೆಸ್​​ನವರು ಕೆಲಸ ಮಾಡಲು ಬಿಡಲಿಲ್ಲ. ನಮ್ಮ ಕೊಡುಗೆ ಮಂಡ್ಯಗೆ ಏನೂ ಅಂತ ಜನ ನಿರ್ಧಾರ ಮಾಡುತ್ತಾರೆ. ನಿಮ್ಮ ಸರ್ಟಿಫಿಕೇಟ್ ಬೇಕಿಲ್ಲ. ಸೋಮವಾರ ನಡೆದ ಅಹಿತಕರ ಘಟನೆಗೆ ಉಸ್ತುವಾರಿ ಸಚಿವರು ಹಾಗೂ ಕಾಂಗ್ರೆಸ್ ಸರ್ಕಾರವೇ ಕಾರಣ. ಮೊದಲು ನಿಮ್ಮ ಮಂಡ್ಯ ಶಾಸಕರಿಗೆ ಯಾವ ರೀತಿ ನಡೆದುಕೊಳ್ಳಬೇಕು ಎಂದು ಪಾಠ ಮಾಡಿ” ಎಂದು ಕಿಡಿಕಾರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...

ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್ ಟಿಕೆಟ್ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ!

ಕರ್ನಾಟಕದಲ್ಲಿ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಣ್ಣಗಾಗುವ ಮುನ್ನವೇ,...