ಕೆರಗೋಡು ಧ್ವಜ ವಿವಾದ: ಫೆ.7ರಂದು ಕರೆ ಕೊಟ್ಟಿದ್ದ ಮಂಡ್ಯ ಬಂದ್‌ ವಾಪಸ್‌

Date:

ಸಂಘಪರಿವಾರ, ಬಿಜೆಪಿ ರಾಜಕೀಯಕ್ಕಾಗಿ ಸೃಷ್ಟಿಸಿದ್ದ ಕೆರಗೋಡು ಧ್ವಜ ವಿವಾದವನ್ನು ಖಂಡಿಸಿ ಮಂಡ್ಯದ ಸಮಾನ ಮನಸ್ಕರ ವೇದಿಕೆ  ಫೆಬ್ರವರಿ 7ರಂದು ಮಂಡ್ಯ ಬಂದ್‌ಗೆ ಕರೆಕೊಟ್ಟಿತ್ತು. ಇದೀಗ, ಬಂದ್‌ಅನ್ನು ಹಿಂಪಡೆದಿದೆ. ಮಂಡ್ಯ ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿರುವ ವೇದಿಕೆ ಬಂದ್‌ ಕರೆಯನ್ನು ಹಿಂಪಡೆದಿದೆ ಎಂದು ವರದಿಯಾಗಿದೆ.

ಕೆರಗೋಡು ಗ್ರಾಮ ಪಂಚಾಯತಿ ಎದುರಿನ ಧ್ವಜಸ್ಥಂಭದಲ್ಲಿ ರಾಷ್ಟ್ರಧ್ವಜ ಹಾರಿಸುವಾಗಿ ಅನುಮತಿ ಪಡೆದಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತರು ಕೇಸರಿ ಧ್ವಜ ಹಾರಿಸಿದ್ದರು. ಅದನ್ನು ತೆರವುಗೊಳಿಸಿ ಅಧಿಕಾರಿಗಳು ರಾಷ್ರಧ್ವಜ ಹಾರಿಸಿದ್ದರು. ಕೇಸರಿ ಧ್ವಜ ತೆರವುಗೊಳಿಸಿದ್ದನ್ನು ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿ, ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸಿತ್ತು. ಅಲ್ಲದೆ, ಫೆ.9ಕ್ಕೆ ಮಂಡ್ಯ ಬಂದ್‌ಗೆ ಹಿಂದುತ್ವ ಕೋಮುವಾದಿ ಸಂಘಟನೆಗಳು ಕರೆಕೊಟ್ಟಿವೆ. ಹಿಂದುತ್ವವಾದಿಗಳ ಬಂದ್‌ ವಿರೋಧಿಸಿ ಸಮಾನ ಮನಸ್ಕರ ವೇದಿಕೆ ಫೆ.7ರಂದು ಮಂಡ್ಯ ಬಂದ್‌ಗೆ ಕರೆಕೊಟ್ಟಿತ್ತು.

ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ್, ಎಸ್‌ಪಿ ಎನ್ ಯತೀಶ್ ನೇತೃತ್ವದಲ್ಲಿ ಸಭೆ ನಡೆದಿದೆ. ಬಂದ್‌ನಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ, ವ್ಯಾಪಾರಿಗಳಿಗೆ ತೊಂದೆರೆಯಾಗುತ್ತದೆ. ಬಂದ್‌ ಮಾಡುವುದು ಬೇಡವೆಂದು ಜಿಲ್ಲಾಡಳಿತ ಮನವಿ ಮಾಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿರುವ ವೇದಿಕೆ, ‘ಫೆ.9ರ ಬಂದ್‌ಗೆ ಅವಕಾಶ ಕೊಡಬಾರದು. ಒಂದು ವೇಳೆ, ಅಂದು ಹಿಂದುತ್ವವಾದಿಗಳು ಬಂದ್‌ ಮಾಡಿದರೆ, ಮತ್ತೊಂದು ದಿನ ಬಂದ್‌ ಮಾಡುತ್ತೇವೆ’ ಎಂಬ ಶರತ್ತಿನ ಮೇಲೆ ಬಂದ್‌ ಕರೆಯನ್ನು ಹಿಂಪಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂಡಿಯಾ ಒಕ್ಕೂಟಕ್ಕೆ ಹೆದರಿ ಅರವಿಂದ್ ಕೇಜ್ರಿವಾಲ್‌ ಬಂಧಿಸಲು ಕೇಂದ್ರದಿಂದ ಸಂಚು: ಮೋಹನ್ ದಾಸರಿ

"ಇಂಡಿಯಾ ಒಕ್ಕೂಟದಲ್ಲಿ ಎಎಪಿ-ಕಾಂಗ್ರೆಸ್ ನಡುವೆ ಲೋಕಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆ ಪ್ರಕ್ರಿಯೆ...

ಮಂಡ್ಯ | ನನಗೆ ಬೇರೆಡೆ ಟಿಕೆಟ್​ ಪಡೆಯುವುದು ಕಷ್ಟವಲ್ಲ: ಸುಮಲತಾ ಅಂಬರೀಶ್

ನಿನ್ನೆ(ಫೆ.22) ದೆಹಲಿಯಲ್ಲಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ...

ರೈಲಿಗೆ ಬೆಂಕಿ ಹಚ್ಚಿ ಸುಡುತ್ತೇವೆ ಎಂದವರನ್ನು ಒದ್ದು ಒಳಗೆ ಹಾಕಬೇಕು: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಅಯೋಧ್ಯೆಯ ರಾಮ ಮಂದಿರಕ್ಕೆ ತೆರಳುತ್ತಿದ್ದ ರೈಲಿಗೆ ಹೊಸಪೇಟೆಯಲ್ಲಿ ಬೆಂಕಿ ಹಚ್ಚಿ ಸುಡುತ್ತೇವೆ...

ವಿಪಕ್ಷ ನಾಯಕ ಸ್ಥಾನದಿಂದ ಅಶೋಕ್‌ರನ್ನು ಕೆಳಗಿಳಿಸಿ: ಬಿಜೆಪಿ ರಾಜ್ಯಾಧ್ಯಕ್ಷರಿಗೆ ಬಜರಂಗದಳ ಒತ್ತಾಯ

ಬಜೆಟ್ ಅಧಿವೇಶನದ ವೇಳೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್,...