ಕೆರಗೋಡು ಧ್ವಜ ವಿವಾದ: ಜನರ ವಿರೋಧ ಅರಿತು ಬಿಜೆಪಿ-ಜೆಡಿಎಸ್‌ ಹಿಂದೆ ಸರಿದಿವೆ: ಸಚಿವ ಚಲುವರಾಯಸ್ವಾಮಿ

Date:

ಕೆರಗೋಡು ಧ್ವಜ ವಿವಾದದಲ್ಲಿ ಸಂಘಪರಿವಾರದ ನಡೆಗೆ ಮಂಡ್ಯದ ಜನರು ವಿರುದ್ಧವಿದ್ದಾರೆ. ಇದು ಅರ್ಥವಾದ ಮೇಲೆ ಮಂಡ್ಯ ಬಂದ್‌ನಿಂದ ಬಿಜೆಪಿ, ಜೆಡಿಎಸ್‌ ಹಿಂದೆ ಸರಿದಿವೆ. ಜೆಡಿಎಸ್‌ ಸಂಪೂರ್ಣವಾಗಿ ದೂರ ಉಳಿದರೆ, ಬಿಜೆಪಿ ನಾಮ್ ಕೆ ವಾಸ್ತೆಗೆ ಪ್ರತಿಭಟನೆ ನಡೆಸಿದೆ ಎಂದು ಬಿಜೆಪಿ-ಜೆಡಿಎಸ್‌ ವಿರುದ್ಧ ಕೃಷಿ ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

- Advertisement -

ಮಂಡ್ಯದಲ್ಲಿ ಮಾತನಾಡಿದ ಅವರು, “ಕೇಸರಿ ಧ್ವಜ ವಿವಾದದಲ್ಲಿ ರಾಜಕೀಯ ಲಾಭ ಪಡೆಯಲು ಬಿಜೆಪಿ-ಜೆಡಿಎಸ್‌ ಯತ್ನಿಸಿದ್ದವು. ಅದರೆ, ಜಿಲ್ಲೆಯ ಜನರು ಅದಕ್ಕೆ ವಿರುದ್ಧವಿದ್ದಾರೆ. ಬಂದ್‌ಗೆ ಬೆಂಬಲ ವ್ಯಕ್ತವಾಗಿಲ್ಲ. ಬಿಜೆಪಿಗರು ಬೈಕ್ ರ್‍ಯಾಲಿ ಮಾಡಿದ್ದಾರೆ. ಎಷ್ಟು ಸಾವಿರ ಜನ ಬಂದಿದ್ದರೋ ನಮಗೆ ಲೆಕ್ಕವಿಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ರಾಷ್ಟ್ರಧ್ವಜದ ವಿರುದ್ಧ ಬಿಜೆಪಿಗರು ಘೋಷಣೆ ಕೂಗಿದ್ದಾರೆ. ಕೇಸರಿ ಧ್ವಜ ಹಾರಿಸಲು ಬೇರೆ ಜಾಗ ಇದೆ. ನಮ್ಮ ಮೊದಲನೇ ಆದ್ಯತೆ ರಾಷ್ಟ್ರ, ಸಂವಿಧಾನ, ಪ್ರಜಾಪ್ರಭುತ್ವ. ಆದರೆ, ಕೇಸರಿ ಧ್ವಜ ಹಾರಿಸಿ, ಬಿಜೆಪಿ-ಜೆಡಿಎಸ್‌ ತಪ್ಪು ಮಾಡಿವೆ. ಅವರಿಗೆ ಜನರು ಉತ್ತರ ಕೊಡಬೇಕು” ಎಂದಿದ್ದಾರೆ.

“ಮಂಡ್ಯದಲ್ಲಿ ಧರ್ಮಗಳ ನಡುವಿನ ಘರ್ಷಣೆಗೆ ಅವಕಾಶವಿಲ್ಲ. ಇದು ಕುವೆಂಪು ಅವರನ್ನು ಪ್ರೀತಿಸುವ ಜಿಲ್ಲೆ. ಪ್ರಚೋದನೆಗೆ ಇಲ್ಲಿನ ಜನರು ಬಲಿಯಾಗುವುದಿಲ್ಲ. ಮೊನ್ನೆ ದೇವೇಗೌಡರು ಕೇಸರಿ ಶಾಲು ಹಾಕಿದ್ದು ತಪ್ಪು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ-ಜೆಡಿಎಸ್‌ ತಮ್ಮ ತಪ್ಪು ಒಪ್ಪಿಕೊಳ್ಳಲಾಗದೆ, ವ್ಯರ್ಥ ಬಂದ್‌ ಮಾಡಿದ್ದಾರೆ. ಅವರಿಗೆ ಜನರ ಉತ್ತರ ಕೊಡುತ್ತಾರೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...