ಕೇರಳ | ಸಿಪಿಐ(ಎಂ) ಶಾಸಕನಿಗೆ ಕಚೇರಿ ಖಾಲಿ ಮಾಡುವಂತೆ BJP ಕೌನ್ಸಿಲರ್ ತಾಕೀತು

Date:

ತಿರುವನಂತಪುರದ ವಟ್ಟಿಯೂರ್ಕಾವು ಕ್ಷೇತ್ರದ ಶಾಸಕ ವಿ.ಕೆ ಪ್ರಶಾಂತ್ ಅವರಿಗೆ ತಮ್ಮ ಕಚೇರಿಯನ್ನು ಖಾಲಿ ಮಾಡುವಂತೆ ಬಿಜೆಪಿ ಕೌನ್ಸಿಲರ್ ಆರ್ ಶ್ರೀಲೇಖಾ ಅವರು ದುಂಬಾಲು ಬಿದಿದ್ದಾರೆ ಎಂದು ಆರೋಪಿಸಲಾಗಿದೆ. ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ತಿರುವನಂತಪುರಂ ಪುರಸಭೆಯಲ್ಲಿ ಬಿಜೆಪಿ ಗೆಲುವು ಸಾಧಿಸಿ, ಅಧಿಕಾರ ಹಿಡಿದಿದೆ. ಈ ಬೆನ್ನಲ್ಲೇ, ಸಿಪಿಐ(ಎಂ) ಶಾಸಕ ಪ್ರಶಾಂತ್ ಅವರಿಗೆ ಬಿಜೆಪಿ ಕೌನ್ಸಿಲರ್ ಕಚೇರಿ ತೆರವಿಗೆ ತಾಕೀತು ಮಾಡಿದ್ದಾರೆ.

- Advertisement -

ನಿವೃತ್ತ ಡಿಜಿಪಿ ಶ್ರೀಲೇಖಾ ಅವರು ಇತ್ತೀಚೆಗೆ ನಡೆದ ತಿರುವನಂತಪುರಂ ಪುರಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ...

ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ ಕನಿಷ್ಠ ರೂ.5,500 ಬೆಂಬಲ ಬೆಲೆ ನಿಗದಿಪಡಿಸಲು ಮತ್ತು ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ರೂ.31ರಿಂದ 60ಕ್ಕೆ ಏರಿಕೆ ಮಾಡಿ ವಾಣಿಜ್ಯ...

ವಟ್ಟಿಯೂರ್ಕಾವು ಶಾಸಕ ವಿ.ಕೆ ಪ್ರಶಾಂತ್ ಅವರು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದು, “ಬಿಜೆಪಿ ಕೌನ್ಸಿಲರ್ ಆರ್ ಶ್ರೀಲೇಖಾ ಅವರು ದೂರವಾಣಿ ಮೂಲಕ ನನಗೆ ಕರೆ ಮಾಡಿದ್ದರು. ಸಾಸ್ತಮಂಗಲಂನಲ್ಲಿರುವ ಕಾರ್ಪೊರೇಷನ್ ಕಟ್ಟಡದಲ್ಲಿರುವ ನನ್ನ ಕಚೇರಿಯನ್ನು ಖಾಲಿ ಮಾಡುವಂತೆ ಅವರು ದುಂಬಾಲು ಬಿದಿದ್ದಾರೆ” ಎಂದು ಆರೋಪಿಸಿದ್ದಾರೆ.

“ನನ್ನ ಕಚೇರಿಯನ್ನು ಖಾಲಿ ಮಾಡುವಂತೆ ಅವರು ನನಗೆ ಕರೆ ಮಾಡಿದ್ದಾರೆ. ಅದೇ ಕಟ್ಟಡದಲ್ಲಿರುವ ಕೌನ್ಸಿಲರ್ ಕಚೇರಿಯಲ್ಲಿ ಸಾಕಷ್ಟು ಸೌಲಭ್ಯಗಳಿಲ್ಲ. ಹೀಗಾಗಿ, ಅವರು ನಮ್ಮ ಕಚೇರಿಯನ್ನು ಆಕ್ರಮಿಸಿಕೊಳ್ಳಲು ಹವಣಿಸುತ್ತಿದ್ದಾರೆ” ಎಂದು ಪ್ರಶಾಂತ್ ಹೇಳಿದ್ದಾರೆ.

“ಕಳೆದ ಏಳು ವರ್ಷಗಳಿಂದ ತಾವು ಅದೇ ಕಟ್ಟಡದಲ್ಲಿ ನನ್ನ ಶಾಸಕರ ಕಚೇರಿ ಕಾರ್ಯನಿರ್ವಹಿಸುತ್ತಿದೆ. ಈ ಹಿಂದೆ ಬಿಜೆಪಿ ಕೌನ್ಸಿಲರ್ ಕೂಡ ಅದೇ ಕಟ್ಟಡದ ಒಂದು ಭಾಗವನ್ನು ಕಚೇರಿಯಾಗಿ ಬಳಸುತ್ತಿದ್ದರು” ಎಂದು ಪ್ರಶಾಂತ್ ವಿವರಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ವಿಜಯ್ ಕೊನೆಯ ಚಿತ್ರ ‘ಜನ ನಾಯಗನ್’ ಮತ್ತು ತಮಿಳುನಾಡಿನ ರಾಜಕಾರಣ

ಒಂದು ವೇಳೆ, ನಾನು ಕಚೇರಿ ಖಾಲಿ ಮಾಡಬೇಕೆಂದರೆ, ಕಾರ್ಯವಿಧಾನದ ಪ್ರಕಾರ ನಿಗಮ ಕಾರ್ಯದರ್ಶಿಯಿಂದ ತೆರವು ನೋಟಿಸ್ ಕೊಡಬೇಕು. ಆದರೆ, ಬಿಜೆಪಿ ಕೌನ್ಸಿಲರ್ ನೇರವಾಗಿ ನನಗೆ ಕರೆ ಮಾಡಿ, ಖಾಲಿ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಇದು, ಪೊಲೀಸ್‌ ಠಾಣೆಯ ಮೆಟ್ಟಿಲೇರುವ ವಿಷಯಗಳನ್ನು ನಿಭಾಯಿಸುವ ರೀತಿಯಲ್ಲಿದೆ” ಎಂದು ಪ್ರಶಾಂತ್ ಹೇಳಿದ್ದಾರೆ.

“ಅವರು ನನ್ನನ್ನು ಸಂಪರ್ಕಿಸುವ ಮೊದಲು ಇತರರೊಂದಿಗೆ ಸಮಾಲೋಚಿಸಿರಬಹುದು. ಮುಂದಿನ ವರ್ಷ (2026) ಮಾರ್ಚ್ ವರೆಗೆ ಜಾಗವನ್ನು ನನಗೆ ಮಂಜೂರು ಮಾಡಲಾಗಿದೆ. ಅದಕ್ಕೂ ಮೊದಲು ಅದನ್ನು ಖಾಲಿ ಮಾಡಲು ಸಾಧ್ಯವಿಲ್ಲ. ಅವರು ತಕ್ಷಣದ ತೆರವು ಬಯಸಿದರೆ, ಅವರು ಕಾನೂನು ಕ್ರಮಗಳನ್ನು ಅನುಸರಿಸಲಿ. ನಾವು ಕಾನೂನುಬದ್ಧವಾಗಿ ಎದುರಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಫಾರ್ಮ್-6 ಹೆಚ್ಚುವರಿ ನಿಯಮ ಹಿಂಪಡೆದ ಚುನಾವಣಾ ಆಯೋಗ; ಆದರೆ, ಪೂರ್ಣ ವಿನಾಯಿತಿಯಲ್ಲ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಹೊಸ ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ಸಂಕೀರ್ಣ ಕಾಗದಪತ್ರಗಳ ಕಟ್ಟುನಿಟ್ಟಿನ...

​’ಇದು ಶತಮಾನದ ಅತಿ ದೊಡ್ಡ ನಾಟಕ’: ನಿರ್ಮಲಾ ಸೀತಾರಾಮನ್ ಸಿಟಿ ಬಸ್ ಪ್ರಯಾಣಕ್ಕೆ ನೆಟ್ಟಿಗರ ಕಟು ಟೀಕೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವ...

ದೇಶ ಹಾದಿ ತಪ್ಪಿದೆ; ಮತ್ತೆ ಸರಿ ದಾರಿಗೆ ಬರುವ ಶಕ್ತಿ ಭಾರತಕ್ಕಿದೆ: ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ ಜೋಶಿ

"ಪ್ರಸ್ತುತ ಪರಿಸ್ಥಿತಿಯಲ್ಲಿ ದೇಶ ತನ್ನ ಹಾದಿಯನ್ನು ಕಳೆದುಕೊಂಡಿದೆ ಎಂದು ನನಗೆ ಅನಿಸುತ್ತದೆ....