ರಷ್ಯಾ-ಉಕ್ರೇನ್ ಯುದ್ಧದ ಮಧ್ಯೆ ಸಿಲುಕಿರುವ ಯುವಕರನ್ನು ಕರೆತನ್ನಿ: ಕೇಂದ್ರಕ್ಕೆ ಕೇರಳ ವಿಪಕ್ಷ ನಾಯಕನ ಆಗ್ರಹ

Date:

ಖಾಸಗಿ ಏಜೆನ್ಸಿಗಳಿಂದ ರಷ್ಯಾದ ಸೇನೆಗೆ ನೇಮಕಗೊಂಡಿರುವ ಭಾರತೀಯ ಯುವಕರನ್ನು ಸುರಕ್ಷಿತವಾಗಿ ಮರಳಿ ಕರೆ ತರುವಂತೆ ಕೇಂದ್ರ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಬೇಕು ಎಂದು ಕೋರಿ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ ಡಿ ಸತೀಶನ್ ಸೋಮವಾರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ.

“ಯುದ್ಧ ವಲಯದಲ್ಲಿ ಸಿಲುಕಿರುವ ಕೇರಳದ ಮೂವರು ಯುವಕರು ಸುರಕ್ಷಿತವಾಗಿ ಮರಳುವಂತೆ ಮಾಡಲು ಕ್ರಮ ಕೈಗೊಳ್ಳಬೇಕು. ಮಾನವ ಕಳ್ಳಸಾಗಣೆ ಜಾಲದ ಭಾಗವಾಗಿರುವ ನೇಮಕಾತಿ ಏಜೆನ್ಸಿಗಳ ವಿರುದ್ಧ ತನಿಖೆ ನಡೆಸಬೇಕು” ಎಂದು ಕಾಂಗ್ರೆಸ್ ನಾಯಕ ಪತ್ರದಲ್ಲಿ ಒತ್ತಾಯಿಸಿದ್ದಾರೆ.

“ಕೇರಳದ ಕೆಲವು ಖಾಸಗಿ ನೇಮಕಾತಿ ಕಂಪನಿಗಳು ರಷ್ಯಾದಲ್ಲಿ ಲಾಭದಾಯಕ ಉದ್ಯೋಗಾವಕಾಶಗಳನ್ನು ನೀಡುವುದಾಗಿ ಆಮಿಷವೊಡ್ಡಿ, ಯುದ್ಧ ಪೀಡಿತ ಉಕ್ರೇನ್‌ಗೆ ಕಳುಹಿಸಲು ಯುವಕರನ್ನು ಬಹಿರಂಗವಾಗಿ ನೇಮಕ ಮಾಡಿಕೊಳ್ಳುತ್ತಿರುವುದು ಆಘಾತಕಾರಿಯಾಗಿದೆ” ಎಂದು ಸತೀಶನ್ ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ರಷ್ಯಾದಲ್ಲಿ ಲಾಭದಾಯಕ ಉದ್ಯೋಗದ ಭರವಸೆಯ ಆಮಿಷಕ್ಕೆ ಒಳಗಾಗಿ ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವವರಲ್ಲಿ ಕೇರಳದ ಮೂವರು ಯುವಕರೂ ಸೇರಿದ್ದಾರೆಂಬುದನ್ನು ತಿಳಿದು ಆತಂಕವಾಗಿದೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

“ನೇಮಕಾತಿ ಏಜೆನ್ಸಿಯು 2.5 ಲಕ್ಷ ಸಂಬಳ ನೀಡುವುದಾಗಿ ಭರವಸೆ ನೀಡಿ, ಕೇರಳದ ಯುವಕರನ್ನು ರಷ್ಯಾಕ್ಕೆ ಕರೆದೊಯ್ದಿರುವುದಾಗಿ ಅವರ ಸಂಬಂಧಿಕರು ತಿಳಿಸಿದ್ದಾರೆ” ಎಂದು ವಿ ಡಿ ಸತೀಶನ್ ಪತ್ರದಲ್ಲಿ ತಿಳಿಸಿದ್ದಾರೆ.

“ಯುವಕರು ರಷ್ಯಾಕ್ಕೆ ತೆರಳಿದ ವೇಳೆ ಅವರ ಪಾಸ್‌ಪೋರ್ಟ್‌ ಮತ್ತು ಮೊಬೈಲ್ ಫೋನ್‌ಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದು, ಉಕ್ರೇನ್ ವಿರುದ್ಧ ರಷ್ಯಾಕ್ಕಾಗಿ ಹೋರಾಡಲು ಒತ್ತಾಯಿಸಿದ್ದಾರೆ. ಅವರಲ್ಲಿ ಕೆಲವರು ಗಾಯಗೊಂಡಿದ್ದಾರೆ. ಯುವಕರ ಸುರಕ್ಷತೆಯ ಬಗ್ಗೆ ಆತಂಕವಿದೆ” ಎಂದು ಸತೀಶನ್ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿಗೆ ಈಗಲೂ ಕೇಜ್ರಿವಾಲ್ ಬಹಳ ಅಪಾಯಕಾರಿ: ಸಂಸದ ಸಂಜಯ್ ರಾವತ್

“ರಷ್ಯಾದಲ್ಲಿ ಕೆಲಸ ಮಾಡಲು ಯುವಕರನ್ನು ಪ್ರೇರೇಪಿಸಿದ್ದು, ಬಳಿಕ ಅವರನ್ನು ಯುದ್ಧಕ್ಕೆ ಕಳುಹಿಸುವ ಕಳ್ಳಸಾಗಣೆ ಜಾಲದ ಭಾಗವಾಗಿದೆ” ಎಂದು ಕಾಂಗ್ರೆಸ್ ನಾಯಕ ಸತೀಶನ್ ಆರೋಪಿಸಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ | ಸಚಿವ ಬಿ.ನಾಗೇಂದ್ರ ವಜಾಗೊಳಿಸಿ: ಪ್ರಲ್ಹಾದ್‌ ಜೋಶಿ ಆಗ್ರಹ

ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ...

ಪಪುವಾ ನ್ಯೂಗಿನಿಗೆ 1 ಮಿಲಿಯನ್ ಡಾಲರ್ ನೆರವು ಘೋಷಿಸಿದ ಭಾರತ

ಬೃಹತ್‌ ಪ್ರಮಾಣದ ಭೂಕುಸಿತದಿಂದ ಅಪಾರ ಪ್ರಮಾಣದ ಸಾವು ನೋವಿನ ನಷ್ಟ ಅನುಭವಿಸಿರುವ...

ಪಠ್ಯಪುಸ್ತಕ ಪರಿಷ್ಕರಣೆ | ಕೆಲವು ಪದ ಮತ್ತು ವಾಕ್ಯಗಳಲ್ಲಷ್ಟೇ ಬದಲಾವಣೆ: ಸಚಿವ ಮಧು ಬಂಗಾರಪ್ಪ

"ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳಲ್ಲಿ ಮಕ್ಕಳು ಯಾವುದೇ ತೊಂದರೆ ಇಲ್ಲದಂತೆ ತೊಡಗಿಸಿಕೊಳ್ಳಲು...