ಎಲ್‌2: ಎಂಪುರಾನ್‌ ಸಿನಿಮಾವನ್ನು ಶ್ಲಾಘಿಸಿದ ಕೇರಳ ಸಿಎಂ ಪಿಣರಾಯಿ; ಸಂಘಪರಿವಾರದ ವಿರುದ್ಧ ಆಕ್ರೋಶ

Date:

Advertisements

ಮಲಯಾಳಂ ಹಿರಿಯ ನಟ ಮೋಹನ್ ಲಾಲ್ ಅಭಿನಯದ ಎಲ್‌2: ಎಂಪುರಾನ್‌ ಚಿತ್ರಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬೆಂಬಲ ವ್ಯಕ್ತಪಡಿಸಿದ್ದಾರೆ. “ಕೋಮುವಾದದ ವಿರುದ್ಧ ಈ ಸಿನಿಮಾದ ನಿರ್ಮಾಪಕರು ಅಳವಡಿಸಿಕೊಂಡ ನಿಲುವಿನ ಬಗ್ಗೆ ಸಂಘ ಪರಿವಾರ ‘ಭಯದ ವಾತಾವರಣ’ ಸೃಷ್ಟಿಸುತ್ತಿದೆ” ಎಂದು ಆರೋಪಿಸಿದ್ದಾರೆ.

ಮೋಹನ್ ಲಾಲ್ ನಟನೆಯ, ಪೃಥ್ವಿರಾಜ್ ಸುಕುಮಾರನ್ ನಿರ್ದೇಶಿಸಿದ ಇತ್ತೀಚಿನ ಮಲಯಾಳಂ ಸಿನಿಮಾ ಎಲ್‌2: ಎಂಪುರಾನ್‌ನಲ್ಲಿ ಗುಜರಾತ್ ಹತ್ಯಾಕಾಂಡಕ್ಕೆ ಸಂಬಂಧಿಸಿದ ದೃಶ್ಯಗಳಿವೆ ಎಂಬ ಕಾರಣಕ್ಕೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರೋಧ ವ್ಯಕ್ತಪಡಿಸಿದೆ. ಈ ಬೆನ್ನಲ್ಲೇ ಸಿನಿಮಾ ತಂಡ 17 ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಧರಿಸಿದೆ.

ಇದನ್ನು ಓದಿದ್ದೀರಾ? ಗುಜರಾತ್ ಗಲಭೆ ಉಲ್ಲೇಖ ವಿವಾದ; ಎಲ್‌2: ಎಂಪುರಾನ್‌ ಸಿನಿಮಾದ 17 ದೃಶ್ಯಗಳಿಗೆ ಕತ್ತರಿ

Advertisements

ಈ ನಡುವೆ ಪಿಣರಾಯಿ ವಿಜಯನ್ ಸಿನಿಮಾವನ್ನು ಶ್ಲಾಘಿಸಿದ್ದಾರೆ. “ಈ ಸಿನಿಮಾವು ದೇಶ ಕಂಡ ಅತ್ಯಂತ ಕ್ರೂರ ನರಮೇಧಗಳಲ್ಲಿ ಒಂದನ್ನು ಉಲ್ಲೇಖಿಸಿದೆ. ಇದು ಸಂಘ ಪರಿವಾರ ಮತ್ತು ಅದರ ಮಾಸ್ಟರ್‌ಮೈಂಡ್‌ಗಳನ್ನು ಕೆರಳಿಸಿದೆ” ಎಂದು ಆರೋಪಿಸಿದ್ದಾರೆ.

ಶನಿವಾರ ಸಂಜೆ ಮಲ್ಟಿಪ್ಲೆಕ್ಸ್ ಥಿಯೇಟರ್‌ನಲ್ಲಿ ಪೃಥ್ವಿರಾಜ್ ನಿರ್ದೇಶನದ ಚಿತ್ರವನ್ನು ತಮ್ಮ ಕುಟುಂಬ ಸದಸ್ಯರೊಂದಿಗೆ ವೀಕ್ಷಿಸಿದ ಸಿಎಂದ ಒಂದು ದಿನದ ನಂತರ ಈ ಹೇಳಿಕೆಯನ್ನು ನೀಡಿದ್ದಾರೆ.

ಮಲಯಾಳಂ ಚಲನಚಿತ್ರೋದ್ಯಮವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಚಿತ್ರ ಎಂಪುರಾನ್ ಎಂದು ಶ್ಲಾಘಿಸಿರುವ ವಿಜಯನ್, ಸಂಘ ಪರಿವಾರ ಚಿತ್ರ, ಅದರ ನಟರು ಮತ್ತು ಸಿಬ್ಬಂದಿಯ ವಿರುದ್ಧ ವ್ಯಾಪಕ ದ್ವೇಷದ ಅಭಿಯಾನ ನಡೆಸಿದ ಕಾರಣ ಈ ಸಿನಿಮಾವನ್ನು ವೀಕ್ಷಿಸಿದ್ದೇನೆ ಎಂದು ಹೇಳಿದರು.

“ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ನಾಯಕರು ಸಿನಿಮಾದ ನಿರ್ಮಾಪಕರ ವಿರುದ್ಧ ಸಾರ್ವಜನಿಕ ಬೆದರಿಕೆಗಳನ್ನು ಹಾಕುತ್ತಿದ್ದಾರೆ. ಈ ಒತ್ತಡದಲ್ಲಿ ನಿರ್ಮಾಪಕರು ಚಿತ್ರವನ್ನು ಮರು ಸೆನ್ಸಾರ್ ಮಾಡಲು ಮತ್ತು ಸಂಪಾದಿಸಲು ಒತ್ತಾಯಿಸಲಾಗುತ್ತಿದೆ ಎಂದು ವರದಿಗಳು ಬಂದಿವೆ. ಸಂಘ ಪರಿವಾರ ಸೃಷ್ಟಿಸಿರುವ ಈ ಭಯದ ವಾತಾವರಣ ಕಳವಳಕಾರಿ ವಿಷಯವಾಗಿದೆ” ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಚಿನ್ನ ಕಳ್ಳಸಾಗಣೆ ಆರೋಪ: ಕನ್ನಡ ಸಿನಿಮಾ ನಟಿ ರನ್ಯಾ ಬಂಧನ

“ಕೋಮುವಾದದ ವಿರುದ್ಧ ನಿಲುವು ತೆಗೆದುಕೊಂಡು ಅದರ ಭಯಾನಕತೆಯನ್ನು ಚಿತ್ರಿಸಿದ್ದಾರೆ ಎಂಬ ಕಾರಣಕ್ಕಾಗಿ ಕೋಮುವಾದಿಗಳು ಕಲೆಯನ್ನು ನಾಶಮಾಡಲು, ಕಲಾವಿದರ ಮೇಲೆ ಕ್ರೂರವಾಗಿ ದಾಳಿ ಮಾಡಲು ಮುಂದಾಗುವುದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ” ಎಂದರು.

“ಪ್ರಜಾಪ್ರಭುತ್ವ ಸಮಾಜದಲ್ಲಿ, ನಾಗರಿಕರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸಬೇಕು. ಸಿನಿಮಾ ನಿಷೇಧಿಸುವಂತದ್ದು ಫ್ಯಾಸಿಸ್ಟ್ ಮನಸ್ಥಿತಿಯ ಹೊಸ ಅಭಿವ್ಯಕ್ತಿ. ಇದು ಪ್ರಜಾಪ್ರಭುತ್ವ ಹಕ್ಕುಗಳ ಉಲ್ಲಂಘನೆ” ಎಂದು ಹೇಳಿದರು.

‘ಬಾಬಾ ಬಜರಂಗಿ’ ಎಂದು ಕರೆಯಲ್ಪಡುವ ಎದುರಾಳಿ (ವಿಲನ್) ಪಾತ್ರದ ಹೆಸರನ್ನು ಮರುನಾಮಕರಣ ಮಾಡಲು ತೀರ್ಮಾನಿಸಲಾಗಿದೆ ಎಂದು ವರದಿಯಾಗಿದೆ. 2002ರಲ್ಲಿ ಗುಜರಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿಯಾಗಿದ್ದಾಗ ಕೋಮು ಹಿಂಸಾಚಾರ ನಡೆದಿದೆ. ಈ ಹಿಂಸಾಚಾರವನ್ನು ಹೋಲುವ ದೃಶ್ಯಗಳು ಸಿನಿಮಾದಲ್ಲಿದೆ ಎಂಬ ಕಾರಣಕ್ಕೆ ಬಿಜೆಪಿ, ಆರ್‌ಎಸ್‌ಎಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಮಾರ್ಚ್‌ 27ರಂದು ಸಿನಿಮಾ ಬಿಡುಗಡೆಯಾಗಿದ್ದು, ಗುಜರಾತ್ ಗಲಭೆ ಹೋಲುವ ಚಿತ್ರಣವಿದ್ದ ಕಾರಣ ಕೆಲವು ದೃಶ್ಯಗಳು ಕಾಲ್ಪನಿಕ ಎಂದು ಉಲ್ಲೇಖಿಸಿದೆ. ಆದರೆ ಬಲರಾಜ್ ಪಟೇಲ್ ಯಾನೆ ಬಾಬಾ ಬಜರಂಗಿ ಎಂಬ ಪಾತ್ರವು ಬಾಬುಭಾಯಿ ಪಟೇಲ್ ಅಲಿಯಾಸ್ ಬಾಬು ಬಜರಂಗಿಗೆ ಹೋಲುವ ಕಾರಣದಿಂದಾಗಿ ಬಲಪಂಥೀಯರು ತೀವ್ರ ವಿರೋಧ ವ್ಯಕ್ತಪಡಿಸಿದರು.

ಬಜರಂಗದಳದ ಮಾಜಿ ನಾಯಕ ಬಾಬು ಬಜರಂಗಿ 2002ರ ಗುಜರಾತ್ ಗಲಭೆಯಲ್ಲಿ ಪ್ರಮುಖ ಅಪರಾಧಿ. ವಿಶೇಷವಾಗಿ 97 ಮುಸ್ಲಿಮರನ್ನು ಕೊಂದ ನರೋಡಾ ಪಾಟಿಯಾ ಹತ್ಯಾಕಾಂಡದ ನೇತೃತ್ವವನ್ನು ವಹಿಸಿದ್ದ ಈತನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಆದರೆ ವೈದ್ಯಕೀಯ ಆಧಾರದ ಮೇಲೆ ಜಾಮೀನು ನೀಡಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X