ಕೇರಳ | ಬಿಜೆಪಿ ಜೊತೆ ಕೈ ಜೋಡಿಸಿದ ಕಾಂಗ್ರೆಸ್ ಸದಸ್ಯರು

Date:

ಕೇರಳದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಗ್ರಾಮ ಪಂಚಾಯತಿಯ ಆಡಳಿತ ರಚನೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಕೌನ್ಸಿಲರ್‌ಗಳು ಪರಸ್ಪರರೊಂದಿಗೆ ಕೈ ಜೋಡಿಸಿದ್ದಾರೆ. ಈ ಬೆಳವಣಿಗೆ ಕೇರಳದ ತ್ರಿಶೂರ್ ಜಿಲ್ಲೆಯ ಮತ್ತತ್ತೂರು ಗ್ರಾಮ ಪಂಚಾಯತಿಯಲ್ಲಿ ನಡೆದಿದೆ.

- Advertisement -

ಮತ್ತತ್ತೂರು ಗ್ರಾಮ ಪಂಚಾಯತಿಯ ಅಧ್ಯಕ್ಷರ ನೇಮಕದಲ್ಲಿ ಬಿಜೆಪಿ ಜೊತೆ ಕಾಂಗ್ರೆಸ್‌ ಕೌನ್ಸಿಲರ್‌ಗಳು ಕೈ ಜೋಡಿಸಿದ್ದಾರೆ. ಸ್ವತಂತ್ರ ಅಭ್ಯರ್ಥಿ ಟೆಸ್ಸಿ ಜೋಸ್ ಕಲ್ಲರಕ್ಕಲ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಮತ್ತತ್ತೂರು ಗ್ರಾಮ ಪಂಚಾಯತಿಯ ಒಟ್ಟು 24 ಸ್ಥಾನಗಳಲ್ಲಿ, ಯುಡಿಎಫ್ 8, ಎಲ್‌ಡಿಎಫ್ 10 ಹಾಗೂ ಎನ್‌ಡಿಎ 4 ಸ್ಥಾನಗಳನ್ನು ಗೆದ್ದಿದ್ದವು. ಇಬ್ಬರು ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಈ ಇಬ್ಬರು ಸ್ವತಂತ್ರ ಕೌನ್ಸಿಲರ್‌ಗಳಲ್ಲಿ ಒಬ್ಬರಾದ ಔಸೆಫ್ ಎಂಬವರನ್ನು ಅಧ್ಯಕ್ಷೀಯ ಅಭ್ಯರ್ಥಿಯಾಗಿ ಎಲ್‌ಡಿಎಫ್‌ ನೇಮಿಸಿದರೆ, ಮತ್ತೊಬ್ಬ ಸ್ವತಂತ್ರ ಕೌನ್ಸಿಲರ್ ಟೆಸ್ಸಿ ಅವರನ್ನು ಕಾಂಗ್ರೆಸ್‌ ನೇತೃತ್ವದ ಯುಡಿಎಫ್ ಕಣಕ್ಕಿಸಿತ್ತು.

ಯುಡಿಎಫ್‌ ಬೆಂಬಲದೊಂದಿಗೆ ಕಣದಲ್ಲಿದ್ದ ಟೆಸ್ಸಿ ಅವರಿಗೆ ಯುಡಿಎಫ್‌ನ 8 ಮತ್ತು ಎನ್‌ಡಿಎ (ಬಿಜೆಪಿ) 4 ಮತಗಳು ಚಲಾವಣೆಯಾಗಿದ್ದು, ಟೆಸ್ಸಿ ಅವರು ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಗ್ರಾಮ ಪಂಚಾಯತಿ ಅಧ್ಯಕ್ಷರ ಆಯ್ಕೆಯಲ್ಲಿ ಕಾಂಗ್ರೆಸ್‌-ಬಿಜೆಪಿ ಪರಸ್ಪರ ಕೈ ಜೋಡಿಸಿವೆ.

ಇನ್ನು, 8 ಮಂದಿ ಕೌನ್ಸಿಲರ್‌ಗಳು ಕಾಂಗ್ರೆಸ್‌ಗೆ ರಾಜೀನಾಮೆ ಕೂಡ ನೀಡಿದ್ದಾರೆ. “ಜಿಲ್ಲಾ ಮತ್ತು ಬ್ಲಾಕ್ ಮಟ್ಟದ ನಾಯಕತ್ವವು ಆಂತರಿಕ ವಿವಾದಗಳನ್ನು ಬಗೆಹರಿಸುವಲ್ಲಿ ವಿಫಲವಾಗಿದೆ. ಅಭ್ಯರ್ಥಿಗ: ಆಯ್ಕೆ ಹಂತದಿಂದಲೇ ಸಮಸ್ಯೆಗಳು ಎದುರಾಗಿದ್ದವು. ಫಲಿತಾಂಶಗಳು ಘೋಷಣೆಯಾದ ಬಳಿಕ ಬಿಕ್ಕಟ್ಟು ಮತ್ತಷ್ಟು ಮುನ್ನೆಲೆ ಬಂದಿತ್ತು. ಆದರೂ, ಸ್ಥಳೀಯ ನಾಯಕತ್ವದಿಂದ ಯಾವುದೇ ಸ್ಪಂದನೆ ದೊರೆತಿಲ್ಲ” ಎಂದು ರಾಜೀನಾಮೆ ನೀಡಿದ ಕಾಂಗ್ರೆಸ್ ಕೌನ್ಸಿಲರ್‌ಗಳಲ್ಲಿ ಒಬ್ಬರಾದ ಲಿಂಟೊ ಪಲ್ಲಿಪರಂಬಿಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅವರ ರಾಜೀನಾಮೆಗಳನ್ನು ಕಾಂಗ್ರೆಸ್‌ ಅಂಗೀಕರಿಸಿಲ್ಲ. ಅವರ ಮನವೊಲಿಸುವ ಪ್ರಯತ್ನದಲ್ಲಿದೆ. ಅಲ್ಲದೆ, ತ್ರಿಶೂರ್ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಟಿ ಎಂ ಚಂದ್ರನ್ ಮತ್ತು ಮಂಡಲ ಅಧ್ಯಕ್ಷ ಶಫಿ ಕಲ್ಲುಪರಂಬಿಲ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಸನ್ನಿ ಜೋಸೆಫ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಗಾಳವನ್ನು BJPಗೆ ಕೊಟ್ಟ ಗ್ಯಾನೇಶ್‌ ಕುಮಾರ್‌ಗೆ ‘ಭಾರತ ರತ್ನ’ ಕೊಡಿ: ಜೆಕೆ ಸಿಎಂ ಒಮರ್ ಅಬ್ದುಲ್ಲಾ

ಇಡೀ ಪಶ್ಚಿಮ ಬಂಗಾಳವನ್ನೇ ಬಿಜೆಪಿಗೆ ಒಪ್ಪಿಸಿರುವ ಕೇಂದ್ರ ಚುನಾವಣಾ ಆಯೋಗದ (ECI)...

ನಾವು ‘ಇಂಡಿಯಾ’ ಒಕ್ಕೂಟದ ಭಾಗವಲ್ಲ, ಸಭೆಗೆ ಹಾಜರಾಗಲ್ಲ: ಎಎಪಿ ನಾಯಕ ಸಂಜಯ್ ಸಿಂಗ್

ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಸಭೆಯಿಂದ ಆಮ್ ಆದ್ಮಿ ಪಾರ್ಟಿ (ಎಎಪಿ)...

SIR | ಫಾರ್ಮ್-6 ಹೆಚ್ಚುವರಿ ನಿಯಮ ಹಿಂಪಡೆದ ಚುನಾವಣಾ ಆಯೋಗ; ಆದರೆ, ಪೂರ್ಣ ವಿನಾಯಿತಿಯಲ್ಲ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಹೊಸ ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ಸಂಕೀರ್ಣ ಕಾಗದಪತ್ರಗಳ ಕಟ್ಟುನಿಟ್ಟಿನ...

​’ಇದು ಶತಮಾನದ ಅತಿ ದೊಡ್ಡ ನಾಟಕ’: ನಿರ್ಮಲಾ ಸೀತಾರಾಮನ್ ಸಿಟಿ ಬಸ್ ಪ್ರಯಾಣಕ್ಕೆ ನೆಟ್ಟಿಗರ ಕಟು ಟೀಕೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವ...