ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ (79) ನಿಧನರಾಗಿದ್ದಾರೆ.
ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಅವರು ಸಾವಿನ ಕುರಿತು ಅವರ ಪುತ್ರ ಚಾಂಡಿ ಉಮ್ಮನ್ ಫೇಸ್‌ಬುಕ್ ಪೋಸ್ಟ್ ಮೂಲಕ ತಿಳಿಸಿದ್ದಾರೆ.
ಮಂಗಳವಾರ ಬೆಳಗ್ಗೆ 4.25ರ ಸುಮಾರಿಗೆ ನಿಧನರಾದರು ಎಂದು ತಿಳಿದು ಬಂದಿದೆ.