ವಂದೇ ಭಾರತ್ ರೈಲಿನಲ್ಲಿ ಮಕ್ಕಳಿಂದ ‘ಆರ್‌ಎಸ್‌ಎಸ್ ಗೀತೆ’ ಹಾಡಿಸಿದ ರೈಲ್ವೆ: ತನಿಖೆಗೆ ಕೇರಳ ಸರ್ಕಾರ ಆದೇಶ

Date:

ಹೊಸದಾಗಿ ಉದ್ಘಾಟನೆಗೊಂಡ ಎರ್ನಾಕುಲಂನಿಂದ ಬೆಂಗಳೂರು ಮಾರ್ಗದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಶಾಲಾ ವಿದ್ಯಾರ್ಥಿಗಳು ಆರ್‌ಎಸ್‌ಎಸ್ ಹಾಡು ಹಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಈ ಬಗ್ಗೆ ಕೇರಳ ಸರ್ಕಾರ ತನಿಖೆಗೆ ಆದೇಶಿಸಿದೆ.

- Advertisement -

ಈ ಸಂಬಂಧ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಅವರು, ಸಾರ್ವಜನಿಕ ಶಿಕ್ಷಣ ನಿರ್ದೇಶಕರಿಗೆ (ಡಿಪಿಐ) ಸೂಚಿಸಿದ್ದಾರೆ. ಸರ್ಕಾರ ಈ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುತ್ತದೆ ಎಂದು ಶಿವನ್‌ಕುಟ್ಟಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಇದನ್ನು ಓದಿದ್ದೀರಾ? ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಬೇಕು: ಬಿ ಕೆ ಹರಿಪ್ರಸಾದ್ ಆಗ್ರಹ

“ಸರ್ಕಾರಿ ಕಾರ್ಯಕ್ರಮಗಳಲ್ಲಿ ಮಕ್ಕಳನ್ನು ರಾಜಕೀಯಕ್ಕೆ ಬಳಸುವುದು ಮತ್ತು ಯಾವುದೇ ನಿರ್ದಿಷ್ಟ ಗುಂಪಿನ ಕೋಮು ಭಾವನೆ ಉತ್ತೇಜಿಸಲು ಮಕ್ಕಳನ್ನು ಬಳಸುವುದು ಸಾಂವಿಧಾನಿಕ ತತ್ವಗಳ ಉಲ್ಲಂಘನೆಯಾಗಿದೆ. ತನಿಖೆ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದೂ ಶಿವನ್‌ಕುಟ್ಟಿ ತಿಳಿಸಿದ್ದಾರೆ.

“ದೇಶದ ಜಾತ್ಯತೀತ ಮತ್ತು ರಾಷ್ಟ್ರೀಯ ಮೌಲ್ಯಗಳನ್ನು ಎತ್ತಿಹಿಡಿಯುವ ಜವಾಬ್ದಾರಿ ಸರ್ಕಾರಕ್ಕಿದೆ. ಈ ತತ್ವಗಳನ್ನು ರಕ್ಷಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು” ಎಂದಿದ್ದಾರೆ.

ಆದಾಗ್ಯೂ, ಹೊಸದಾಗಿ ಉದ್ಘಾಟಿಸಲಾದ ರೈಲಿನಲ್ಲಿ ವಿದ್ಯಾರ್ಥಿಗಳು ಆರ್‌ಎಸ್‌ಎಸ್ ಗೀತೆ ಹಾಡುವುದನ್ನು ಕೇಂದ್ರ ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಪ್ರವಾಸೋದ್ಯಮ ಸಚಿವ ಸುರೇಶ್ ಗೋಪಿ ಭಾನುವಾರ ಸಮರ್ಥಿಸಿಕೊಂಡರು. “ಆ ಸಮಯದಲ್ಲಿ ಮಕ್ಕಳು ಆ ಹಾಡನ್ನು ಹಾಡಲು ಬಯಸಿದ್ದರು. ಏನಾದರೂ ಇದು ಉಗ್ರಗಾಮಿ ಕೃತ್ಯವಲ್ಲ” ಎಂದಿದ್ದಾರೆ. ಗೋಪಿ ಹೇಳಿಕೆ ತೀವ್ರ ಟೀಕೆಗೆ ಒಳಗಾಗುತ್ತಿದೆ.

“ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಸಂಸ್ಥೆಯಾದ ರೈಲ್ವೆಯನ್ನು ಸಂಘ ಪರಿವಾರವು ತಮ್ಮ ಕೋಮು ರಾಜಕೀಯ ಪ್ರಚಾರಕ್ಕಾಗಿ ಬಳಸುತ್ತಿರುವುದು ಒಪ್ಪಲಾಗದು. ಧಾರ್ಮಿಕ ವಿರೋಧಿ ದ್ವೇಷ ಮತ್ತು ಕೋಮು ವಿಭಜಕ ರಾಜಕೀಯವನ್ನು ನಿರಂತರವಾಗಿ ಹರಡುವ ಆರ್‌ಎಸ್‌ಎಸ್ ಗೀತೆಯನ್ನು ಸರ್ಕಾರದ ಅಧಿಕೃತ ಕಾರ್ಯಕ್ರಮದಲ್ಲಿ ಹಾಡುವುದು ಸಾಂವಿಧಾನಿಕ ತತ್ವಗಳ ಉಲ್ಲಂಘನೆ” ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ ಡಿ ಸತೀಶನ್ ಕೂಡ ಈ ಘಟನೆಯನ್ನು ಖಂಡಿಸಿದ್ದಾರೆ. “ಸರ್ಕಾರಿ ಕಾರ್ಯಕ್ರಮದ ಭಾಗವಾಗಿ ವಿದ್ಯಾರ್ಥಿಗಳು ಆರ್‌ಎಸ್‌ಎಸ್ ಗೀತೆ ಹಾಡುವಂತೆ ಮಾಡುವುದು ಕಾನೂನುಬಾಹಿರ ಮತ್ತು ಪ್ರಜಾಪ್ರಭುತ್ವ ವಿರೋಧಿ ಕೃತ್ಯ. ಉತ್ತರ ಭಾರತದಂತೆ ಕೇರಳದಲ್ಲಿ ವಿಭಜನೆಯ ರಾಜಕೀಯವನ್ನು ತರಲು ಬಿಜೆಪಿ ಪ್ರಯತ್ನಿಸುತ್ತಿದೆ” ಎಂದು ದೂರಿದರು.

ಈ ವಿಡಿಯೋ ಪೋಸ್ಟ್‌ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ದಕ್ಷಿಣ ರೈಲ್ವೆ ವಿಡಿಯೋವನ್ನು ಡಿಲೀಟ್ ಮಾಡಿದೆ. ಆದರೆ ಬಳಿಕ ದಕ್ಷಿಣ ರೈಲ್ವೆ ಮತ್ತೆ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಈ ವಿಡಿಯೋ ಹಾಕಿ ಅದರ ಇಂಗ್ಲಿಷ್ ಅನುವಾದವನ್ನೂ ಪೋಸ್ಟ್ ಮಾಡಿದೆ. “ಎರ್ನಾಕುಲಂ ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಉದ್ಘಾಟನಾ ಸಮಯದಲ್ಲಿ ಸರಸ್ವತಿ ವಿದ್ಯಾಲಯದ ವಿದ್ಯಾರ್ಥಿಗಳು ತಮ್ಮ ಶಾಲೆಯ ಗೀತೆಯನ್ನು ಸುಂದರವಾಗಿ ಹಾಡಿದರು” ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದೆ. ಆರ್‌ಎಸ್‌ಎಸ್‌ ಗೀತೆ ಶಾಲೆಯ ಗೀತೆಯಾಗಿದ್ದು ಯಾವಾಗ ಎಂದು ಸದ್ಯ ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಖಿನ್ನತೆ, ಆತ್ಮಹತ್ಯೆಯ ಆಲೋಚನೆ: NTF ವರದಿ ಹೊರತಂದ ಆಘಾತಕಾರಿ ಸತ್ಯ!

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಸುಪ್ರೀಂ ಕೋರ್ಟ್...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...

ಪರ್ವತದಷ್ಟು ಹಗರಣ, ಸಾಸಿವೆಯಷ್ಟು ದಂಡ: ₹1.48 ಕೋಟಿಗೆ ಅದಾನಿ ಸಮೂಹದ ಅಕ್ರಮಗಳಿಗೆ ಸೆಬಿ ‘ಕ್ಲೀನ್ ಚಿಟ್’

ಅದಾನಿ ಸಮೂಹದ ಬೃಹತ್ ಆರ್ಥಿಕ ಅವ್ಯವಹಾರಗಳ ಆರೋಪಗಳೆದುರು ಭಾರತದ ಷೇರುಪೇಟೆ ನಿಯಂತ್ರಕ...