ಸಂಚಾರ ನಿಯಮ ಉಲ್ಲಂಘನೆ ಆರೋಪ; ಪ್ರಧಾನಿ ಮೋದಿ ವಿರುದ್ಧ ದೂರು ದಾಖಲು

Date:

Advertisements

ಕೇರಳದಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಿದ ವೇಳೆ ಸಂಚಾರ ನಿಯಮ ಉಲ್ಲಂಘನೆ ಆರೋಪವನ್ನು ಎದುರಿಸುತ್ತಿದ್ದಾರೆ

ಕೇರಳದ ಕೊಚ್ಚಿಯಲ್ಲಿ ರೋಡ್‌ ಶೋ ನಡೆಸಿದ್ದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಂಚಾರ ನಿಯಮ ಉಲ್ಲಂಘನೆ ಆಗಿರುವ ಬಗ್ಗೆ ತ್ರಿಶೂರ್ ನಿವಾಸಿ ಜಯಕೃಷ್ಣನ್ ಎಂಬುವವರು ದೂರು ನೀಡಿದ್ದಾರೆ.

ಎರಡು ದಿನಗಳ ಭೇಟಿಗಾಗಿ ಸೋಮವಾರ ಕೇರಳಕ್ಕೆ ಆಗಮಿಸಿದ್ದ ಪ್ರಧಾನಿ ಮೋದಿ, ಎರ್ನಾಕುಲಂನಲ್ಲಿ ಸಾಂಪ್ರದಾಯಿಕ ಸ್ಥಳೀಯ ಉಡುಗೆಯಲ್ಲಿ ಭರ್ಜರಿ ರೋಡ್‌ ಶೋ ನಡೆಸಿದ್ದರು. ಈ ವೇಳೆ ಕಾರಿನ ಬಾಗಿಲು ತೆರೆದು ಫುಟ್‌ಬೋರ್ಡ್‌ನಲ್ಲಿ ನಿಂತು ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಸಾರ್ವಜನಿಕರತ್ತ ಕೈ ಬೀಸಿದ್ದರು.

Advertisements

ಇದು ಸಂಚಾರ ನಿಯಮ ಉಲ್ಲಂಘನೆ ಎಂದು ದೂರುದಾರ ಜಯಕೃಷ್ಣನ್ ಆರೋಪಿಸಿದ್ದಾರೆ. “ಡಿಎಲ್ 2 ಸಿಎಎಕ್ಸ್ 8624 ನೋಂದಣಿ ಸಂಖ್ಯೆಯ ವಾಹನವು ಸಂಚಾರ ನಿಯಮಗಳನ್ನು ಉಲ್ಲಂಘಿಸಿದೆ. ವಾಹನದ ತೆರೆದ ಬಾಗಿಲಿನಲ್ಲಿ ವ್ಯಕ್ತಿಯೊಬ್ಬರು ನೇತಾಡುತ್ತಿದ್ದರು. ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿ ಕಾರನ್ನು ಚಲಾಯಿಸುವುದು ಅಪಾಯಕಾರಿ.‌ ಇದಲ್ಲದೆ ಕಾರಿನ ಗ್ಲಾಸ್‌ಗಳು ಹೂವುಗಳಿಂದ ಮುಚ್ಚಲ್ಪಟ್ಟಿತ್ತು. ಇದರಿಂದಾಗಿ ಚಾಲಕನ ದೃಷ್ಟಿಗೆ ಅಡ್ಡಿಯಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ.

ಈ ಸುದ್ದಿ ಓದಿದ್ದೀರಾ?: ಬಿಬಿಸಿ ಸಾಕ್ಷ್ಯಚಿತ್ರ ಪ್ರಸಾರಕ್ಕೆ ದೆಹಲಿ ವಿವಿ ನಿಷೇಧ ರದ್ದುಪಡಿಸಿದ ದೆಹಲಿ ಹೈಕೋರ್ಟ್‌

ಪೊಲೀಸ್ ಮಹಾನಿರ್ದೇಶಕರು ಹಾಗೂ ಮೋಟಾರು ವಾಹನ ಇಲಾಖೆಗೆ (ಎಂವಿಡಿ) ಆನ್‌ಲೈನ್‌ ಮೂಲಕ ಜಯಕೃಷ್ಣನ್ ದೂರು ನೀಡಿದ್ದಾರೆ.

ಕಾನೂನಿನ ಮುಂದೆ ಎಲ್ಲರೂ ಸಮಾನರು. ಇಂತಹ ಚಟುವಟಿಕೆಗಳು ಸಾರ್ವಜನಿಕರಿಗೆ ತಪ್ಪು ಸಂದೇಶ ನೀಡುವುದರಿಂದ ನಿಯಮ ಉಲ್ಲಂಘಿಸುವವರ ವಿರುದ್ಧ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ.

ಕೊಚ್ಚಿಯ ತೇವರದಲ್ಲಿ ರೋಡ್‌ಶೋ ನಡೆಸಿದ ಪ್ರಧಾನಿ ಮೋದಿ, ಆರಂಭದಲ್ಲಿ 20 ನಿಮಿಷಗಳ ಕಾಲ ಕಾಲ್ನಡಿಗೆಯಲ್ಲಿ ತೆರಳಿ ಬಳಿಕ ಕಾರಿನ ಫುಟ್‌ಬೋರ್ಡ್‌ನಲ್ಲಿ ನಿಂತು ಹೆದ್ದಾರಿಗಳ ಬದಿಗಳಲ್ಲಿದ್ದವರತ್ತ ಕೈ ಬೀಸಿದ್ದರು.  ಬಿಜೆಪಿ ಆಯೋಜಿಸಿದ್ದ ಯುವಂ ಸಮಾವೇಶಕ್ಕೆ ಚಾಲನೆ, ʻವಂದೇ ಭಾರತ್‌ʼ ರೈಲು ಲೋಕಾರ್ಪಣೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಮೋದಿ ಭಾಗವಹಿಸಿದ್ದರು.  

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X