ರಾಜ್ಯಪಾಲರ ವಿರುದ್ಧ ಎರಡನೇ ಬಾರಿಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೇರಳ

Date:

ಕಳೆದ ಎರಡು ವಾರಗಳಲ್ಲಿ ಎರಡನೇ ಬಾರಿಗೆ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ನಡೆಯ ವಿರುದ್ಧ ಕೇರಳ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ವಿಧಾನಸಭೆಯಲ್ಲಿ ಅಂಗೀಕಾರಗೊಂಡ ನಿರ್ಣಾಯಕ ಮಸೂದೆಗಳಿಗೆ ರಾಜ್ಯಪಾಲರು ಅಂಕಿತ ಹಾಕದೆ ಸಾರ್ವಜನಿಕರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದಾರೆ ಎಂದು ಕೇರಳ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ.

ರಾಜ್ಯವನ್ನು ಪ್ರತಿನಿಧಿಸುವ ವಕೀಲ ಸಿ ಕೆ ಸಸಿ, ರಾಜ್ಯಪಾಲರ ಈ ಕ್ರಮವು ಕೇರಳ ಜನರ ಬದುಕುವ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ರಾಜ್ಯದ ಜನರ ಕಲ್ಯಾಣಕ್ಕಾಗಿ ಅಂಗೀಕಾರಗೊಂಡ ಮಸೂದೆಗಳನ್ನು ದೀರ್ಘಕಾಲದವರೆಗೂ ಹಾಗೂ ಅನಿರ್ದಿಷ್ಟ ಕಾಲದವರೆಗೂ ರಾಜ್ಯಪಾಲರು ಇರಿಸಿಕೊಂಡಿರುವ ಕ್ರಮ ಸ್ಪಷ್ಟವಾಗಿ ನಿರಂಕುಶವಾಗಿದೆ ಮತ್ತು ಇದು ಸಂವಿಧಾನದ 14ನೇ ವಿಧಿ(ಸಮಾನತೆಯ ಹಕ್ಕು)ಯನ್ನು ಉಲ್ಲಂಘಿಸುತ್ತದೆ. ಅಲ್ಲದೆ ಇದು ಸಂವಿಧಾನದ 21 ನೇ ವಿಧಿ (ಜೀವನದ ಹಕ್ಕು) ಅಡಿಯಲ್ಲಿ ಬರುವ ಕೇರಳ ರಾಜ್ಯದ ಜನರ ಹಕ್ಕುಗಳನ್ನು ಕಸಿಯುತ್ತದೆ” ಎಂದು ಸಿ ಕೆ ಸಸಿ ತಿಳಿಸಿದ್ದಾರೆ.

8 ಮಸೂದೆಗಳು ಬಾಕಿ

ಎಂಟು ಪ್ರಮುಖ ಮಸೂದೆಗಳು ಪ್ರಸ್ತುತ ರಾಜ್ಯಪಾಲರ ಬಳಿ ಬಾಕಿ ಉಳಿದಿವೆ ಎಂದು ಕೇರಳ ಹೇಳಿದೆ. ಈ ಕೆಲವು ಮಸೂದೆಗಳು ಎರಡು ವರ್ಷಗಳಿಂದ ತಡೆಹಿಡಿಯಲ್ಪಟ್ಟಿವೆ.

ರಾಜ್ಯದ ಪರ ವಾದ ಮಂಡಿಸಿದ ಹಿರಿಯ ವಕೀಲ ಕೆಕೆ ವೇಣುಗೋಪಾಲ್, ಕೇರಳ ರಾಜ್ಯಪಾಲರ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದರೂ ರಾಜ್ಯಪಾಲರು ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.

ಹಲವು ಮಸೂದೆಗಳು ಅಪಾರ ಸಾರ್ವಜನಿಕ ಹಿತಾಸಕ್ತಿ, ಕಲ್ಯಾಣ ಕಾರ್ಯಕ್ರಮಗಳನ್ನು ಒದಗಿಸುವುದಾಗಿದ್ದು, ಇವುಗಳ ವಿಳಂಬದಿಂದ ರಾಜ್ಯದ ಜನರ ಹಲವು ಕಲ್ಯಾಣ ಕಾರ್ಯಕ್ರಮಗಳಿಗೆ ಅಡ್ಡಿಯಾಗುತ್ತದೆ. ಜೊತೆಗೆ ರಾಜ್ಯದ ಜನತೆಗೆ ಘೋರ ಅನ್ಯಾಯವಾಗುತ್ತಿದೆ ಎಂದು ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ತಮಿಳುನಾಡು | ಸಹಪಾಠಿಗಳಿಂದ ಹಲ್ಲೆ, ಜಾತಿ ನಿಂದನೆ; ದಲಿತ ವಿದ್ಯಾರ್ಥಿ ಆತ್ಮಹತ್ಯೆ

ಸಂವಿಧಾನದ 200ನೇ ವಿಧಿಯ ಅಡಿಯಲ್ಲಿ ರಾಜ್ಯಪಾಲರ ಅನುಮೋದನೆಗಾಗಿ ಬಾಕಿ ಇರುವ ಎಂಟು ಮಸೂದೆಗಳಲ್ಲಿ ಎರಡು 2021ರ ವಿಶ್ವವಿದ್ಯಾಲಯ ಕಾನೂನುಗಳ ತಿದ್ದುಪಡಿ ಮಸೂದೆಗಳು (1 ನೇ ತಿದ್ದುಪಡಿ) ಮತ್ತು ವಿಶ್ವವಿದ್ಯಾಲಯ ಕಾನೂನುಗಳ ತಿದ್ದುಪಡಿ ಮಸೂದೆ (2 ನೇ ತಿದ್ದುಪಡಿ) ಇದೆ. ಇದಲ್ಲದೆ ಸಹಕಾರ ಸಂಘಗಳ ತಿದ್ದುಪಡಿ ಮಸೂದೆ 2022, 2022ರ ವಿಶ್ವವಿದ್ಯಾನಿಲಯ ಕಾನೂನುಗಳ ತಿದ್ದುಪಡಿ ಮಸೂದೆ, 2022ರ ಕೇರಳ ಲೋಕಾಯುಕ್ತ ತಿದ್ದುಪಡಿ ಮಸೂದೆ, 2022ರ ವಿಶ್ವವಿದ್ಯಾನಿಲಯ ಕಾನೂನುಗಳ ತಿದ್ದುಪಡಿ ಮಸೂದೆ ಮತ್ತು 2021ರ ಸಾರ್ವಜನಿಕ ಆರೋಗ್ಯ ಮಸೂದೆ ಸೇರಿದೆ.

ರಾಜ್ಯಪಾಲರು 8 ಬಾಕಿ ಇರುವ ಮಸೂದೆಗಳನ್ನು ಪರಿಗಣಿಸುವಲ್ಲಿ ವಿನಾಕಾರಣ ವಿಳಂಬ ಮಾಡುವ ಮೂಲಕ ತಮ್ಮ ಸಾಂವಿಧಾನಿಕ ಕರ್ತವ್ಯಗಳಲ್ಲಿ ವಿಫಲರಾಗಿದ್ದಾರೆ ಎಂದು ರಾಜ್ಯ ಸರ್ಕಾರ ಪ್ರತಿಪಾದಿಸಿದೆ.

ಕೇರಳದ ಹೊರತಾಗಿ, ಇತರ ಬಿಜೆಪಿಯೇತರ ಆಡಳಿತದ ರಾಜ್ಯಗಳು ತಮ್ಮ ರಾಜ್ಯಪಾಲರ ವಿರುದ್ಧ ನಿರ್ಣಾಯಕ ಮಸೂದೆಗಳನ್ನು ಕಾನೂನಾತ್ಮಕವಾಗಿ ಅಂಗೀಕರಿಸಲು ವಿಳಂಬ ಮಾಡುತ್ತಿರುವುದಕ್ಕೆ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿವೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರದಲ್ಲಿ ಕಾಂಗ್ರೆಸ್ ಬಂದ್ರೆ ಮನೆಯ ಯಜಮಾನಿಗೆ ರೂ. 1 ಲಕ್ಷ ಜಮೆ, ರೈತರ ಸಾಲ ಮನ್ನಾ: ಸಿಎಂ ಸಿದ್ದರಾಮಯ್ಯ

"ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಮೋದಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ....

ಮೋದಿ ಸುಳ್ಳುಗಳು: ಭಾಗ 2 | ಬೇಟಿ ಬಚಾವೋ ಬೇಟಿ ಪಡಾವೋ ಎನ್ನುವ ಮೋದಿ ಮಹಿಳೆಯರ ರಕ್ಷಣೆಗೆ ನಿಂತಿದ್ದಾರೆಯೇ?

ಮಣಿಪುರದಲ್ಲಿ ಕುಕಿ ಬುಡಕಟ್ಟು ಸಮುದಾಯದ ಮೂವರು ಮಹಿಳೆಯರನ್ನು ಬೆತ್ತಲುಗೊಳಿಸಿ, ಲೈಂಗಿಕ ದೌರ್ಜನ್ಯ...

ಪ್ರಚಾರದ ಸಾಲು ಬದಲಿಸಲು ಹೇಳಿದ ಚುನಾವಣಾ ಆಯೋಗ; ಎಎಪಿ ಆಕ್ರೋಶ

ಲೋಕಸಭಾ ಚುನಾವಣೆಯ ಪ್ರಚಾರದ ಹಾಡಿನ ಸಾಲುಗಳನ್ನು ಮಾರ್ಪಡಿಸುವಂತೆ ಎಎಪಿ ಪಕ್ಷಕ್ಕೆ ಚುನಾವಣಾ...

ಹಾಸನ ಪೆನ್‌ಡ್ರೈವ್ ಪ್ರಕರಣ | ಎಸ್‌ಐಟಿ ತಂಡದ ಮುಖ್ಯಸ್ಥರಾಗಿ ಎಡಿಜಿಪಿ ಬಿಜಯ್ ಕುಮಾರ್ ಸಿಂಗ್ ನೇಮಕ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ವಿಶೇಷ ತನಿಖಾ...