ಡಾ. ಸಿ ಜೆ ರಾಯ್ ಆತ್ಮಹತ್ಯೆ: ಸಮಗ್ರ ತನಿಖೆಗೆ ಕೇರಳ ಸಂಸದ ರಹೀಮ್ ಆಗ್ರಹ, ಮೋಹನ್‌ಲಾಲ್ ಸಂತಾಪ

Date:

ದಕ್ಷಿಣ ಭಾರತದ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾದ ಕಾನ್ಫಿಡೆಂಟ್ ಗ್ರೂಪ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷ ಡಾ. ಸಿ ಜೆ ರಾಯ್ ಶುಕ್ರವಾರ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪ್ರಕರಣದ ಸಮಗ್ರ ತನಿಖೆ ನಡೆಸಬೇಕೆಂದು ಕೇರಳ ಸಂಸದ, ಸಿಪಿಐ(ಎಂ) ಮುಖಂಡ ಎಎ ರಹೀಮ್ ಆಗ್ರಹಿಸಿದ್ದಾರೆ.

- Advertisement -

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ರಹೀಮ್ ಉದ್ಯಮಿ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. “ತನಿಖೆ ನಡೆಸಿ ಈ ಘಟನೆಯ ಹಿಂದಿರುವ ನೈಜ ಸಂಗತಿಯನ್ನು ಬಹಿರಂಗಪಡಿಸಬೇಕು. ಕೇಂದ್ರ ಸಂಸ್ಥೆಗಳು ಬಳಸಿದ ಒತ್ತಡ ತಂತ್ರಗಳಿಗೆ ರಾಯ್ ಬಲಿಯಾಗಿದ್ದಾರೆಯೇ ಎಂಬುದನ್ನೂ ಸಹ ತನಿಖೆ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ? BREAKING NEWS | ಐಟಿ ದಾಳಿಗೆ ಹೆದರಿ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಡಾ. ಸಿ ಜೆ ರಾಯ್ ಆತ್ಮಹತ್ಯೆ

ಇನ್ನು ಸೂಪರ್‌ಸ್ಟಾರ್, ಮಲಯಾಳಂ ಚಿತ್ರರಂಗದ ಜನಪ್ರಿಯ ನಟ ಮೋಹನ್‌ಲಾಲ್ ಸಹ ಉದ್ಯಮಿಯ ಸಾವಿಗೆ ಸಂತಾಪ ಸೂಚಿಸಿದ್ದಾರೆ. “ನನ್ನ ಆತ್ಮೀಯ ಗೆಳೆಯ ಸಿಜೆ ರಾಯ್ ಅವರ ಸಾವು ಅನಿರೀಕ್ಷಿತ. ನನಗೆ ತೀವ್ರ ನೋವುಂಟಾಗಿದೆ. ಅವರ ಕುಟುಂಬಕ್ಕೆ ನಾನು ಸಂತಾಪ ವ್ಯಕ್ತಪಡಿಸುತ್ತೇನೆ. ಅವರು ನನಗೆ ಸ್ನೇಹಿತನಿಗಿಂತ ಹೆಚ್ಚು. ಎಂದಿಗೂ ಪ್ರೀತಿಯಿಂದ ಅವರನ್ನು ಸ್ಮರಿಸುತ್ತೇನೆ” ಎಂದು ಫೇಸ್‌ಬುಕ್ ಪೋಸ್ಟ್‌ನಲ್ಲಿ ಹೇಳಿದ್ದಾರೆ. ಮೋಹನ್ ಲಾಲ್ ಸಿ ಜೆ ರಾಯ್ ನಿರ್ಮಾಣ ಮಾಡಿರುವ ಒಂದೆರಡು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಶುಕ್ರವಾರ ಆದಾಯ ತೆರಿಗೆ (ಐಟಿ) ದಾಳಿ ನಡೆಯುತ್ತಿದ್ದಾಗ ರಾಯ್ ಬೆಂಗಳೂರಿನಲ್ಲಿರುವ ತಮ್ಮ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಹುಟ್ಟಿ ಬೆಳೆದ ರಾಯ್ ಮೂಲತಃ ಕೇರಳದವರಾಗಿದ್ದಾರೆ. ಇನ್ನು ಕೇಂದ್ರ ಸಂಸ್ಥೆಯ ಒತ್ತಡದಿಂದಾಗಿ ರಾಯ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ರಾಯ್ ಅವರ ಸಹೋದರ ಬಾಬು ಆರೋಪಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಳೆ ಅಬ್ಬರ: ಉತ್ತರ ಪ್ರದೇಶದಲ್ಲಿ 10 ಮಂದಿ ಸಾವು; ಒಡಿಶಾದಲ್ಲಿ ಪ್ರವಾಹ

ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಉತ್ತರ ಪ್ರದೇಶ...

26 ಬಾರಿ ಸೋತರೂ ಕುಗ್ಗದ ಛಲ; 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕ ಹುದ್ದೆ ಪಡೆದ ವೃದ್ಧ

ಸರಿಯಾದ ಪ್ರಯತ್ನ ಮತ್ತು ಛಲವಿದ್ದರೆ ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ ಎಂಬುದನ್ನು...

1,870 ಕೋಟಿ ರೂ. ದೇಣಿಗೆ ದಂಧೆ ಆರೋಪ: ಗುಜರಾತ್‌ನ 3 ರಾಜಕೀಯ ಪಕ್ಷಗಳ ಅಕ್ರಮ ಬಯಲು

ಗುಜರಾತ್‌ನಲ್ಲಿ ನೋಂದಾಯಿತವಾಗಿದ್ದ, ಆದರೆ ಮಾನ್ಯತೆ ಪಡೆಯದ ಮೂರು ರಾಜಕೀಯ ಪಕ್ಷಗಳು ಆದಾಯ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ ಮಂಡಳಿಯ ಚಪ್ಪಾಳೆ

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ...