ಕೇರಳದಲ್ಲಿ ಆರ್ಥಿಕ ಬಿಕ್ಕಟ್ಟನ್ನು ಕೇಂದ್ರ ಕೃತಕವಾಗಿ ಸೃಷ್ಟಿಸಿದೆ: ವಿತ್ತ ಸಚಿವ ಆರೋಪ

Date:

ಕೇಂದ್ರವು ದೇಶದ ಒಕ್ಕೂಟ ರಚನೆಗೆ ವಿರುದ್ಧವಾದ ನಿಲುವನ್ನು ಅನುಸರಿಸುತ್ತಿದೆ ಮತ್ತು ಕೇರಳ ರಾಜ್ಯವು ಕೆಲವು ದಿನಗಳಿಂದ ಅನುಭವಿಸುತ್ತಿರುವ ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಕೇಂದ್ರ ಸರ್ಕಾರವೇ ಕಾರಣ, ಆರ್ಥಿಕ ಬಿಕ್ಕಟ್ಟನ್ನು ಕೃತವಾಗಿ ಸೃಷ್ಟಿಸಲಾಗಿದೆ ಎಂದು ಕೇರಳ ವಿತ್ತ ಸಚಿವ ಕೆ ಎನ್ ಬಾಲಗೋಪಾಲ್ ಆರೋಪಿಸಿದ್ದಾರೆ.

- Advertisement -

ವಿಧಾನಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಬಾಲಗೋಪಾಲ್, “ಕೆಐಐಎಫ್‌ಬಿ ಸಂಗ್ರಹಿಸಿದ ಮತ್ತು ಖರ್ಚು ಮಾಡಿದ ಹಣವನ್ನು ಕೇರಳದ ಒಟ್ಟಾರೆ ಸಾಲದ ಭಾಗವಾಗಿ ಕೇಂದ್ರವು ಪರಿಗಣಿಸುತ್ತದೆ. ಆದ್ದರಿಂದ ರಾಜ್ಯ ಸರ್ಕಾರದ ಸಂಪನ್ಮೂಲ ಕ್ರೋಢೀಕರಣ ಉಪಕ್ರಮಗಳು ತೀವ್ರವಾಗಿ ಪರಿಣಾಮ ಬೀರಿವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಆದರೆ ಕೇರಳ ಇನ್ಫ್ರಾಸ್ಟ್ರಕ್ಚರ್ ಇನ್ವೆಸ್ಟ್‌ಮೆಂಟ್ ಫಂಡ್ ಬೋರ್ಡ್ (ಕೆಐಐಎಫ್‌ಬಿ) ಮಂಜೂರು ಮಾಡಿರುವ ಯೋಜನೆಗಳಿಗೆ ಹಣ ಮಂಜೂರು ಮಾಡಲು ರಾಜ್ಯ ಸರ್ಕಾರ ಯಾವುದೇ ನಿರ್ಬಂಧಗಳನ್ನು ವಿಧಿಸಿಲ್ಲ” ಎಂದು ಸ್ಪಷ್ಟಪಡಿಸಿದ ಸಚಿವರು, “ಕೇಂದ್ರದ ಫೆಡರಲ್ ವಿರೋಧಿ ನಿಲುವಿನಿಂದಾಗಿ ಕೇರಳ ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ” ಎಂದು ದೂರಿದರು.

ಇದನ್ನು ಓದಿದ್ದೀರಾ?  ಮೋದಿ ಸರ್ಕಾರದ ಜೊತೆ ಕುಮಾರಸ್ವಾಮಿ: ಹೊಸ ಪಕ್ಷ ಸ್ಥಾಪನೆಗೆ ಕೇರಳ ಜೆಡಿಎಸ್ ಸಜ್ಜು

ಕೆಐಐಎಫ್‌ಬಿ ಕೇರಳದ ಸರ್ಕಾರಿ ಸಂಸ್ಥೆಯಾಗಿದ್ದು, ಮಾರುಕಟ್ಟೆಗಳಿಂದ ಹಣವನ್ನು ಸಂಗ್ರಹಿಸುವ ಮೂಲಕ ಮೂಲಸೌಕರ್ಯ ಯೋಜನೆಗಳಿಗೆ ಹಣಕಾಸು ಒದಗಿಸುತ್ತದೆ. ಈ ಎಲ್ಲಾ ಪ್ರತಿಕೂಲ ಪರಿಸ್ಥಿತಿಗಳ ಹೊರತಾಗಿಯೂ ಕೆಐಐಎಫ್‌ಬಿ ವಿವಿಧ ಯೋಜನೆಗಳಿಗೆ 29,100 ಕೋಟಿ ರೂಪಾಯಿ ವೆಚ್ಚ ಮಾಡಲಿದೆ ಎಂದು ಸಚಿವರು ಹೇಳಿದ್ದಾರೆ.

“ಪ್ರತಿಕೂಲ ಅಂಶಗಳಿಂದಾಗಿ ಈಗ ಕೆಐಐಎಫ್‌ಬಿಯ ಚಟುವಟಿಕೆಗಳು ನಿಧಾನಗತಿಯಲ್ಲಿ ಪ್ರಗತಿಯಲ್ಲಿವೆ” ಎಂದು ಒಪ್ಪಿಕೊಂಡ ಕೇರಳ ವಿತ್ತ ಸಚಿವ ಆದರೆ ಅದರ ಯೋಜನೆಗಳ ಕಾರ್ಯಗತಗೊಳಿಸುವಿಕೆಯು ನಿಂತಿದೆ ಎಂಬ ಆರೋಪವನ್ನು ತಿರಸ್ಕರಿಸಿದರು.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...