ಕೇರಳ, ತಮಿಳುನಾಡು ಲೋಕಸಭೆ ಚುನಾವಣೆ: ರಾಹುಲ್ ಮುನ್ನಡೆ, ತಮಿಳುನಾಡಿನಲ್ಲಿ ಸ್ಟ್ರಾಂಗ್ ರೂಮ್ ಕೀ ನಾಪತ್ತೆ

Date:

ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಕೇರಳದಲ್ಲಿ ಎಂದಿನಂತೆ ಆರಂಭಿಕ ಮತ ಎಣಿಕೆಯಲ್ಲಿ ಎಡ ಪಕ್ಷಗಳು ಮುನ್ನಡೆಯಲಿದ್ದರೆ, ತಮಿಳುನಾಡಿನಲ್ಲಿ ಇಂಡಿಯಾ ಒಕ್ಕೂಟವು ಪೋಸ್ಟಲ್ ಬ್ಯಾಲೆಟ್ ಮತ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದೆ.

- Advertisement -

ತಮಿಳುನಾಡಿನಲ್ಲಿ ಏಪ್ರಿಲ್ 19ರಂದು ಚುನಾವಣೆ ನಡೆದಿದ್ದು, ಕೇರಳದಲ್ಲಿ ಏಪ್ರಿಲ್ 26ರಂದು ಒಂದೇ ಹಂತದಲ್ಲಿ ಚುನಾವಣೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇನ್ನು ತಮಿಳುನಾಡಿನಲ್ಲಿ ತಿರುನೆಲ್ವೇಲಿ ಸಂಸದೀಯ ಕ್ಷೇತ್ರದ ಅಂಬಾಸಮುದ್ರಂ ವಿಧಾನಸಭಾ ಕ್ಷೇತ್ರದಲ್ಲಿಇವಿಎಂಗಳನ್ನು ಇರಿಸಲಾಗಿದ್ದ ಸ್ಟ್ರಾಂಗ್ ರೂಮ್‌ನ ಬೀಗದ ಕೀ ಕಳೆದುಹೋಗಿರುವ ಘಟನೆ ನಡೆದಿದೆ. ಕೊನೆಗೆ ಬೀಗವನ್ನು ಹೊಡೆಯಲಾಗಿದೆ.

ವಯನಾಡಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುನ್ನಡೆ ಸಾಧಿಸುತ್ತಿದ್ದರೆ, ತಿರುವನಂತಪುರಂನಲ್ಲಿ ಪೋಸ್ಟಲ್ ಬ್ಯಾಲೆಟ್ ಎಣಿಕೆಯಲ್ಲಿ ಬಿಜೆಪಿಯ ಕೆ ಸುರೇಂದ್ರನ್ ಮುನ್ನಡೆ ಸಾಧಿಸಿದ್ದಾರೆ.

ಇದನ್ನು ಓದಿದ್ದೀರಾ?  ಲೋಕಸಭೆ ಚುನಾವಣೆ| ಶಾ, ಮೋದಿ, ರಾಹುಲ್; ಕಣದಲ್ಲಿರುವ ಪ್ರಮುಖ ಹತ್ತು ಅಭ್ಯರ್ಥಿಗಳು

ಮತ ಎಣಿಕೆಗೆ ಅರ್ಧ ಗಂಟೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ 12 ಸ್ಥಾನಗಳಲ್ಲಿ ಮತ್ತು ಸಿಪಿಐ(ಎಂ) ಎಲ್ ಡಿಎಫ್ 6 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಕ್ರಿಶ್ಚಿಯನ್ ಅಲ್ಪಸಂಖ್ಯಾತರ ಪ್ರಬಲ ಶಕ್ತಿಯಾಗಿರುವ ಇಡುಕ್ಕಿಯಲ್ಲಿ ಕಾಂಗ್ರೆಸ್ ಹಾಲಿ ಸಂಸದ ಡೀನ್ ಕುರಿಯಾಕೋಸ್ 3000 ಹಿನ್ನೆಡೆ ಸಾಧಿಸಿದರೆ, ಪೊನ್ನಾನಿಯಲ್ಲಿ ಮುಸ್ಲಿಂ ಲೀಗ್ ಅಭ್ಯರ್ಥಿ ಇ ಟಿ ಮುಹಮ್ಮದ್ ಬಶೀರ್ ಸಹ 1000ಕ್ಕೂ ಹೆಚ್ಚು ಮತಗಳ ಮುನ್ನಡೆ ಸಾಧಿಸಿದ್ದಾರೆ.

ಅಂಚೆ ಮತಪತ್ರಗಳ ಎಣಿಕೆಯಲ್ಲಿ ರಾಹುಲ್ ಗಾಂಧಿ ವಯನಾಡಿನಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕೊಲ್ಲಂನಲ್ಲಿ, ಕೇರಳದಲ್ಲಿ ಕಾಂಗ್ರೆಸ್‌ನ ಮಿತ್ರಪಕ್ಷವಾದ ಆರ್‌ಎಸ್‌ಪಿಯ ಹಾಲಿ ಸಂಸದ ಎನ್‌ಕೆ ಪ್ರೇಮಚಂದ್ರನ್ 3800 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಕೇರಳದ 20 ಸ್ಥಾನಗಳ ಪೈಕಿ ಯುಡಿಎಫ್ 15 ಮತ್ತು ಎಲ್‌ಡಿಎಫ್ 5 ಸ್ಥಾನಗಳಲ್ಲಿ ಆರಂಭಿಕ ಮುನ್ನಡೆ ಸಾಧಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂದೋರ್‌ನಲ್ಲಿ 1.36 ಲಕ್ಷ ಮತದಾರರ ಹೆಸರು ಡಿಲೀಟ್‌: ‘ದಾಖಲೆಗಳೇ ಇಲ್ಲ’ ಎಂದ ಅಧಿಕಾರಿಗಳು, ‘ಆರ್‌ಟಿಐ’ ಉತ್ತರದಲ್ಲಿ ಬಹಿರಂಗ

ಮಧ್ಯಪ್ರದೇಶದ ಇಂದೋರ್‌ ಜಿಲ್ಲೆಯಲ್ಲಿ ಒಟ್ಟು 1.36 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...