ಕೇರಳ ಶೀಘ್ರ ‘ಕಡು ಬಡತನ ಮುಕ್ತ ರಾಜ್ಯ’ವಾಗಲಿದೆ: ವಿಜಯನ್ ಸರ್ಕಾರ

Date:

ಕಡು ಬಡತನವನ್ನು ಯಶಸ್ವಿಯಾಗಿ ನಿರ್ಮೂಲನೆ ಮಾಡುವ ವಿಷಯದಲ್ಲಿ ಕೇರಳ ದೇಶದಲ್ಲಿ ಮೊದಲ ಸ್ಥಾನದಲ್ಲಿದೆ. ಚೀನಾದ ಬಳಿಕ ವಿಶ್ವದಲ್ಲಿ ಎರಡನೇ ಸ್ಥಾನದಲ್ಲಿದೆ. ಇದು ದೇಶಕ್ಕೆ ಹೆಮ್ಮೆಯ ಕ್ಷಣವಾಗಿದೆ. ಕೇರಳ ಶೀಘ್ರ ಕಡು ಬಡತನ ಮುಕ್ತ ರಾಜ್ಯವಾಗಲಿದೆ ಎಂದು ಕೇರಳ ಸರ್ಕಾರ ಹೇಳಿದೆ.

- Advertisement -

ಕೇರಳದಲ್ಲಿ ಅತ್ಯಂತ ಬಡತನದ ಸ್ಥಿತಿಯಲ್ಲಿ ವಾಸಿಸುತ್ತಿರುವ 64,006 ಕ್ಕೂ ಹೆಚ್ಚು ಕುಟುಂಬಗಳಿಗೆ ಸರ್ಕಾರವು ಆಹಾರ, ಆರೋಗ್ಯ ರಕ್ಷಣೆ, ಜೀವನೋಪಾಯದ ಮೂಲ ಮತ್ತು ಸುರಕ್ಷಿತ ವಸತಿಯ ನಿರಂತರ ಪೂರೈಕೆಯನ್ನು ಮಾಡುತ್ತಿದೆ. ನವೆಂಬರ್ 1ರಂದು ರಾಜ್ಯ ರಚನೆಯ ದಿನದಂದು ಕೇರಳ ದೇಶದ ಮೊದಲ ‘ಕಡು ಬಡತನ ಮುಕ್ತ ರಾಜ್ಯ’ ಎಂದು ಘೋಷಿಸಲು ಸಜ್ಜಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಇದನ್ನು ಓದಿದ್ದೀರಾ? ಹೆಸರಾಯಿತು ಕರ್ನಾಟಕ, ಹಸಿರಾಯಿತೆ ಬದುಕು?

“ಈಗಿನ ಎಲ್‌ಡಿಎಫ್ ಸರ್ಕಾರದ ಮೊದಲ ಸಚಿವ ಸಂಪುಟವು ತೆಗೆದುಕೊಂಡ ಮೊದಲ ನಿರ್ಧಾರ ತೀವ್ರ ಬಡತನ ನಿರ್ಮೂಲನಾ ಯೋಜನೆ (EPEP) ಆಗಿದೆ. ತೀವ್ರ ಬಡತನವನ್ನು ನಿರ್ಮೂಲನೆ ಮಾಡುವ ಐದು ವರ್ಷಗಳ ಯೋಜನೆಯಾಗಿ ಇದನ್ನು ರೂಪಿಸಲಾಗಿತ್ತು. ಈಗ ನಾವು ನಮ್ಮ ಗುರಿಯ ಶೇ.100ರಷ್ಟು ಸಾಧಿಸಿದ್ದೇವೆ” ಎಂದು ಪಿಟಿಐಗೆ ಕೇರಳ ಗ್ರಾಮೀಣಾಭಿವೃದ್ಧಿ ಸಚಿವ ಎಂಬಿ ರಾಜೇಶ್ ಹೇಳಿದ್ದಾರೆ.

“ರಾಜ್ಯಾದ್ಯಂತ ನಡೆಸಿದ ಸಮೀಕ್ಷೆಯ ಮೂಲಕ ಅತ್ಯಂತ ಬಡವರೆಂದು ಗುರುತಿಸಲ್ಪಟ್ಟ 1,03,099 ವ್ಯಕ್ತಿಗಳನ್ನು ಒಳಗೊಂಡ 64,006 ಕುಟುಂಬಗಳಿಗೆ ಆಹಾರ, ಆರೋಗ್ಯ, ಶಿಕ್ಷಣ, ಜೀವನೋಪಾಯ ಉತ್ತಮಗೊಳಿಸಲಾಗಿದೆ. ಯೋಜನೆಯನ್ನು ರೂಪಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ವಿವಿಧ ಇಲಾಖೆಗಳ ಕಾರ್ಯಾಚರಣೆಗಳನ್ನು ಪ್ರತಿ ಹಂತದಲ್ಲೂ ಪರಿಶೀಲಿಸಿದರು” ಎಂದು ಸಚಿವರು ಹೇಳಿದ್ದಾರೆ.

“ಅಸ್ತಿತ್ವದಲ್ಲಿರುವ ಸರ್ಕಾರಿ ಕಾರ್ಯಕ್ರಮಗಳ ಬಗ್ಗೆ ತಿಳಿದಿಲ್ಲದ ಅಥವಾ ಅವುಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕೆಂದು ತಿಳಿದಿಲ್ಲದ ಅಲೆಮಾರಿಗಳು ಸೇರಿದಂತೆ ಸಮಾಜದ ಅತ್ಯಂತ ಅಂಚಿನಲ್ಲಿರುವ ಮತ್ತು ದುರ್ಬಲ ವರ್ಗಗಳನ್ನು ಗುರುತಿಸಲಾಗಿದೆ. ಈ ಯೋಜನೆಯಡಿಯಲ್ಲಿ ಒಳಗೊಳ್ಳಿಸಲಾಗಿದೆ” ಎಂದೂ ಸಚಿವರು ಹೇಳಿದ್ದಾರೆ.

“ಪ್ರತಿ ಕುಟುಂಬದ ಅಗತ್ಯಗಳಿಗೆ ಅನುಗುಣವಾಗಿ ಮೈಕ್ರೋಪ್ಲಾನ್‌ಗಳನ್ನು ಸಿದ್ಧಪಡಿಸಲಾಗಿದೆ. ಕೆಲವು ಕುಟುಂಬಗಳಿಗೆ ವೈದ್ಯಕೀಯ ಆರೈಕೆಯೇ ಆದ್ಯತೆ. ಇನ್ನು ಕೆಲವರಿಗೆ ಆಹಾರ. ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಮತ್ತು ಆದಾಯದ ಅಗತ್ಯವಿದೆ. ಆಸ್ಪತ್ರೆಗಳಿಗೆ ಹೋಗಲು ಸಹಾಯ ಕೇಳಿದ ವ್ಯಕ್ತಿಗಳು ಸಹ ಇದ್ದರು” ಎಂದು ಸಚಿವರು ವಿವರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR: ಪಶ್ಚಿಮ ಬಂಗಾಳದ ಅವಾಂತರಗಳು

ಮುಖ್ಯ ಚುನಾವಣಾ ಆಯುಕ್ತರು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂಬ ದೂರಿನ ಮೇರೆಗೆ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಿದರೂ CEC ವಿರುದ್ಧ ಪ್ರತಿಭಟನೆ ಮುಂದುವರೆಯುತ್ತದೆ: CJP

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆ ರಾಜೀನಾಮೆಯಿಂದ ಅಂತ್ಯಗೊಳ್ಳುವುದಿಲ್ಲ....

ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಸಿಜೆಪಿ ‘ಜನತಾ ನ್ಯಾಯಾಲಯ’ – ಎಸ್‌ಐಆರ್ ಅನ್ಯಾಯಗಳ ವಿರುದ್ಧ ಪ್ರತಿಭಟನೆಯ ಕಹಳೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಕ್ರಮಗಳು, ಮುಖ್ಯ ಚುನಾವಣಾ...