ಸೆ.5ರಂದು ‘ಇಂಡಿಯಾ’ ಸಂಸದರ ಸಭೆ ಕರೆದ ಖರ್ಗೆ; ಒಂದು ಚುನಾವಣೆಯ ಬಗ್ಗೆ ವಾಗ್ದಾಳಿ

Date:

Advertisements

ಸೆಪ್ಟೆಂಬರ್ 18 ರಿಂದ 22 ರವರೆಗೆ ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನಕ್ಕೂ ಮುನ್ನ ಪ್ರತಿಪಕ್ಷಗಳ ಒಕ್ಕೂಟದ ‘ಇಂಡಿಯಾ’ ಸಂಸದರ ಸಭೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೆ.5 ರಂದು ಕರೆದಿದ್ದಾರೆ.

ನವದೆಹಲಿಯ ರಾಜಾಜಿ ಮಾರ್ಗದ ಖರ್ಗೆಯವರ ನಿವಾಸದಲ್ಲಿ ಸಭೆ ಕರೆಯಲಾಗಿದ್ದು, ಒಕ್ಕೂಟದ ಸಂಸದರು ತಮ್ಮ ಕಾರ್ಯತಂತ್ರವನ್ನು ನಿರ್ಧರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟವು ಪರಸ್ಪರ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದೆ. 2024ರ ಲೋಕಸಭೆ ಚುನಾವಣೆಯ ಜೊತೆಗೆ ಬಿಜೆಪಿಯನ್ನು ವಿವಿಧ ರೀತಿಯಲ್ಲಿ ಒಗ್ಗಟ್ಟಿನಿಂದ ಎದುರಿಸಲು ಯೋಜಿಸುತ್ತಿದೆ. ಇತ್ತೀಚಿನ ಸಂಸತ್ತಿನ ಮುಂಗಾರು ಅಧಿವೇಶನದಲ್ಲೂ ಮೈತ್ರಿಕೂಟ ಒಟ್ಟಾಗಿ ಕಾರ್ಯನಿರ್ವಹಿಸಿದೆ.

Advertisements

ಈ ನಡುವೆ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಸಂಘಟನಾ ಸಮಸ್ಯೆಗಳು ಮತ್ತು ಪ್ರಸ್ತುತ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸಲು ಸಭೆ ನಡೆಯುತ್ತಿದೆ. ಸಭೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಿದ್ದಾರೆ.

ಏತನ್ಮಧ್ಯೆ, ಸಂಸತ್ತಿನ ಐದು ದಿನಗಳ ವಿಶೇಷ ಅಧಿವೇಶನ ನಡೆಸುವ ಕುರಿತು ಕೇಂದ್ರ ಸರ್ಕಾರ ಇನ್ನೂ ಸ್ಪಷ್ಪಪಡಿಸಿಲ್ಲ.

ಈ ಸುದ್ದಿ ಓದಿದ್ದೀರಾ? ಭಾರತ್‌ ಜೋಡೋಗೆ ಒಂದು ವರ್ಷ: ಸೆ.07ರಂದು ದೇಶಾದ್ಯಂತ ಜಿಲ್ಲಾ ಮಟ್ಟದ ಯಾತ್ರೆ

ಒಂದು ರಾಷ್ಟ್ರ, ಒಂದು ಪರಿಹಾರ ಅಗತ್ಯ

ಒಂದು ರಾಷ್ಟ್ರ, ಒಂದು ಚುನಾವಣೆಯ ನಡೆಸುವ ಕಾರ್ಯ ಸಾಧ್ಯತೆಯ ಕುರಿತು ಮಾಜಿ ರಾಷ್ಟ್ರಪತಿ ರಮನಾಥ್ ಕೋವಿಂದ್‌ ನೇತೃತ್ವದಲ್ಲಿ ಸಮಿತಿ ರಚಿಸಿರುವ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ಪ್ರಜಾಪ್ರಭುತ್ವ ಭಾರತವನ್ನು ನಿಧಾನವಾಗಿ ಸರ್ವಾಧಿಕಾರವಾಗಿ ಪರಿವರ್ತಿಸಲು ಮೋದಿ ಸರ್ಕಾರ ಬಯಸುತ್ತದೆ. ‘ಒಂದು ರಾಷ್ಟ್ರ, ಒಂದು ಚುನಾವಣೆ’ ಸಮಿತಿಯನ್ನು ರಚಿಸುವ ಈ ತಂತ್ರವು ಭಾರತದ ಪ್ರಜಾಪ್ರಭುತ್ವ ರಾಷ್ಟ್ರವನ್ನು ಕಿತ್ತುಹಾಕುವ ಒಂದು ಉಪಾಯವಾಗಿದೆ. ರಾಷ್ಟ್ರ ಮಟ್ಟದಲ್ಲಿ ಮತ್ತು ರಾಜ್ಯ ಮಟ್ಟದಲ್ಲಿ ರಾಜಕೀಯ ಪಕ್ಷಗಳನ್ನು ಸಂಪರ್ಕಿಸದೆ ಏಕಪಕ್ಷೀಯವಾಗಿ ಈ ಬೃಹತ್ ಕಸರತ್ತನ್ನು ಕೈಗೊಳ್ಳಲಾಗುತ್ತಿರುವುದು ಎಷ್ಟು ಸರಿ” ಎಂದು ಪ್ರಶ್ನಿಸಿದರು.

“ರಾಜ್ಯಗಳು ಮತ್ತು ಅವುಗಳ ಚುನಾಯಿತ ಸರ್ಕಾರಗಳನ್ನು ಸಂಪರ್ಕಿಸದೆ ಈ ಬೃಹತ್ ಕಾರ್ಯಾಚರಣೆ ನಡೆಯಬೇಕೇ? ಒಂದೇ ಚುನಾವಣೆ ನಡೆಸುವ ವಿಚಾರವನ್ನು ಹಿಂದೆ ಮೂರು ಸಮಿತಿಗಳು ವ್ಯಾಪಕವಾಗಿ ಪರಿಶೀಲಿಸಿ ತಿರಸ್ಕರಿಸಿವೆ. ನಾಲ್ಕನೆಯದನ್ನು ಮೊದಲೇ ನಿರ್ಧರಿಸಿದ ಫಲಿತಾಂಶವನ್ನು ಮನಸ್ಸಿನಲ್ಲಿಟ್ಟುಕೊಂಡು ರಚಿಸಲಾಗಿದೆಯೇ ಎಂದು ನೋಡಬೇಕಾಗಿದೆ. ಅಲ್ಲದೆ ಭಾರತದ ಪ್ರತಿಷ್ಠಿತ ಚುನಾವಣಾ ಆಯೋಗದ ಪ್ರತಿನಿಧಿಯನ್ನು ಸಮಿತಿಯಿಂದ ಹೊರಗಿಟ್ಟಿರುವುದು ನಮ್ಮನ್ನು ಚಿಂತೆಗೀಡುಮಾಡಿದೆ” ಎಂದು ಮಲ್ಲಿಕಾರ್ಜುನ ಖರ್ಗೆ ಆತಂಕ ವ್ಯಕ್ತಪಡಿಸಿದರು.

“ಎಲ್ಲ ಚುನಾವಣೆಗಳನ್ನು ನಡೆಸಲು ಚುನಾವಣಾ ಆಯೋಗವು ಮಾಡುವ ವೆಚ್ಚವು ಸುಮಾರು 5,500 ಕೋಟಿ ರೂ.ಗಳಷ್ಟಿದೆ. ಇದು ಸರ್ಕಾರದ ಬಜೆಟ್ ವೆಚ್ಚದ ಒಂದು ಭಾಗವಾಗಿದೆ. ಈ ವೆಚ್ಚವನ್ನು ಉಳಿಸುವ ತರ್ಕವು ಪೆನ್ನಿ ಬುದ್ಧಿವಂತ ಹಾಗೂ ಪೌಂಡ್‌ ಮೂರ್ಖತನ ಗಾದೆಯನ್ನು ನೆನಪಿಸುತ್ತದೆ” ಎಂದು ಯೋಜನೆಯ ಬಗ್ಗೆ ಛೇಡಿಸಿದರು.

“ಅದೇ ರೀತಿ, ಮಾದರಿ ನೀತಿ ಸಂಹಿತೆ ಸರ್ಕಾರಕ್ಕೆ ಸಮಸ್ಯೆಯಾಗಿದ್ದರೆ, ನಿಷೇಧದ ಅವಧಿಯನ್ನು ಕಡಿಮೆ ಮಾಡುವ ಮೂಲಕ ಅಥವಾ ಚುನಾವಣಾ ಕಾಲದಲ್ಲಿ ಅನುಮತಿಸಲಾದ ಅಭಿವೃದ್ಧಿ ಚಟುವಟಿಕೆಗಳನ್ನು ಸಡಿಲಿಸುವ ಮೂಲಕ ಅದನ್ನು ಬದಲಾಯಿಸಬಹುದು. ಈ ನಿಟ್ಟಿನಲ್ಲಿ ಎಲ್ಲ ರಾಜಕೀಯ ಪಕ್ಷಗಳು ವ್ಯಾಪಕ ಒಮ್ಮತಕ್ಕೆ ಬರಬಹುದು. ಜನಾದೇಶವನ್ನು ಕಡೆಗಣಿಸಿ ಚುನಾಯಿತ ಸರ್ಕಾರಗಳನ್ನು ಉರುಳಿಸುವ ಅಭ್ಯಾಸ ಬಿಜೆಪಿಗಿದೆ. ಇದು 2014 ರಿಂದ ಸಂಸದೀಯ ಹಾಗೂ ವಿಧಾನಸಭೆ ಸೇರಿ ಒಟ್ಟು 436 ಉಪ ಚುನಾವಣೆಗಳನ್ನು ನಡೆಸಿರುವುದಕ್ಕೆ ಉದಾಹರಣೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“1967 ರವರೆಗೆ, ನಾವು ಇಷ್ಟು ರಾಜ್ಯಗಳನ್ನು ಹೊಂದಿರಲಿಲ್ಲ ಅಥವಾ ನಮ್ಮ ಪಂಚಾಯತ್‌ಗಳಲ್ಲಿ 30.45 ಲಕ್ಷ ಚುನಾಯಿತ ಪ್ರತಿನಿಧಿಗಳನ್ನು ಹೊಂದಿರಲಿಲ್ಲ. ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿದೆ. ನಮ್ಮಲ್ಲಿ ಲಕ್ಷಗಟ್ಟಲೆ ಚುನಾಯಿತ ಪ್ರತಿನಿಧಿಗಳಿದ್ದಾರೆ ಮತ್ತು ಅವರ ಭವಿಷ್ಯವನ್ನು ಒಂದೇ ಬಾರಿಗೆ ನಿರ್ಧರಿಸಲಾಗುವುದಿಲ್ಲ. ಆದ ಕಾರಣ 2024 ರಲ್ಲಿ ಭಾರತದ ಜನರು ಬಿಜೆಪಿ ದುರಾಡಳಿತವನ್ನು ತೊಡೆದುಹಾಕಲು ಒಂದೇ ರಾಷ್ಟ್ರ, ಒಂದೇ ಪರಿಹಾರ ಯೋಜನೆಯನ್ನು ನಿರ್ಧರಿಸಿಕೊಂಡಿದ್ದಾರೆ” ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X