ಸಂತ್ರಸ್ತೆಯ ಅಪಹರಣ ಪ್ರಕರಣ | ವಿಚಾರಣೆಗೆ ಹಾಜರಾಗದ ಭವಾನಿ ರೇವಣ್ಣ ಕಾರು ಚಾಲಕ; ನಾಪತ್ತೆ

Date:

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಅಪಹರಣ ಪ್ರಕರಣ ಸಂಬಂಧ ಸಂಸದರ ತಾಯಿ ಭವಾನಿ ರೇವಣ್ಣ ಅವರ ಕಾರು ಚಾಲಕನಿಗೆ ವಿಶೇಷ ತನಿಖಾ ದಳ (ಎಸ್ಐಟಿ)ದ ತನಿಖೆ ಸಂಕಷ್ಟ ಎದುರಾಗಿದೆ.

- Advertisement -

ಈ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣ ಅವರ ಕಾರು ಚಾಲಕ ಅಜಿತ್‌ಗೆ ಎರಡು ಬಾರಿ ಎಸ್‌ಐಟಿ ನೋಟಿಸ್ ಜಾರಿಗೊಳಿಸಿತ್ತು. ಆದರೆ ಈ ನೋಟಿಸ್‌ಗೆ ಪ್ರತಿಕ್ರಿಯಿಸದೆ ನಾಪತ್ತೆಯಾಗಿರುವ ಅಜಿತ್‌ ಪತ್ತೆಗೆ ಹಾಸನ, ಮಂಡ್ಯ ಹಾಗೂ ಮೈಸೂರು ಸೇರಿದಂತೆ ಇತರೆಡೆ ಎಸ್‌ಐಟಿ ಹುಡುಕಾಟ ನಡೆಸಿದೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಮೈಸೂರು ಜಿಲ್ಲೆ ಕೆ.ಆರ್‌.ನಗರ ತಾಲೂಕಿನ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಅಜಿತ್ ಪಾತ್ರ ವಹಿಸಿರುವ ಆರೋಪ ಕೇಳಿ ಬಂದಿದೆ. ಇದೇ ಪ್ರಕರಣದಲ್ಲಿ ಮಾಜಿ ಸಚಿವ ರೇವಣ್ಣ ಬಂಧನದ ಬಳಿಕ ಅಜಿತ್‌ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿ ವಿಚಾರಣೆಗೆ ಬರುವಂತೆ ಹೊಳೆನರಸೀಪುರ ತಾಲೂಕಿನಲ್ಲಿರುವ ಅಜಿತ್‌ ಮನೆಗೆ ತೆರಳಿ ಎಸ್‌ಐಟಿ ಅಧಿಕಾರಿಗಳು ನೋಟಿಸ್‌ ಅಂಟಿಸಿದ್ದರು. ಆದರೆ ವಿಚಾರಣೆಗೆ ಮಾತ್ರ ಕಾರು ಚಾಲಕ ಆಗಮಿಸದೆ ನಾಪತ್ತೆಯಾಗಿದ್ದಾರೆ.

ಇನ್ನೊಂದೆಡೆ ಅಜಿತ್ ಸಂಪರ್ಕಿಸಲು ಅವರ ಕುಟುಂಬ ಸದಸ್ಯರ ಮೂಲಕ ಎಸ್‌ಐಟಿ ಪ್ರಯತ್ನ ವಿಫಲವಾಗಿದೆ. ಕೊನೆಗೆ ಕಾರು ಚಾಲಕನ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಿ ಅಧಿಕಾರಿಗಳು ಕಾರ್ಯಾಚರಣೆಗಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಲೈಂಗಿಕ ದೌರ್ಜನ್ಯ ಹಗರಣ | ಪ್ರಜ್ವಲ್ ರೇವಣ್ಣನಿಗೆ ‘ಎಚ್ಚರಿಕೆ ಪತ್ರ’ ಬರೆದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ಬಳಿಗೆ ತೆರಳಿದ್ದ ಕಾರು ಚಾಲಕ ಅಜಿತ್, ಆಕೆಯ ಬಳಿ ತೆರಳಿ ಬಲವಂತದ ಹೇಳಿಕೆ ನೀಡುವಂತೆ ತಿಳಿಸಿದ್ದ. ಅಜಿತ್ ಹೇಳಿದಂತೆ ಸಂತ್ರಸ್ತೆ ಹೇಳಿಕೆ ನೀಡಿದ್ದರು. ಆ ಹೇಳಿಕೆಯನ್ನು ತನ್ನ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿಕೊಂಡಿದ್ದ. ಆ ಬಳಿಕ ಆ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿತ್ತು. ಈ ಹಿನ್ನೆಲೆಯಲ್ಲಿ ಕಾರು ಚಾಲಕನಿಗೂ ಎಸ್‌ಐಟಿ ನೋಟಿಸ್ ಜಾರಿಗೊಳಿಸಿತ್ತು. ಈಗ ನಾಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.

ನೋಟಿಸ್‌ಗೆ ಉತ್ತರಿಸದ ಭವಾನಿ ರೇವಣ್ಣ?

ಇನ್ನು ಇದೇ ಅಪಹರಣ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೀಡಿದ್ದ ನೋಟಿಸ್‌ಗಳಿಗೆ ಭವಾನಿ ರೇವಣ್ಣ ಕೂಡ ಉತ್ತರಿಸಿಲ್ಲ ಎಂದು ತಿಳಿದು ಬಂದಿದೆ.

ಅಪಹರಣ ಪ್ರಕರಣದ ಎಫ್‌ಐಆರ್‌ನಲ್ಲಿ ಭವಾನಿ ರೇವಣ್ಣರವರ ಹೆಸರು ಕೂಡಾ ಉಲ್ಲೇಖವಾಗಿತ್ತು. ಈ ಹಿನ್ನಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಹೊಳೇನರಸೀಪುರದಲ್ಲಿ ಮನೆಗೆ ತೆರಳಿ ಭವಾನಿ ಅವರಿಗೆ ಎರಡು ಬಾರಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಆದರೆ, ಇದುವರೆಗೆ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ತಿಳಿದುಬಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗೆ ಅವಕಾಶ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಡೆಸಲು ದೆಹಲಿ ಪೊಲೀಸರು ಅನುಮತಿ...

ಚುನಾವಣಾ ಪ್ರಚಾರದಲ್ಲಿ ಅಪ್ರಾಪ್ತನ ಬಳಕೆ ಮಾಡಿರುವ ಉದಯನಿಧಿ ಸ್ಟ್ಯಾಲಿನ್ ವಿರುದ್ಧ ಎಫ್‌ಐಆರ್ ದಾಖಲು

ತಮಿಳುನಾಡಿನ ಧರಪುರಂ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಅಪ್ರಾಪ್ತ ಬಾಲಕನನ್ನು...

MPSC ಪೇಪರ್ ಲೀಕ್: ಪುಣೆ ವಿದ್ಯಾರ್ಥಿಗಳ ಹೋರಾಟಕ್ಕೆ ಸಿಜೆಪಿ ಬೆಂಬಲ; ಅಧ್ಯಕ್ಷರ ರಾಜೀನಾಮೆಗೆ ಆಗ್ರಹ

ಮಹಾರಾಷ್ಟ್ರ ಲೋಕಸೇವಾ ಆಯೋಗ (MPSC) ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ...