ಸಂತ್ರಸ್ತೆಯ ಅಪಹರಣ ಪ್ರಕರಣ | ಎಚ್ ಡಿ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮೇ 13ಕ್ಕೆ ಮುಂದೂಡಿಕೆ

Date:

Advertisements

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಪೂರಕವಾಗಿ ವರದಿಯಾಗಿರುವ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಜೆಡಿಎಸ್‌ ಮುಖಂಡ ಹಾಗೂ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಮೇ 13ರ ಸೋಮವಾರಕ್ಕೆ ಮುಂದೂಡಿದೆ.

ಎಚ್ ಡಿ ರೇವಣ್ಣ ಪರ ಹಿರಿಯ ವಕೀಲ ಸಿ ವಿ ನಾಗೇಶ್ ವಾದ ಮಂಡಿಸಿ, “ರೇವಣ್ಣ ಅವರ ವಿರುದ್ಧ ಐಪಿಸಿ ಸೆಕ್ಷನ್‌ 364(ಎ) ಅಡಿ ಪ್ರಕರಣ ದಾಖಲಿಸುವ ಅಗತ್ಯವಿರಲಿಲ್ಲ. ಮಹಿಳೆ ಸುರಕ್ಷತೆ ವಿಚಾರ ಪ್ರಸ್ತಾಪಿಸಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ಆದರೆ, ನಿರೀಕ್ಷಣಾ ಜಾಮೀನು ನಿರಾಕರಿಸಿರುವ ದಿನವೇ ಸಂತ್ರಸ್ತ ಮಹಿಳೆ ಪತ್ತೆಯಾಗಿದ್ದಾರೆ” ಎಂದು ನ್ಯಾಯಾಲಯದ ಗಮನಕ್ಕೆ ತಂದರು.

“ನನಗೆ ಸುಳ್ಳು ಹೇಳಿ ತಾಯಿ ಕರೆದೊಯ್ದರು ಎಂದು ಸಂತ್ರಸ್ತೆಯ ಪುತ್ರ ನೀಡಿರುವ ದೂರಿನಲ್ಲಿದೆ. ಆದರೆ, ಆಕೆಗೆ ಸುಳ್ಳು ಹೇಳಿ ವಂಚಿಸಿರುವ ಆರೋಪವು ಅಪಹರಣ ಆಗುವುದಿಲ್ಲ. ಸಿಎಂಗೆ ಹೇಳಿದ್ದಾರೆ ಎಂದು ಕರೆದೊಯ್ದರೆ ಸಿಎಂ ಬಂಧಿಸಬೇಕೆ? ಎಚ್‌ ಡಿ ರೇವಣ್ಣ ಹೇಳಿದ್ದಾರೆ ಎಂದು ಮಹಿಳೆ ಕರೆದೊಯ್ಯುವುದು ಹೇಗೆ ಅಪಹರಣವಾಗುತ್ತದೆ? ಇಲ್ಲಿ ಬಲ ಪ್ರಯೋಗದ ಆರೋಪವಿಲ್ಲ. ಮೋಸ ಮಾಡಿ ಕರೆದೊಯ್ದಿರುವ ಆರೋಪವೂ ಇಲ್ಲ. ಆದರೂ ರೇವಣ್ಣರನ್ನು ಒಂದನೇ ಆರೋಪಿ ಮಾಡಲಾಗಿದೆ. ದೂರಿನಲ್ಲಿ ಹೇಳಿರುವಂತೆ ಮಹಿಳೆಯು ರೇವಣ್ಣ ಮನೆಯಲ್ಲಿ ಕೆಲಸಕ್ಕೆ ಇದ್ದವರು. ಸಂತ್ರಸ್ತೆಯನ್ನು ಬೆದರಿಸಿ ದೂರು ದಾಖಲಿಸಿಕೊಳ್ಳಲಾಗುತ್ತಿದೆ” ಎಂದು ಸಿ ವಿ ನಾಗೇಶ್ ವಾದಿಸಿದರು.

Advertisements

ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಜಯ್ನಾ ಕೊಠಾರಿ ಕೂಡ ವಾದ ಮಂಡಿಸಿ, “ಅರ್ಜಿದಾರರ ಪರ ವಕೀಲರು ತಮ್ಮ ವಾದ ಮಂಡಿಸಿದ್ದಾರೆ. ನಮಗೆ ವಾದ ಮಂಡಿಸಲು ಕಾಲಾವಕಾಶ ನೀಡಬೇಕು” ಎಂದು ಕೋರಿದರು.

ಇದಕ್ಕೆ ಅಂತಿಮವಾಗಿ ಒಪ್ಪಿದ ನ್ಯಾ. ಸಂತೋಷ್‌ ಗಜಾನನ ಭಟ್‌, ಎಸ್‌ಐಟಿ ಮನವಿ ಪುರಸ್ಕರಿಸಿದ್ದಲ್ಲದೇ, ಸೋಮವಾರ(ಮೇ. 13) ಬೆಳಗ್ಗೆ 11.30ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿದರು.

ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಆರೋಪದಡಿ ಬಂಧಿತರಾಗಿರುವ ಜೆಡಿಎಸ್‌ ಶಾಸಕ ಎಚ್ ಡಿ ರೇವಣ್ಣ ಅವರನ್ನು ನಗರದ 17ನೇ ಎಸಿಎಂಎಂ ನ್ಯಾಯಾಲಯ ಏಳು ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಎಚ್ ಡಿ ರೇವಣ್ಣ ಮತ್ತು ಎಸ್‌ಐಟಿ ಪರ ವಕೀಲರ ವಾದ ಆಲಿಸಿದ್ದ ನ್ಯಾಯಾಧೀಶ ರವೀಂದ್ರ ಕುಮಾರ್‌ ಕಟ್ಟಿಮನಿ, ರೇವಣ್ಣ ಅವರನ್ನು ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ಆದೇಶಿಸಿದ್ದರು.

ಹೆಚ್ಚುವರಿ ಸರ್ಕಾರಿ ಅಭಿಯೋಜಕರನ್ನು ನೇಮಿಸಿದ ಸರ್ಕಾರ

ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ವಿಶೇಷ ತನಿಖಾ ದಳದ (ಎಸ್‌ಐಟಿ) ಪರವಾಗಿ ವಾದಿಸಲು ಹಿರಿಯ ವಕೀಲರಾದ ಅಶೋಕ್‌ ನಾಯಕ್‌ ಮತ್ತು ಜಯ್ನಾ ಕೊಠಾರಿ ಅವರನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಲಾಗಿದೆ.

ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳನ್ನು ನಡೆಸಲು ಸರ್ಕಾರಿ ಅಭಿಯೋಜಕರ ತಂಡವನ್ನು ಬಲಪಡಿಸುವ ಉದ್ದೇಶದಿಂದ ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕಳೆದ ಏಪ್ರಿಲ್‌ 28ರಂದು ಬಿಜಯ್ ಕುಮಾರ್ ಸಿಂಗ್‌ ಅವರ ನೇತೃತ್ವದಲ್ಲಿ ತ್ರಿಸದಸ್ಯ ಎಸ್‌ಐಟಿ ರಚಿಸಲಾಗಿದೆ. ಎಸ್‌ಐಟಿ ಪ್ರಕರಣಗಳನ್ನು ನಡೆಸಲು ಮೊದಲಿಗೆ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ಬಿ ಎನ್‌ ಜಗದೀಶ್‌ ನೇಮಕ ಮಾಡಲಾಗಿತ್ತು. ಈಗ ಮತ್ತಿಬ್ಬರು ಹೆಚ್ಚುವರಿ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X