ಬಿಜೆಪಿ ಬೆಳೆಸಿದ ಗೂಂಡ ಸಂಸ್ಕೃತಿಗೆ ಸಾತನೂರಿನಲ್ಲಿ ಮುಸ್ಲಿಂ ಯುವಕನ ಕೊಲೆ: ಸಿದ್ದರಾಮಯ್ಯ ಕಿಡಿ

Date:

  • ಕೊಲೆ ಹೊಣೆಯನ್ನು ಗೃಹ ಸಚಿವರೇ ಹೊರಬೇಕು ಎಂದು ಸಿದ್ದರಾಮಯ್ಯ ಆಗ್ರಹ
  • ಚುನಾವಣಾ ದಿನಗಳಲ್ಲಿ ಕೋಮುದ್ವೇಷ ಬಡಿದೆಬ್ಬಿಸುವ ಯೋಜಿತ ಸಂಚು

ಧರ್ಮ ರಕ್ಷಣೆಯ ಹೆಸರಲ್ಲಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಬೆಳೆಸಿದ ಗೂಂಡಾ ಸಂಸ್ಕೃತಿಗೆ ಸಾತನೂರು ಬಳಿ ನಡೆದ ಯುವಕನ ಹತ್ಯೆ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಕಸಾಯಿಖಾನೆಗೆ ಜಾನುವಾರು ಸಾಗಿಸುತ್ತಿದ್ದ ವೇಳೆ ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮತ್ತು ಆತನ ಸಹಚರರು ಇದ್ರೀಸ್ ಪಾಷಾ ಎಂಬಾತನ ಮೇಲೆ ದಾಳಿ ನಡೆಸಿದ್ದರು. ಆ ಬಳಿಕ ಇದ್ರೀಸ್ ಪಾಷಾ ಶವವಾಗಿ ಪತ್ತೆಯಾಗಿದ್ದರು. ಪುನೀತ್ ಕೆರೆಹಳ್ಳಿ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

“ಧರ್ಮ ರಕ್ಷಣೆಯ ಹೆಸರಲ್ಲಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಬೆಳೆಸಿದ ಗೂಂಡಾ ಸಂಸ್ಕೃತಿಗೆ ಸಾತನೂರು ಬಳಿ ನಡೆದ ಯುವಕನ ಹತ್ಯೆ ಸಾಕ್ಷಿ. ಈ ಹತ್ಯೆಯ ಹೊಣೆಯನ್ನು ಆರಗ ಜ್ಞಾನೇಂದ್ರ ಅವರಂತಹ ಅಸಮರ್ಥ ಗೃಹ ಸಚಿವರೇ ಹೊರಬೇಕು” ಎಂದು ಟ್ವೀಟ್ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಮನಗರ | ಗೋ ರಕ್ಷಣೆಯ ಹೆಸರಿನಲ್ಲಿ ಮುಸ್ಲಿಂ ವ್ಯಾಪಾರಿಯ ಕೊಲೆ; ಪುನೀತ್ ಕೆರೆಹಳ್ಳಿ ತಂಡದ ಮೇಲೆ ಎಫ್‌ಐಆರ್

“ಕರ್ನಾಟಕ ಇಂತಹ ಅಸಮರ್ಥ‌, ಅದಕ್ಷ ಮತ್ತು ಬೇಜವಾಬ್ದಾರಿ ಗೃಹ‌ ಸಚಿವರನ್ನು ಎಂದೂ‌ ನೋಡಿರಲಿಲ್ಲ. ತನ್ನ‌ ಇಲಾಖೆಯ ಮೇಲೆ ನಿಯಂತ್ರಣ‌ ಇಲ್ಲದ ಈ ಸಚಿವರಿಗೆ ರಾಜ್ಯದ ಶಾಂತಿ‌ ಮತ್ತು‌ ಸುವ್ಯವಸ್ಥೆಯನ್ನು‌ ನಿರ್ವಹಿಸಲು‌ ಸಾಧ್ಯವೇ?” ಎಂದು ಪ್ರಶ್ನಿಸಿದ್ದಾರೆ.

ಆರಗ ಜ್ಞಾನೇಂದ್ರ ಅವರನ್ನು ಗೃಹ ಖಾತೆಯಿಂದ ಕಿತ್ತು ಹಾಕುವಂತೆ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

“ಗೋರಕ್ಷಣೆಯ ಹೆಸರಲ್ಲಿ ನಡೆದ ಹತ್ಯೆ ಕೇವಲ ಹುಚ್ಚಾಟ ಆಗಿರಲಾರದು. ಇದು ಚುನಾವಣಾ ದಿನಗಳಲ್ಲಿ ಕೋಮುದ್ವೇಷವನ್ನು ಬಡಿದೆಬ್ಬಿಸುವ ಯೋಜಿತ ಸಂಚಿನ‌ ಭಾಗವಾಗಿರುವ ಸಾಧ್ಯತೆ ಇದೆ.‌ ಈ ಹಿನ್ನೆಲೆ ಪೊಲೀಸರು ಪ್ರಕರಣದ ಕೂಲಂಕುಷ ತನಿಖೆ ನಡೆಸಬೇಕು” ಎಂದು ಒತ್ತಾಯಿಸಿದ್ದಾರೆ.

“ಚುನಾವಣಾ ಪ್ರಕ್ರಿಯೆ ಚಾಲನೆಯಲ್ಲಿರುವಾಗಲೇ ನಗರದಲ್ಲಿ ನಿತ್ಯ ಅತ್ಯಾಚಾರ, ಕೊಲೆಗಳು ನಿರ್ಭೀತಿಯಿಂದ ನಡೆಯುತ್ತಿರುವುದು ಕಳವಳಕಾರಿ ಸಂಗತಿ. ಈ ಸರ್ಕಾರ ಅಸ್ತಿತ್ವದಲ್ಲಿರುವಾಗ ಚುನಾವಣೆ ನ್ಯಾಯಯುತವಾಗಿ ನಡೆಯುವುದು ಅನುಮಾನ. ಈ ಬೆಳವಣಿಗೆಗಳನ್ನು ಆಯೋಗ ಗಂಭೀರವಾಗಿ ಪರಿಗಣಿಸಬೇಕು” ಎಂದಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಡಿಕೆಶಿ ಜೈಲಿಗೆ ಹೋಗೋದು ಖಚಿತ: ಈಶ್ವರಪ್ಪ

ಲೋಕಸಭಾ ಚುನಾವಣೆಗೂ ಮುನ್ನ ಅಥವಾ ನಂತರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೈಲಿಗೆ...

ಸಿಎಂ ಕಚೇರಿಯ ಗಮನ ಸೆಳೆದ ಉಳ್ಳಾಲ ನಗರಸಭೆಯ ಕಸದ ವಾಹನ: ವಿಡಿಯೋ ವೈರಲ್

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚೆಗೆ(ನ.27) ನಡೆಸಿದ ಜನಸ್ಪಂದನಕ್ಕೆ ಅಭೂತಪೂರ್ವವಾದ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸತತ...

ಬೆಂಗಳೂರು | ಬ್ರ್ಯಾಂಡ್‌ ಹೆಸರು ಬಳಸಿ ನಕಲಿ ಬಟ್ಟೆ ತಯಾರು: ಸಿಸಿಬಿ ದಾಳಿ

ಅರ್ಮಾನಿ, ಲಿವೈಸ್, ಅಲ್ಲೆನ್ ಸೊಲ್ಲಿ, ಬುರ್ಬೆರಿ ಲೆದರ್ ಟ್ಯಾಗ್ಸ್, ಪೋಲೊ, ಎಲ್​ಪಿ...