ಕಿತ್ತೂರು ಉತ್ಸವ | ಯಾವುದೇ ಧರ್ಮದವರಿರಲಿ, ಜಾತಿಯವರಿರಲಿ ಅವರನ್ನು ಪ್ರೀತಿಬೇಕು: ಸಿಎಂ ಸಿದ್ದರಾಮಯ್ಯ

Date:

Advertisements

ಯಾವುದೇ ಧರ್ಮದವರಿರಲಿ, ಜಾತಿಯವರಿರಲಿ ಅವರನ್ನು ಪ್ರೀತಿಬೇಕು ಎನ್ನುವುದನ್ನು ಚನ್ನಮ್ಮ-ರಾಯಣ್ಣ ಕಲಿಸಿಕೊಟ್ಟಿದ್ದಾರೆ. ಇದನ್ನು ನಾವು-ನೀವೆಲ್ಲಾ ಪಾಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

200ನೇ ವರ್ಷದ ಚನ್ನಮ್ಮನ ಕಿತ್ತೂರು ಉತ್ಸವವನ್ನು ವರ್ಣರಂಜಿತ ವೇದಿಕೆಯಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, “ಕಿತ್ತೂರು ರಾಣಿ ಚನ್ನಮ್ಮನ ಉತ್ಸವವನ್ನು ಸರ್ಕಾರ ಆಚರಿಸಬೇಕು ಎಂದು ಮೊದಲ ಬಾರಿಗೆ ಆದೇಶಿಸಿದ್ದು ನಮ್ಮ ಸರ್ಕಾರ. ಇವತ್ತಿನ‌ ಪೀಳಿಗೆಗೆ ಚನ್ನಮ್ಮನ ಇತಿಹಾಸ ಗೊತ್ತಾಗಬೇಕು ಎನ್ನುವ ಕಾರಣದಿಂದ ನಾವು ಈ ನಿರ್ಧಾರ ಮಾಡಿದೆವು” ಎಂದರು.

“ನಾನು ಸಂಗೊಳ್ಳಿ ರಾಯಣ್ಣ-ಕಿತ್ತೂರು ಚನ್ನಮ್ಮನ ಅಭಿಮಾನಿ. ರಾಣಿ ಚನ್ನಮ್ಮ, ರಾಣಿ ಅಬ್ಬಕ್ಕ, ಸಂಗೊಳ್ಳಿ ರಾಯಣ್ಣ, ಝಾನ್ಸಿ ರಾಣಿ ಮುಂತಾದವರ ಹೋರಾಟ ಮತ್ತು ಆಶಯಗಳನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿದ್ದ ಹೋರಾಟಗಾರರಿಂದ ದೇಶದ ಜನರನ್ನು ಪ್ರೀತಿಸುವುದನ್ನು ನಾವು ಕಲಿಯಬೇಕು. ದೇಶ ಅಂದರೆ ದೇಶದ ಜನ. ಯಾವುದೇ ಧರ್ಮದವರಿರಲಿ, ಯಾವುದೇ ಜಾತಿಯವರಿರಲಿ ಎಲ್ಲರೂ ನಮ್ಮ ದೇಶದ ಜನ. ದೇಶದ ಜನರನ್ನು ಪ್ರೀತಿಸುವುದೇ ನಿಜವಾದ, ಸರಿಯಾದ ದೇಶಪ್ರೇಮ” ಎಂದು ಹೇಳಿದರು.

Advertisements

“ಬಸವಣ್ಣನವರೂ ಇದನ್ನೇ ಹೇಳಿದ್ದರು. ಜಾತಿ, ಧರ್ಮದ ತಾರತಮ್ಯ ಇಲ್ಲದಂತೆ ಮನುಷ್ಯ ಪ್ರೀತಿಯನ್ನು ಸಾರಿದವರು ಬಸವಣ್ಣ. ಹೀಗಾಗಿ ನಮ್ಮ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿತು. ಜಾತಿ, ಧರ್ಮದ ಅಸಮಾನತೆ ಸಮಾಜದಲ್ಲಿ ಇರುವಷ್ಟೂ ದಿನ ಸಾಮಾಜಿಕ ನ್ಯಾಯ ಬರಲು ಸಾಧ್ಯವಿಲ್ಲ. ಇದು ಸಾಧ್ಯವಾಗಬೇಕಾದರೆ ರಾಜಕೀಯ ಸ್ವಾತಂತ್ರ್ಯದ ಜೊತೆಗೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಎಲ್ಲಾ ಜಾತಿ, ಧರ್ಮ, ಎಲ್ಕಾ ವರ್ಗದವರಿಗೂ ಸಿಗಬೇಕು” ಎಂದರು.

ಮಡಿವಾಳ ರಾಜ ಯೋಗೀಂದ್ರ ಸ್ವಾಮೀಜಿ ಕಲ್ಮಠ, ನಿಚ್ಚಣಿಕೆಯ ಗುರು ಮಡಿವಾಳೇಶ್ವರ ಮಠದ ಪಂಚಾಕ್ಷರಿ ಮಹಾಸ್ವಾಮಿಗಳು, ಕೂಡಲ ಸಂಗಮದ ಪಂಚಮಸಾಲಿ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಶಾಸಕ ಬಾಬಾಸಾಹೇಬ ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ಮುಖ್ಯ ಸಚೇತಕರಾದ ಅಶೋಕ ಮ.ಪಟ್ಟಣ, ಶಾಸಕರಾದ ಮಹಂತೇಶ ಕೌಜಲಗಿ, ಪ್ರಕಾಶ ಬಾ ಹುಕ್ಕೇರಿ, ಭರಮಗೌಡ ಕಾಗೆ, ವಿಶ್ವಾಸ್ ವೈದ್ಯ, ಆಸಿಫ್ ಸೇಠ್, ಬುಡಾ ಅಧ್ಯಕ್ಷರಾದ ಲಕ್ಷ್ಮಣ್ ರಾವ್ ಜಿಂಗಳೆ , ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X