ಕೆಕೆಆರ್‌ಡಿಬಿ ಪ್ರಗತಿ ಪರಿಶೀಲನೆ | ವರ್ಷಕ್ಕೆ 5 ಸಾವಿರ ಕೋಟಿ, ಜು.15ರೊಳಗೆ ಕ್ರಿಯಾ ಯೋಜನೆ ರಚಿಸಲು ಸಿಎಂ ಸೂಚನೆ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಜೂ.14) ಗೃಹ ಕಚೇರಿ ಕೃಷ್ಣಾದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ವ್ಯಾಪ್ತಿಯ ಪ್ರಗತಿ ಪರಿಶೀಲನೆ ನಡೆಸಿದರು.

- Advertisement -

ಕೆಕೆಆರ್‌ಡಿಬಿಗೆ ಚುನಾವಣಾ ಪ್ರಣಾಳಿಕೆಯಲ್ಲಿ ಹಾಗೂ ಆಯವ್ಯಯದಲ್ಲಿ ವರ್ಷಕ್ಕೆ 5,000 ಕೋಟಿ ರೂ. ಒದಗಿಸುವ ಭರವಸೆ ನೀಡಲಾಗಿದೆ. ಈ ಮೊತ್ತವನ್ನು ವೆಚ್ಚ ಮಾಡಲು ಅನುವಾಗುವಂತೆ ಜುಲೈ 15 ರೊಳಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸಿಎಂ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಅನುಮೋದನೆಯಾದ ಟೆಂಡರ್‌ ಕರೆಯದೆ ಇರುವ ಕಾಮಗಾರಿಗಳಿಗೆ ಕೂಡಲೇ ಟೆಂಡರ್‌ ಕರೆಯಬೇಕು. ಕಾಮಗಾರಿಗಳ ಮೌಲ್ಯಮಾಪನ ಮಾಡಬೇಕು. ಒಟ್ಟು ರೂ. 14,228 ಕೋಟಿ ಅನುದಾನದಲ್ಲಿ ರೂ.10,342.90 ಕೋಟಿ ವೆಚ್ಚವಾಗಿದೆ. ರೂ.2885.90 ಕೋಟಿ ಉಳಿದಿದೆ. ಬಾಕಿ ಉಳಿದ ಕಾಮಗಾರಿಗಳ ಕುರಿತು ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸಿ, ಅನುಷ್ಠಾನಕ್ಕೆ ಇರುವ ತೊಡಕುಗಳನ್ನು ನಿವಾರಿಸಬೇಕು” ಎಂದು ಹೇಳಿದರು.

“ಬಾಕಿ ಉಳಿದಿರುವ 3,528 ಕಾಮಗಾರಿಗಳನ್ನು ಜುಲೈ ಅಂತ್ಯದೊಳಗೆ ಪ್ರಾರಂಭಿಸಬೇಕು. ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಸೃಜನೆಗೆ ಹೆಚ್ಚು ಒತ್ತು ನೀಡಬೇಕು” ಎಂದು ಸಲಹೆ ನೀಡಿದರು.

ಸಭೆಯ ಹೈಲೈಟ್ಸ್

ಎರಡು ವರ್ಷಗಳನ್ನು ಶೈಕ್ಷಣಿಕ ವರ್ಷ ಎಂದು ಘೋಷಿಸಿ, ಶೇ.25 ರಷ್ಟು ಅನುದಾನ ವೆಚ್ಚ ಮಾಡಲು ತೀರ್ಮಾನಿಸಲಾಗಿದೆ.

ಆರೋಗ್ಯ ಕ್ಷೇತ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬೇಡಿಕೆ ಇದ್ದು, ಇದಕ್ಕೆ ಒತ್ತು ನೀಡಲು ತೀರ್ಮಾನಿಸಲಾಯಿತು.

ನಿಗದಿತ ಮಾನದಂಡಗಳಂತೆಯೇ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಉನ್ನತ ಶಿಕ್ಷಣ ಕ್ಷೇತ್ರದಲ್ಲಿ 41 ಮಹಿಳಾ ಪದವಿ ಕಾಲೇಜು ಪ್ರಾರಂಭಿಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಲಾಗಿದೆ. ಇದನ್ನು ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು.

ಅರಣ್ಯೀಕರಕ್ಕೆ ಮತ್ತು ಶುದ್ಧ ಕುಡಿಯುವ ನೀರು, ಚೆಕ್ ಡ್ಯಾಂಗಳಿಗೆ ಆಧ್ಯತೆ ನೀಡುವ ಮೂಲಕ ಅಂತರ್ಜಲ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಂಡು, ಕಾರ್ಯಕ್ರಮಗಳನ್ನು ರೂಪಿಸುವಂತೆ ಸೂಚನೆ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ರ‍್ಯಾಂಕ್ ಸಾಮರ್ಥ್ಯದ ಮಾನದಂಡವಲ್ಲ: ಮಕ್ಕಳ ವಿಕಾಸಕ್ಕೆ ಒತ್ತಡ ರಹಿತ ಕಲಿಕೆಯ ವಾತಾವರಣ ಅಗತ್ಯ

ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದು, ರ‍್ಯಾಂಕ್ ಪಡೆಯುವುದು ಅಥವಾ ಪರೀಕ್ಷೆಯಲ್ಲಿ ಶೇ.90ಕ್ಕಿಂತ...

ಪಶ್ಚಿಮ ಬಂಗಾಳ | ದುರ್ಗಾ ಪೂಜೆ ಪಂಡಾಲ್‌ನಲ್ಲಿ ಮಮತಾ ಮೇಲೆ ದಾಳಿ; ಟಿಎಂಸಿ ಮುಖಂಡರೇ ಗುರಿಯೆ?

ಈಗಾಗಲೇ ಸರಣಿ ದಾಳಿಯು ಟಿಎಂಸಿ ಕಾರ್ಯಕರ್ತರಲ್ಲಿ ಆತಂಕ ಸೃಷ್ಟಿಸಿದೆ. ಹೀಗಿರುವಾಗ ನಿನ್ನೆಯಷ್ಟೇ...