ಕೆಎ‌ನ್‌ ರಾಜಣ್ಣ ಮತ್ತು ಪರಮೇಶ್ವರ್‌ ಅವರೇ, ಸಚಿವಗಿರಿ ಎಂದರೆ ಚಮಚಾಗಿರಿ ಅಲ್ಲ: ಕುಮಾರಸ್ವಾಮಿ ಕಿಡಿ

Date:

Advertisements

ಸಚಿವರಾದ ಕೆಎನ್‌ ರಾಜಣ್ಣ ಮತ್ತು ಪರಮೇಶ್ವರ್‌ ಅವರು ಕುಮಾರಸ್ವಾಮಿ ಏನೇನೋ ಹೇಳುತ್ತಾರೆ, ಅದಕ್ಕೆಲ್ಲ ಉತ್ತರಿಸುವ ಅಗತ್ಯವಿಲ್ಲ ಎಂದು ಜಾರಿಕೊಂಡಿದ್ದಾರೆ. ‘ಸಚಿವಗಿರಿ ಎಂದರೆ ಚಮಚಾಗಿರಿ ಅಲ್ಲ’ ಅನ್ನುವುದನ್ನು ಇವರು ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಎಕ್ಸ್‌ ತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, “ಕರ್ನಾಟಕದ ‘ನೀರೋ’ಗೆ ರಾಜಕೀಯ ಊಳಿಗ ಮಾಡುತ್ತಿರುವ ಗೃಹಮಂತ್ರಿ ಪರಮೇಶ್ವರ್‌ ಮತ್ತು ಸಿದ್ದಹಸ್ತರು ಹೇಳಿದ್ದಕ್ಕೆಲ್ಲ ‘ಪರಿಪೂರ್ಣ ಸಹಕಾರ’ ಕೊಡುವ ಹಾಸನ ಜಿಲ್ಲಾ ಉಸ್ತುವಾರಿ ಕೆಎನ್‌ ರಾಜಣ್ಣ ಅವರು ಸಂಸದ ಪ್ರತಾಪ್‌ ಸಿಂಹ ಅವರ ಸಹೋದರನ ಪ್ರಕರಣಕ್ಕೆ ಸಂಬಂಧಿಸಿ ನಾನು ಕೊಟ್ಟಿರುವ ಹೇಳಿಕೆಗಳಿಗೆ ನೀಡಿದ ಪ್ರತಿಕ್ರಿಯೆ ಗಮನಿಸಿದ್ದೇನೆ. ತಪ್ಪಿದರೆ, ಸತ್ಯದ ಪರ ನಿಲ್ಲುವ ಗಂಡಸ್ತನ ನಮಗಿಲ್ಲ ಎಂಬುದನ್ನು ಒಪ್ಪಿಕೊಳ್ಳುವ ನೈತಿಕತೆಯನ್ನಾದರೂ ತೋರಬೇಕು” ಎಂದು ಹೇಳಿದ್ದಾರೆ.

“ಮಾಧ್ಯಮಗೋಷ್ಠಿಯಲ್ಲಿ ನಾನು ಹೇಳಿದ್ದೆಲ್ಲವೂ ಸತ್ಯ.. ಅಪ್ಪಟ ಸತ್ಯ. ದಾಖಲೆ ಇಟ್ಟುಕೊಂಡೇ ಹೇಳಿದ್ದೇನೆ. ಆ ದಾಖಲೆಗಳನ್ನು ತೆಗೆದುಕೊಂಡು ಎಲ್ಲಿಗೆ ಬರಲಿ, ಹೇಳಿ? ಆಗ ಕ್ರಮ ಜರುಗಿಸುವ ದಮ್ಮು ತಾಕತ್ತನ್ನು ತೋರುವಿರಾ? ಅಥವಾ ಪಲಾಯನ ಮಾಡುವಿರಾ” ಎಂದು ಪ್ರಶ್ನಿಸಿದ್ದಾರೆ.

Advertisements

“ಬಹಿರಂಗ ಚರ್ಚೆಗೂ ನಾನು ತಯಾರು. ನೀವು ಸಿದ್ಧವೇ? ಎಲ್ಲಿ? ಯಾವಾಗ? ಎಷ್ಟೊತ್ತಿಗೆ? ನೀವು ಫಿಕ್ಸ್ ಮಾಡುತ್ತೀರಾ? ನಾನು ಫಿಕ್ಸ್ ಮಾಡಲಾ? ಅಲ್ಲಿ ನಾನು ಹೇಳಿದ್ದೇನು ಎಂಬ ಬಗ್ಗೆ ಚರ್ಚಿಸೋಣ. ಸರಿ, ವಿಕ್ರಂಸಿಂಹ ಮರ ಕಡಿದಿದ್ದರೆ ಎಫ್‌ಐಆರ್‌ನಲ್ಲಿ ಅವರ ಹೆಸರಿಲ್ಲ, ಯಾಕೆ!? ಆ ಎಫ್‌ಐಆರ್‌ ಪ್ರತಿ ಲಗತ್ತಿಸಿದ್ದೇನೆ. ಅದನ್ನು ನೋಡಿ, ಆಮೇಲೆ ಮಾತನಾಡಿ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪುನೀತ್ ಕೆರೆಹಳ್ಳಿ ಎಂಬ ಮತಾಂಧನಿಗೆ ಬಿಜೆಪಿಯಿಂದ ಕೋಮು ಗಲಭೆ ಸೃಷ್ಟಿಗೆ ಫತ್ವಾ ಬಂದಿದೆ: ಬಿ ಕೆ ಹರಿಪ್ರಸಾದ್‌ ಆರೋಪ

“ದಲಿತರ ಹೆಸರಿನಲ್ಲಿ ರಾಜಕೀಯ ಬಾಳು ಕಟ್ಟಿಕೊಂಡ ಪರಮೇಶ್ವರ್, ರಾಜಣ್ಣನವರೇ.. ನಿಮ್ಮ ರೋಷಾವೇಷ ಆ ದಲಿತ ಅಧಿಕಾರಿಯನ್ನು ಅಮಾನತು ಮಾಡುವ ಕ್ಷಣದಲ್ಲಿ ಯಾರ ಬೂಟಿನ ಕೆಳಗೆ ಬಿದ್ದು ಹೊರಳಾಡುತ್ತಿತ್ತು? ಒಬ್ಬ ಗಾರ್ಡ್ ಅಮಾನತಿಗೂ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯೇ ಆದೇಶ ಹೊರಡಿಸಬೇಕೆ?” ಎಂದು ವಾಗ್ದಾಳಿ ನಡೆಸಿದ್ದಾರೆ.

“ಅಹಿಂದ ಅಹಿಂದ ಎಂದು ಬೆಳಗೆದ್ದರೆ ಭಜನೆ ಮಾಡುವ ನೀವು, ಆ ಅಧಿಕಾರಿಯಿಂದ ₹50 ಲಕ್ಷ ಕಿತ್ತ ನಿಮ್ಮ ನೀತಿಗೆಟ್ಟ ಹೊಲಸು ಶಾಸಕನ ಬಗ್ಗೆ ನಿಮ್ಮ ಮೌನ ಅಸಹ್ಯ. ನಿಮ್ಮದೇ ಲಜ್ಜೆಗೆಟ್ಟ ಸರಕಾರ ಎಸಗಿದ ತಪ್ಪಿಗೆ ದಲಿತ ಅಧಿಕಾರಿಗೆ ಶಿಕ್ಷೆಯೇ? ಇದೆಲ್ಲದರ ಚಿದಂಬರ ರಹಸ್ಯ ಯಶವಂತಪುರ ಫ್ಲಾಟ್ ನಲ್ಲಿ ಅಡಗಿದೆ. ಯಾವ ತನಿಖೆ ಮಾಡುತ್ತೀರಿ?” ಎಂದು ಕೇಳಿದ್ದಾರೆ.

“ಮೈಸೂರು ಲೋಕಸಭೆ ಕ್ಷೇತ್ರದಲ್ಲಿ ಪ್ರತಾಪ್ ಸಿಂಹ ಅವರನ್ನು ಮುಗಿಸಲು ಹೂಡಿದ ಟರ್ಮಿನೇಟರ್ ಸಿನಿಮಾ ಇದು. ಅದರ ಹಿಂದಿರುವ ಸಿದ್ಧಸೂತ್ರದಾರನ ಕಳ್ಳಹೆಜ್ಜೆಗಳನ್ನು ನಾನು ಕಾಣದವನೇನೂ ಅಲ್ಲ. ಇಡೀ ವಿಕ್ರಂಸಿಂಹ ಅಂಕಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಹಿನ್ನೆಲೆ ಸಂಗೀತ, ಎಲ್ಲವೂ ಒಬ್ಬರದೇ. ಅವರೇ ಶ್ರೀಮನ್ ಸಿದ್ದರಾಮಣ್ಣ!” ಎಂದು ವ್ಯಂಗ್ಯವಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಬಿಜೆಪಿ ಸರಕಾರ ಇದ್ದಾಗ,, ಇನ್ಸ್ಪೆಕ್ಟರ್ ವರ್ಗಾವಣೆಗೆ ಲಕ್ಷಾಂತರ ರೂಪಾಯಿ ಬುಕ್ ಆಗಿತ್ತು ಅಂತಾನೂ ಪತ್ರಿಕಾಗೋಷ್ಠಿ ಮಾಡಿದ್ದ,,,ಶುದ್ಧ ಕೈಯುಳ್ಳವರು, ಮಾಜಿ ಜ್ಯಾತ್ಯಾತೀತರು,,ಈಗಿನ ರಾಮಭಕ್ತ ಕು ಸ್ವಾಮಿಗಳು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X