ಯೋಗ್ಯತೆ ಇಲ್ಲವೆಂದರೆ ಚುನಾವಣೆಗೆ ಹೋಗೋಣ; ರಾಜಣ್ಣ ವಿರುದ್ಧ ಡಿಕೆಸು ಕಿಡಿ

Date:

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲಾದ ಕಾಂಗ್ರೆಸ್‌, ಇದೀಗ ಒಳಜಗಳಕ್ಕಿಳಿದಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹುದ್ದೆಗಳ ಬಗ್ಗೆ ಪಕ್ಷದ ಸಚಿವರು ಹಾಗೂ ಮಠಗಳ ಸ್ವಾಮೀಜಿಗಳು ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಬಣಗಳ ಹೆಸರಿನಲ್ಲಿ ನಡೆಯುತ್ತಿದ್ದ ಆಂತರಿಕ ಕಲಹ ಬಹಿರಂಗಗೊಂಡಿದ್ದು, ಕಾಂಗ್ರೆಸ್‌ ನಾಯಕರು ಒಬ್ಬರ ಮೇಲೊಬ್ಬರು ಕಿಡಿಕಾರುತ್ತಿದ್ದಾರೆ.

- Advertisement -

ಮೂರು ಉಪಮುಖ್ಯಮಂತ್ರಿಗಳ ಹುದ್ದೆಗೆ ಸಚಿವ ಕೆ.ಎನ್ ರಾಜಣ್ಣ, ಸತೀಶ್‌ ಜಾರಕಿಹೊಳಿ, ಪರಮೇಶ್ವರ ಬೇಡಿಕೆ ಇಡುತ್ತಿದ್ದರೆ, ಮುಖ್ಯಮಂತ್ರಿ ಸ್ಥಾನವನ್ನು ಡಿ.ಕೆ ಶಿವಕುಮಾರ್‌ಗೆ ಬಿಟ್ಟುಕೊಡಿ ಎಂದು ಸಿದ್ದರಾಮಯ್ಯ ಎದುರು ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿ ಬೇಡಿಕೆ ಇಟ್ಟಿದ್ದರು. ಇದು ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಸ್ವಾಮೀಜಿ, ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರುತ್ತಿರುವ ಸಚಿವ ಕೆ.ಎನ್ ರಾಜಣ್ಣ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಡಿಕೆ ಶಿವಕುಮಾರ್ ತ್ಯಜಿಸಬೇಕು ಎಂದು ಹೇಳಿದ್ದಾರೆ. ಅವರ ಹೇಳಿಕೆಗೆ ತೀವ್ರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಂಸದ ಡಿ.ಕೆ ಸುರೇಶ್, “ಉತ್ತಮ ಆಡಳಿತ ನಡೆಸಬೇಕೆಂದು ಡಿಕೆ ಶಿವಕುಮಾರ್‌ಗೆ ಹೈಕಮಾಂಡ್ ಜವಾಬ್ದಾರಿ ನೀಡಿದೆ. ಅವರಿಗೆ ಯೋಗ್ಯತೆ ಇಲ್ಲವೆಂದು ಹೇಳುವುದಾದರೆ, ಚುನಾವಣೆಗೆ ಹೋಗುವುದು ವಾಸಿ. ನಾವೆಲ್ಲರೂ ಚುನಾವಣೆಗೆ ಹೋಗೋಣ” ಎಂದು ಆಕ್ರೋಶ ವ್ಯಕ್ತಪಡಿಸಿಸದ್ದಾರೆ.

“ಡಿಕೆ ಶಿವಕುಮಾರ್ ಅವರಿಗೆ ಜವಾಬ್ದಾರಿ ಕೊಟ್ಟಿರುವುದು ಪಕ್ಷದ ವರಿಷ್ಠರು. ಯಾರೂ ಶಾಶ್ವತ ಅಲ್ಲ, ಯಾವ ಹುದ್ದೆಯೂ ಶಾಶ್ವತ ಅಲ್ಲ. ಹೇಳಿಕೆ ಕೊಡುತ್ತಿರುವವರು ಹಿಂದೆ ತಿರುಗಿ ಅವರ ಬೆನ್ನು ನೋಡಿಕೊಳ್ಳಬೇಕು” ಎಂದು ಕಿಡಿಕಾರಿದ್ದಾರೆ.

“ಮುಖ್ಯಮಂತ್ರಿ ಸ್ಥಾನದ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ಈಗ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಆ ಸ್ಥಾನ‌ ಖಾಲಿಯಾದ ಮೇಲೆ ಆ ಹುದ್ದೆ ಚರ್ಚೆಗೆ ಬರುತ್ತದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ: ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ವ್ಯಾಪ್ತಿಗೆ ಬರುವ ಗುರುಸುಣಿಗಿ ಗುಡ್ಡದಲ್ಲಿರುವ ಸುಪ್ರಸಿದ್ಧ...

ಬ್ರಿಕ್ಸ್‌ ಶೃಂಗಸಭೆ | ಚೀನಾಗೆ ಹೆಚ್ಚಿನ ಲಾಭ, ಭಾರತಕ್ಕೆ ಸವಾಲುಗಳ ನಿರ್ವಹಣೆ: ಕಪಿಲ್ ಸಿಬಲ್

ಇತ್ತೀಚೆಗೆ ದೆಹಲಿಯಲ್ಲಿ ಮುಕ್ತಾಯಗೊಂಡ 'ಬ್ರಿಕ್ಸ್‌' ಶೃಂಗಸಭೆಯಿಂದ ಚೀನಾ ಅತ್ಯಂತ ಹೆಚ್ಚಿನ ಲಾಭವನ್ನು...

ಮತ್ತೆ ಆಪರೇಷನ್ ಕಮಲ: ಬಿಜೆಪಿ ಸೇರಲಿದ್ದಾರೆ 17 ಎನ್‌ಸಿಪಿಐ ಸಂಸದರು ಎಂದ ಬಂಡಾಯ ಸಂಸದ

ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು ನ್ಯಾಷನಲಿಸ್ಟ್...

ಉಮರ್ ಖಾಲಿದ್ ಕುರಿತ ‘ಕೈದಿ‌ ನಂ. 626710 ಈಸ್ ಪ್ರೆಸೆಂಟ್’ ಸಾಕ್ಷ್ಯಚಿತ್ರ ಪ್ರದರ್ಶನ ರದ್ದಾಗಿದ್ದು ಯಾಕೆ?

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (NLSIU) ಜವಾಹರಲಾಲ್...