ದೆಹಲಿಗೆ ರಾಜ್ಯತ್ವ, ಉಚಿತ ವಿದ್ಯುತ್; ಕೇಜ್ರಿವಾಲ್‌ರ ಆರು ಚುನಾವಣಾ ಭರವಸೆಗಳಿವು

Date:

ದೆಹಲಿಗೆ ರಾಜ್ಯತ್ವ, ದೇಶದ ಪ್ರತಿಯೊಬ್ಬರಿಗೂ ಉಚಿತ ಆರೋಗ್ಯ ರಕ್ಷಣೆ ಸೇರಿದಂತೆ ಆರು ಚುನಾವಣಾ ಭರವಸೆಗಳನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಘೋಷಿಸಿದ್ದಾರೆ ಎಂದು ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ತಿಳಿಸಿದ್ದಾರೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ರ‍್ಯಾಲಿಯಲ್ಲಿ ಈ ಘೋಷಣೆ ಮಾಡಲಾಗಿದೆ.

“ಲೋಕತಂತ್ರ ಬಚಾವೋ” ಅಥವಾ ‘ಪ್ರಜಾಪ್ರಭುತ್ವ ಉಳಿಸಿ’ ಎಂಬ ರ‍್ಯಾಲಿಯಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಫಾರೂಕ್ ಅಬ್ದುಲ್ಲಾ ಸೇರಿದಂತೆ ಪ್ರಮುಖ ವಿರೋಧ ಪಕ್ಷದ ನಾಯಕರು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಸುನೀತಾ ಕೇಜ್ರಿವಾಲ್ ಅವರು ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ತನ್ನ ಪತಿಯಿಂದ ಪತ್ರವನ್ನು ಓದಿದರು.

ದೆಹಲಿ ಕೇಜ್ರಿವಾಲ್‌ರ ಆರು ಚುನಾವಣಾ ಭರವಸೆಗಳಿವು

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

1. ದೇಶದಾದ್ಯಂತ 24 ಗಂಟೆ ವಿದ್ಯುತ್
2. ದೇಶದಾದ್ಯಂತ ಬಡವರಿಗೆ ಉಚಿತ ವಿದ್ಯುತ್
3. ಪ್ರತಿ ಗ್ರಾಮದಲ್ಲಿ ಅತ್ಯುತ್ತಮ ಸರ್ಕಾರಿ ಶಾಲೆಗಳನ್ನು ನಿರ್ಮಿಸುವುದು
4. ಪ್ರತಿ ಗ್ರಾಮದಲ್ಲಿ ಕ್ಲಿನಿಕ್‌ಗಳನ್ನು ಸ್ಥಾಪಿಸುವುದು
5. ಸ್ವಾಮಿನಾಥನ್ ಆಯೋಗದ ವರದಿಯಲ್ಲಿ ನೀಡಲಾಗಿರುವ ಬೆಳೆಗಳಿಗೆ ನ್ಯಾಯಯುತ ಬೆಲೆಯನ್ನು ರೈತರಿಗೆ ನೀಡುವುದು
6. ದೆಹಲಿಗೆ ಸಂಪೂರ್ಣ ರಾಜ್ಯ ಸ್ಥಾನಮಾನ ನೀಡುವುದು.

ಇದನ್ನು ಓದಿದ್ದೀರಾ? ನಿರಂಕುಶಾಧಿಕಾರದತ್ತ ಸಾಗುತ್ತಿದೆ ಭಾರತ; ‘ಇಂಡಿಯಾ’ ಮೈತ್ರಿಕೂಟದ ರ್‍ಯಾಲಿಯಲ್ಲಿ ಉದ್ಧವ್ ಠಾಕ್ರೆ

“ನನ್ನ ಪ್ರೀತಿಯ ಭಾರತೀಯರೇ, ನಿಮಗೆಲ್ಲರಿಗೂ ನಿಮ್ಮ ಈ ಮಗನ ಶುಭಾಶಯಗಳು. ನಾನು ಮತ ಕೇಳುತ್ತಿಲ್ಲ, ಚುನಾವಣೆಯಲ್ಲಿ ಗೆಲ್ಲಲು ಯಾರನ್ನೂ ಸೋಲಿಸುವ ಬಗ್ಗೆ ಮಾತನಾಡುವುದಿಲ್ಲ. ನಾನು ಭಾರತವನ್ನು ನವ ಭಾರತ ಮಾಡುವ ಬಗ್ಗೆ ಮಾತನಾಡುತ್ತಿದ್ದೇನೆ. ನಾನು ಜೈಲಿನಲ್ಲಿದ್ದೇನೆ, ಇಲ್ಲಿ ನನಗೆ ಯೋಚಿಸಲು ಸಾಕಷ್ಟು ಸಮಯ ಸಿಗುತ್ತದೆ. ಭಾರತಮಾತೆಯ ಬಗ್ಗೆ ಯೋಚಿಸುತ್ತೇನೆ, ಜನರಿಗೆ ಉತ್ತಮ ಶಿಕ್ಷಣ ಸಿಗದಿದ್ದಾಗ, ಸರಿಯಾದ ಚಿಕಿತ್ಸೆ ಇಲ್ಲದಾಗ, ವಿದ್ಯುತ್ ಕಡಿತ ಸಂಭವಿಸಿದಾಗ, ರಸ್ತೆಗಳು ಹಾಳಾದಾಗ ನಮ್ಮ ಭಾರತಮಾತೆಗೆ ನೋವಾಗುತ್ತದೆ” ಎಂದು ಕೇಜ್ರಿವಾಲ್ ಪತ್ರದಲ್ಲಿ ತಿಳಿಸಿದ್ದಾರೆ.

ಎನ್‌ಸಿಪಿಯ ಶರದ್ ಪವಾರ್, ಶಿವಸೇನೆ (ಯುಬಿಟಿ) ಉದ್ಧವ್ ಠಾಕ್ರೆ, ಸಮಾಜವಾದಿ ಪಕ್ಷದಿಂದ ಅಖಿಲೇಶ್ ಯಾದವ್, ಸಿಪಿಐ(ಎಂ)ನ ಸೀತಾರಾಂ ಯೆಚೂರಿ, ಸಿಪಿಐನ ಡಿ ರಾಜಾ, ಪಿಡಿಪಿಯ ಮೆಹಬೂಬಾ ಮುಫ್ತಿ, ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್ ಸೇರಿದಂತೆ ಅನೇಕ ಪ್ರಮುಖ ವಿರೋಧ ಪಕ್ಷದ ನಾಯಕರು ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಕಲಿ ಸುದ್ದಿ ಹರಡಲು ಬಿಜೆಪಿ ಐಟಿ ಸೆಲ್ ಉದ್ಯೋಗಿಗಳಿಗೆ ಮಾಸಿಕ 50 ಸಾವಿರ ರೂ. ವೇತನ!

ಸಿಂಗಾಪುರ ಮೂಲದ ಮಾಧ್ಯಮ ನ್ಯೂಸ್ ಏಷ್ಯಾ ಸಾಕ್ಷ್ಯಚಿತ್ರ (documentary) ಒಂದನ್ನು ಬಿಡುಗಡೆ...

ರಾಜ್ಯದಲ್ಲಿ 20 ಕ್ಷೇತ್ರ ಗೆಲ್ಲುತ್ತೇವೆ; ಯಾವ ಅನುಮಾನವೂ ಇಲ್ಲ: ಡಿ ಕೆ ಶಿವಕುಮಾರ್‌ ವಿಶ್ವಾಸ

ಹಾಸನ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೋಲಾರ ಈ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್...

ಪ್ರಧಾನಿ ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಅವರ ರಾಜ್ಯ ಪ್ರವಾಸ ನಿಗದಿ

ಪ್ರಧಾನಿ ಮೋದಿಯವರ ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಚುನಾವಣಾ ಪ್ರಚಾರ...

ಯುಪಿಎ ಅವಧಿಗಿಂತ ಬಿಜೆಪಿ ಅವಧಿಯಲ್ಲಿ 86 ಪಟ್ಟು ಹೆಚ್ಚು ಇ.ಡಿ ದಾಳಿ

ಅಕ್ರಮ ಹಣ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಯುಪಿಎ...