ಕೊಡಗು | ಗ್ರೇಟರ್ ರಾಜಾಸೀಟ್ ಕಾಮಗಾರಿಯಲ್ಲಿ ಬಹುಕೋಟಿ ಹಗರಣ; ಲೋಕಾಯುಕ್ತ ತನಿಖೆ ಆರಂಭ

Date:

ಕೊಡಗು ಜಿಲ್ಲೆಯ ಮಡಿಕೇರಿ ನಗರದ ಗ್ರೇಟರ್ ರಾಜಾಸೀಟ್ ಕಾಮಗಾರಿಯಲ್ಲಿ ಬಹುಕೋಟಿ ಹಗರಣ ನಡೆದಿದೆ ಎಂದು ಕಾಂಗ್ರೆಸ್ ಮುಖಂಡ ತೆನ್ನಿರಾ ಮೈನಾ ದೂರು ಸಲ್ಲಿಸಿದ್ದು, ಅದರ ಅನ್ವಯ ಕರ್ನಾಟಕ ಲೋಕಾಯುಕ್ತ ತನಿಖೆ ಕೈಗೆತ್ತಿಕೊಂಡಿದೆ.

- Advertisement -

ಸುಮಾರು ₹4.55 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಗ್ರೇಟರ್ ರಾಜಾಸೀಟ್ ಯೋಜನೆಯನ್ನು ಅಂದಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ 2023ರ ಮಾರ್ಚ್‌ 18ರಂದು ಲೋಕಾರ್ಪಣೆ ಮಾಡಿದ್ದರು. ಕಾಮಗಾರಿ ನಿರ್ವಹಣೆ ಮಾಡಿದ ಮಡಿಕೇರಿ ಪಿಡಬ್ಲ್ಯೂಡಿ ಇಲಾಖೆ ಕಾಮಗಾರಿ ಅಪೂರ್ಣವಾಗಿರುವ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆಗೆ ಹಸ್ತಾಂತರ ಮಾಡದೆ ಲೋಕಾರ್ಪಣೆ ಮಾಡಿದ್ದು, ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಈ ಹಿನ್ನಲೆಯಲ್ಲಿ ತೆನ್ನಿರಾ ಮೈನಾ ಅವರು 2023ರ ಮಾರ್ಚ್‌ 20ರಂದು, ʼಕಾಮಗಾರಿಯಲ್ಲಿ ಬಹುಕೋಟಿ ಅಕ್ರಮ ಹಾಗೂ ಕಳಪೆ ಕಾಮಗಾರಿ ನಡೆದಿದೆʼ ಎಂದು ದಾಖಲೆಗಳೊಂದಿಗೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸದರಿ ಕಾಮಗಾರಿಗೆ ಸಂಬಂಧಿಸಿದಂತೆ ಮೂಲ ಎಂ ಬಿ ಪುಸ್ತಕವನ್ನು ನಾಶಪಡಿಸಿ, ನಕಲಿ ಎಂ ಬಿ ಪುಸ್ತಕ ರಚಿಸಿ ಒಂದು ಕೋಟಿ 58 ಲಕ್ಷದ 43 ಸಾವಿರದ 136 ರೂಗಳನ್ನು ಕಾನೂನು ಬಾಹಿರವಾಗಿ ಪಾವತಿ ಮಾಡಿರುವುದನ್ನು ಉಲ್ಲೇಖಿಸಿ ಮೂಲ ಎಂ ಬಿ ಪುಸ್ತಕ ಸಂಖ್ಯೆ 12086ರ ದೃಢೀಕೃತ ದಾಖಲೆಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಮಕ್ಕಳ ದಸರಾ ಕಲಾಥಾನ್‌ಗೆ ಸಚಿವ ಹೆಚ್ ಸಿ ಮಹದೇವಪ್ಪ ಚಾಲನೆ

ವಿವರಗಳನ್ನು ಪರಿಶೀಲಿಸಿ ವಿಚಾರಣೆ ನಡೆಸಿದ ಲೋಕಾಯುಕ್ತ ನ್ಯಾಯಾಲಯ, ಲೋಕಾಯುಕ್ತ ತಾಂತ್ರಿಕ ವಿಭಾಗದ ಅಧಿಕಾರಿ ತೇಜಶ್ರೀ ಬಿ ಮುದ್ದೋಡಿಯವರನ್ನು ತನಿಖಾಧಿಕಾರಿಯಾಗಿ ನೇಮಿಸಿದ್ದು, 2024 ಅಕ್ಟೋಬರ್‌ 14 ಮತ್ತು 15ರಂದು ದೂರುದಾರರು ಹಾಗೂ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ತನಿಖೆ ನಡೆಸಲಿದ್ದಾರೆ.

“ಕಾಮಗಾರಿಯಲ್ಲಿ ನಿರ್ವಹಣೆ ಹೊತ್ತಿದ್ದ ಕಿರಿಯ ಎಂಜಿನಿಯರ್ ಕೆ ಎಲ್ ದೇವರಾಜ್ ಅಮಾನತಾಗಿದ್ದಾರೆ. ಸದರಿ ಪ್ರಕರಣದಲ್ಲಿ‌ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಅಕ್ರಮವೆಸಗಿರುವುದು ಮೇಲ್ನೋಟಕ್ಕೆ ಕಾಣಿಸುತ್ತಿದ್ದು, ಶಿಕ್ಷೆಗೆ ಒಳಗಾಗಲಿದ್ದಾರೆ” ಎಂದು ದೂರುದಾರ ತೆನ್ನಿರ ಮೈನಾ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...