ಕೋಗಿಲು ಲೇಔಟ್ ಪ್ರಕರಣ | ಪುನರ್ವಸತಿ ಕಲ್ಪಿಸಿಕೊಡುವಂತೆ ಹೈಕೋರ್ಟ್‌ ಮೆಟ್ಟಿಲೇರಿದ ನಿರಾಶ್ರಿತರು

Date:

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡುವುದಕ್ಕೆ ಸರ್ಕಾರ ಮುಂದಾಗಿದೆ. ಈ ಮಧ್ಯೆಯೇ ಪುನರ್ವಸತಿ ಪರಿಹಾರ ಕಲ್ಪಿಸಿಕೊಡುವಂತೆ ನಿರಾಶ್ರಿತರು ಹೈಕೋರ್ಟ್‌ ಮೆಟ್ಟಿಲೇರಿರುವುದಾಗಿ ತಿಳಿದುಬಂದಿದೆ.

- Advertisement -

ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್‌ಗಳನ್ನು ಜಿಬಿಎ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಇದೀಗ ಅಲ್ಲಿದ್ದ ನಿರಾಶ್ರಿತರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸ್ಥಳೀಯ ಸಾಮಾಜಿಕ ಕಾರ್ಯಕರ್ತೆ ಜೈಬಾ ತಬಸ್ಸುಮ್ ಸೇರಿದಂತೆ ಸಂತ್ರಸ್ತರು ಹೈಕೋರ್ಟಿಗೆ ಪಿಐಎಲ್ ಸಲ್ಲಿಸಿದ್ದು, ಪುನರ್ವಸತಿ ಪರಿಹಾರ ಕಲ್ಪಿಸಿಕೊಡುವಂತೆ ಮನವಿ ಮಾಡಿದ್ದಾರೆ.

“30 ವರ್ಷಗಳಿಂದ ಕೋಗಿಲು ಬಡಾವಣೆಯಲ್ಲಿ ವಾಸಿಸುತ್ತಿದ್ದು, ಇದೀಗ ವಸೀಂ, ಫಕೀರ್ ಕಾಲೋನಿಗಳ ತೆರವಿನಿಂದಾಗಿ ಇಲ್ಲಿನ ಜನರು ವಸತಿ ಕಳೆದುಕೊಂಡಿದ್ದಾರೆ. ಯಾವುದೇ ನೋಟಿಸ್‌ ನೀಡದೆ ಏಕಾಏಕಿ ಬಂದು ಮನೆಗಳಲ್ಲಿದ್ದ ಗ್ಯಾಸ್ ಸಿಲಿಂಡರ್ ಅನ್ನು ಮಾತ್ರ ತೆಗೆಯಲು ಬಿಟ್ಟಿದ್ದಾರೆ. ಮೂಲಭೂತ ಅವಶ್ಯಕತೆಗಳಾದ ಬಟ್ಟೆ, ಪಾತ್ರೆಗಳನ್ನು ಕೂಡ ತೆಗೆಯಲು ಜಿಬಿಎ ಅಧಿಕಾರಿಗಳು ಬಿಟ್ಟಿಲ್ಲ. ಮಕ್ಕಳ ಪುಸ್ತಕ, ಬ್ಯಾಗ್‌ಗಳು ಕೂಡ ಅವಶೇಷಗಳ ಅಡಿಯಲ್ಲಿ ಸಿಲುಕಿದೆ. ಇದರಿಂದಾಗಿ 300ಕ್ಕೂ ಅಧಿಕ ಬಡ ಮಕ್ಕಳ ವಿದ್ಯಾಭ್ಯಾಸಕ್ಕೂ ತೊಂದರೆಯಾಗಿದೆ. ಪರ್ಯಾಯ ಸೌಕರ್ಯ ಕೂಡ ಕಲ್ಪಿಸಲು ಮುಂದಾಗಿಲ್ಲ. ಏಕಾಏಕಿ ಬಂದು ತೆರವುಗೊಳಿಸಿದ್ದಾರೆ. ಯಾವುದೇ ಕಟ್ಟಡಗಳನ್ನು ತೆರವುಗೊಳಿಸುವುದಕ್ಕೂ ಮುನ್ನ ಮಾಹಿತಿ ನೀಡಬೇಕು ಎಂಬ ಮಾರ್ಗಸೂಚಿಯನ್ನು ಸುಪ್ರೀಂ ಕೋರ್ಟ್‌ ಸ್ಪಷ್ಟವಾಗಿ ಸೂಚಿಸಿದೆ. ಆದರೆ, ಜಿಬಿಎ ಅಧಿಕಾರಿಗಳು ಸುಪ್ರೀಂ ಕೋರ್ಟಿನ ಮಾರ್ಗಸೂಚಿಗಳನ್ನು ಧಿಕ್ಕರಿಸಿ ಏಕಾಏಕಿ ಜೆಸಿಬಿ ತಂದು ತೆರವುಗೊಳಿಸಿದ್ದಾರೆ. ಇದರಿಂದಾಗಿ ಮೂಲಭೂತ ಹಕ್ಕಿಗೂ ಘನತೆ ಉಂಟಾಗಿದೆ. ಹೀಗಾಗಿ ಪುನರ್ವಸತಿ, ಪರಿಹಾರ ಕಲ್ಪಿಸಿಕೊಡಬೇಕು” ಎಂದು ಹೈಕೋರ್ಟಿಗೆ ಸಲ್ಲಿಸಿರುವ ಮನವಿಯಲ್ಲಿ ತಿಳಿಸಿದ್ದಾರೆ.

Advertisements
DCM visits Kogilu

ಸಂತ್ರಸ್ತರ ಪರವಾಗಿ ಹೈಕೋರ್ಟ್‌ ವಕೀಲರಾದ ನಾಗರತ್ನಂ ಕೆ, ಸೌಧ ಅಕ್ಕರಂಗಡಿ, ಲಕ್ಷ್ಮಿ ಕೇಶವ್ ಶ್ರೀನಿವಾಸನ್ ವಕಾಲತ್ತು ವಹಿಸಿದ್ದಾರೆ.

ಇದನ್ನು ಓದಿದ್ದೀರಾ? ಕೋಗಿಲು ಬಡಾವಣೆ ವಿಚಾರ | ಅರ್ಹರಿಗಷ್ಟೇ ಜ.2ಕ್ಕೆ ಮನೆಗಳ ವಿತರಣೆ; ಸಚಿವ ಜಮೀರ್ ಸ್ಪಷ್ಟನೆ

ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆಗಳ ತೆರವಿನಿಂದ ನಿರಾಶ್ರಿತರಾದವರಿಗೆ ಜನವರಿ 2ರಂದು ಸರ್ಕಾರ ಬೈಯ್ಯಪ್ಪನಹಳ್ಳಿಯಲ್ಲಿ ಫ್ಲ್ಯಾಟ್ ನೀಡಲು ಮುಂದಾಗಿದೆ. ಈ ನಡುವೆ ಅರ್ಹರಿಗೆ ಮಾತ್ರ ಮನೆ ನೀಡುವುದಾಗಿ ಸರ್ಕಾರ ತಿಳಿಸಿದ್ದು, ನಿರಾಶ್ರಿತರ ದಾಖಲೆಗಳನ್ನ ಪರಿಶೀಲನೆ ನಡೆಸಿದೆ. ಈ ಮಧ್ಯೆ ಅಕ್ರಮ ವಲಸಿಗರಿಗೆ ಮನೆ ನೀಡದಂತೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...