ಕೋಲಾರ | ಇಬ್ಬರ ಜಗಳದಲ್ಲಿ ಮೂರನೇಯವರಿಗೆ ಲಾಭ; ಗೌತಮ್‌ಗೆ ಕಾಂಗ್ರೆಸ್‌ ಟಿಕೆಟ್

Date:

Advertisements

ಲೋಕಸಭಾ ಚುನಾವಣೆ ಘೋಷಣೆಯಾಗಿದ್ದು, ಕರ್ನಾಟಕದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆಯಲಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ 27 ಕ್ಷೇತ್ರಗಳಿಗೆ ಈಗಾಗಲೇ ಕಾಂಗ್ರೆಸ್‌ ಟಿಕೆಟ್ ಘೋಷಿಸಿತ್ತು. ಆದರೆ, ಕಗ್ಗಂಟಾಗಿ ಉಳಿದಿದ್ದ ಕೋಲಾರ ಕ್ಷೇತ್ರದಲ್ಲಿ ಎಲ್ಲ ಬಣಗಳನ್ನು ಬದಿಗೊತ್ತಿರುವ ಕಾಂಗ್ರೆಸ್‌, ಅಚ್ಚರಿ ಎಂಬಂತೆ ಕೋಲಾರದ ಮಾಜಿ ಮೇಯರ್ ವಿಜಯ್ ಕುಮಾರ್ ಪುತ್ರ ಕೆ ವಿ ಗೌತಮ್‌ ಅವರಿಗೆ ಟಿಕೆಟ್‌ ಘೋಷಿಸಿದೆ.

ಶುಕ್ರವಾರ ರಾಜ್ಯದ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದ ಕಾಂಗ್ರೆಸ್‌, ಕೋಲಾರ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಿಸಿರಲಿಲ್ಲ. ಇದೀಗ, ಆ ಕ್ಷೇತ್ರಕ್ಕೂ ಅಭ್ಯರ್ಥಿಯನ್ನು ಘೋಷಿಸಿಸುವ ಮೂಲಕ ಎಲ್ಲ 28 ಕ್ಷೇತ್ರಗಳಿಗೂ ಟಿಕೆಟ್‌ ಘೋಷಿಸಿದಂತಾಗಿದೆ.

ಕೋಲಾರದಲ್ಲಿ ಲೋಕಸಭೆ ಚುನಾವಣಾ ಟಿಕೆಟ್‌ ಸಂಬಂಧ ಕಾಂಗ್ರೆಸ್‌ನಲ್ಲಿ ಸಚಿವ ಕೆ ಎಚ್‌ ಮುನಿಯಪ್ಪ ಮತ್ತು ಮಾಜಿ ಸ್ಪೀಕರ್ ರಮೇಶ್‌ ಕುಮಾರ್‌ ಬಣಗಳ ನಡುವೆ ಜಗ್ಗಾಟ ನಡೆಯುತ್ತಿತ್ತು. ಮುನಿಯಪ್ಪ ಅವರು ತಮ್ಮ ಅಳಿಯ ಚಿಕ್ಕ ಪೆದ್ದಣ್ಣ ಅವರಿಗೆ ಟಿಕೆಟ್ ಕೊಡಿಸಲು ಯತ್ನಿಸುತ್ತಿದ್ದರು. ಹನುಮಂತಯ್ಯಗೆ ಟಿಕೆಟ್ ನೀಡಬೇಕೆಂದು ರಮೇಶ್ ಕುಮಾರ್ ಬಣ ಒತ್ತಾಯಿಸಿತ್ತು. ಆದರೆ, ಈ ಎರಡೂ ಬಣಗಳ ಕಿತ್ತಾಟದಿಂದಾಗಿ, ಯಾರಿಗೆ ಟಿಕೆಟ್ ನೀಡಬೇಕು ಎಂಬುದು ಕಾಂಗ್ರೆಸ್‌ಗೆ ತಲೆನೋವಾಗಿತ್ತು.

Advertisements

ಇತ್ತೀಚೆಗೆ ಸಿಎಂ ಮತ್ತು ಡಿಸಿಎಂ ನೇತೃತ್ವದಲ್ಲಿ ನಡೆದಿದ್ದ ಸಭೆಯಲ್ಲಿಯೂ ಜಿಲ್ಲೆಯ ಕೆಲವು ಶಾಸಕರು ಚಿಕ್ಕ ಪೆದ್ದಣ್ಣ ಅವರಿಗೆ ಟಿಕೆಟ್ ನೀಡಿದರೆ, ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದರು. ಇತ್ತ, ‘ರಮೇಶ್ ಕುಮಾರ್ ಮತ್ತು ನಾನು ಒಗ್ಗೂಡಿದರೆ, ಕ್ಷೇತ್ರದಲ್ಲಿ ಕಾಂಗ್ರೆಸ್‌ಅನ್ನು ಗೆಲ್ಲಿಸಬಹುದು’ ಎಂದು ಮುನಿಯಪ್ಪ ಹೇಳಿದ್ದರು.

ಕೋಲಾರ ಟಿಕೆಟ್‌ ಸಮಸ್ಯೆ ಜಟಿಲವಾಗುತ್ತಿರುವುದನ್ನು ಅರಿತ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್, ರಮೇಶ್ ಕುಮಾರ್ ಬಣದ ಹನುಮಂತಯ್ಯ ಮತ್ತು ಮುನಿಯಪ್ಪ ಬಣದ ಚಿಕ್ಕಪೆದ್ದಣ್ಣ ಇಬ್ಬರಿಗೂ ಟಿಕೆಟ್ ನೀಡದೇ, ಬಣಗಳಿಂದ ದೂರ ಉಳಿದಿದ್ದ ಗೌತಮ್ ಅವರಿಗೆ ಟಿಕೆಟ್‌ ನೀಡಿ ಅಚ್ಚರಿ ಮೂಡಿಸಿದೆ. ಎಲ್ಲ ಬಣಗಳ ಮುಖಂಡರೂ, ಕಾರ್ಯಕರ್ತರು ಕ್ಷೇತ್ರದಲ್ಲಿ ಗೌತಮ್ ಗೆಲುವಿಗಾಗಿ ಕೆಲಸ ಮಾಡಬೇಕೆಂಬ ಸಂದೇಶ ರವಾನಿಸಿದೆ.

ಆದರೆ, ಮೂರನೇ ವ್ಯಕ್ತಿಯನ್ನು ಕಣಕ್ಕಿಳಿಸಿ, ಪಕ್ಷ ಸೋತರೆ ಅದಕ್ಕೆ ನಾನು ಜವಾಬ್ದಾರಿಯಲ್ಲ ಎಂದು ಈಗಾಗಲೇ ಸಚಿವ ಮುನಿಯಪ್ಪ ಎಚ್ಚರಿಕೆ ನೀಡಿರುವುದನ್ನು ಇಲ್ಲಿ ಗಮನಿಸಬಹುದು. ರಮೇಶ್‌ ಕುಮಾರ್‌ ಬಣ ಯಾರೇ ಅಭ್ಯರ್ಥಿಯಾದರೂ ನಾವು ಬೆಂಬಲಿಸುತ್ತೇವೆ ಎಂದಿದ್ದಾರೆ. ಆದರೆ ರಮೇಶ್‌ ಕುಮಾರ್‌ ಮಾತ್ರ ಈ ಬಗ್ಗೆ ಎಲ್ಲಿಯೂ ತುಟಿ ಬಿಚ್ಚಿಲ್ಲ.

ಲೋಕಸಭೆ ಚುನಾವಣೆಗೂ ಮುನ್ನವೇ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಅದರಂತೆ, ಕೋಲಾರ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲದೊಂದಿಗೆ ಕಣಕ್ಕಿಳಿದಿರುವ ಜೆಡಿಎಸ್ ಅಭ್ಯರ್ಥಿ ಎಂ. ಮಲ್ಲೇಶ್ ಬಾಬು ಸ್ಪರ್ಧೆಯಲ್ಲಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾನು ಮುಷ್ತಾಕ್ ದಸರಾ ಉದ್ಘಾಟನೆ ಒಳ್ಳೆಯ ವಿಚಾರ: ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ

ಅಂತಾರಾಷ್ಟ್ರೀಯ "ಬೂಕರ್ ಪ್ರಶಸ್ತಿ" ವಿಜೇತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ...

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ: ಸಂಸದ ಯದುವೀರ್ ಒಡೆಯರ್ ಸ್ವಾಗತ

ಕರ್ನಾಟಕದ ನಾಡಹಬ್ಬವೆಂದೇ ಪ್ರಸಿದ್ಧವಾಗಿರುವ ಮೈಸೂರು ದಸರಾ ಮಹೋತ್ಸವದ ಈ ಬಾರಿಯ ಉದ್ಘಾಟನೆಗೆ...

ಬಿಹಾರ ಸಿಎಂ ಅಭ್ಯರ್ಥಿ | ಮಹಾಘಟಬಂಧನ ನಿರ್ಧರಿಸಲಿದೆ; ಆರ್‌ಜೆಡಿಗೂ ಹಕ್ಕಿದೆ: ಎಸ್‌ಪಿ ನಾಯಕ

ಬಿಹಾರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ವಿರೋಧ ಪಕ್ಷಗಳ...

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಪೋಸ್ಟ್; ಇಬ್ಬರ ಮೇಲೆ ಎಫ್‌ಐಆರ್‌

ನಾಡಹಬ್ಬ ಮೈಸೂರು ದಸರಾ ಉದ್ಘಾಟಿಸಲು ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್...

Download Eedina App Android / iOS

X