ಕೋಲಾರ ಟಿಕೆಟ್‌ | ಬಣ ಬಡಿದಾಟಕ್ಕೆ ಪೂರ್ಣವಿರಾಮವಿಟ್ಟ ಸಿಎಂ, ಡಿಸಿಎಂ; ಅಭ್ಯರ್ಥಿ ಯಾರು?

Date:

ಕೋಲಾರ ಟಿಕೆಟ್‌ ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಪಾಳಯದಲ್ಲಿ ಉಂಟಾಗಿದ್ದ ಬಣಗಳ ಬಡಿದಾಟವನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್‌ ಕೊನೆಗೂ ಶಮನಗೊಳಿಸಿದ್ದಾರೆ.

ಕೋಲಾರ ಕ್ಷೇತ್ರದಲ್ಲಿ ಸಚಿವ ಮುನಿಯಪ್ಪ ಮತ್ತು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣಗಳ ನಡುವಿನ ಗುದ್ದಾಟಕ್ಕೆ ಕೊನೆ ಹಾಡಲು ಗುರುವಾರ ಮುಖ್ಯಮಂತ್ರಿ ಅವರ ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ.

ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ ಸರಿಪಡಿಸಿಕೊಂಡು ಹೋಗುವ ತೀರ್ಮಾನಕ್ಕೆ ಹೋಗುವುದಾಗಿ, ಸಿಎಂ, ಡಿಸಿಎಂ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ಎರಡು ಬಣಗಳ ನಾಯಕರು ಮಾತುಕೊಟ್ಟಿದ್ದಾರೆ ಎನ್ನಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಭೆ ಬಳಿಕ ಸಿಎಂ ನಿವಾಸ ಕಾವೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ ಸಿ ಸುಧಾಕರ್, “ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ ಸರಿಪಡಿಸಿಕೊಂಡು ಹೋಗುತ್ತೇವೆ. ಸಿಎಂ, ಡಿಸಿಎಂ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ. ನಮ್ಮಿಂದ ಪಕ್ಷಕ್ಕೆ ಹಾನಿಯಾಗಲು ಅವಕಾಶ ನೀಡುವುದಿಲ್ಲ” ಎಂದರು.

“ಪಕ್ಷದ ಆದೇಶಕ್ಕೆ ಗೌರವ ಕೊಟ್ಟು ಅವರು ಹೇಳಿದಂತೆ ನಡೆದುಕೊಳ್ಳುತ್ತೇವೆ. ನಿನ್ನೆ (ಮಾರ್ಚ್ 28) ಆದಂತಹ ಸಮಸ್ಯೆ ಬಗ್ಗೆ ಸಿಎಂ, ಡಿಸಿಎಂ ಬಳಿ ಹೇಳಿಕೊಂಡಿದ್ದೇವೆ. ರಾಜೀನಾಮೆ ನೀಡಲು ಮುಂದಾಗಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ನೀತಿ ಸಂಹಿತೆ ಉಲ್ಲಂಘನೆ | ಮೋದಿ ವಿರುದ್ಧ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗ ಹೆದರುತ್ತದೆಯೇ; ಮಾಜಿ ಐಎಎಸ್ ಅಧಿಕಾರಿ ಪ್ರಶ್ನೆ

“ಇದು ಎಡಗೈ, ಬಲಗೈ ಸಂಘರ್ಷ ಅಲ್ಲ. ಕೆಲವರ ಅಭಿಪ್ರಾಯ ಸಂಖ್ಯೆ ಜಾಸ್ತಿ ಇದೆ. ಕೊಡಿ ಅಂತ ಇತ್ತು. ಅದೊಂದು ಕೆಟ್ಟ ಸಮಯ. ಅಂತಿಮವಾಗಿ ಪಕ್ಷದ ಅಭ್ಯರ್ಥಿ ಗೆಲ್ಲಬೇಕು. ಇದರಿಂದ ಪಕ್ಷಕ್ಕೆ ಮುಜುಗರ ಆಗಿದೆ. ನಾವು ಕ್ಷಮೆ ಕೇಳಿದ್ದೇವೆ. ಯಾವುದೇ ಅಭ್ಯರ್ಥಿ ಬಗ್ಗೆ ಚರ್ಚೆ ಆಗಿಲ್ಲ” ಎಂದು ತಿಳಿಸಿದರು.

ಕೋಲಾರ ಉಸ್ತುವಾರಿ ಸಚಿವ ಬೈರತಿ ಸುರೇಶ್ ಮಾತನಾಡಿ, “ಸಭೆಯಲ್ಲಿ ಕೋಲಾರ ಜಿಲ್ಲೆಯ ಪಕ್ಷದ ಎಲ್ಲಾ ಶಾಸಕರೂ ಭಾಗವಹಿಸಿದ್ದು, ಸಂಧಾನ ಸಭೆ ಯಶಸ್ವಿಯಾಗಿದೆ. ಹೈಕಮಾಂಡ್ ಆದೇಶಕ್ಕೆ ಬದ್ದ ಎಂದು ಶಾಸಕರು ಹೇಳಿದ್ದಾರೆ. ಈಗ ಸಿಎಂ ಡಿಸಿಎಂ ಆದೇಶಕ್ಕೆ ಬದ್ಧ ಎಂದೂ ಹೇಳಿದ್ದಾರೆ. ಟಿಕೆಟ್ ವಿಚಾರದಲ್ಲಿ ಯಾವುದೇ ವ್ಯಕ್ತಿಯ ಹೆಸರು ಚರ್ಚೆ ಆಗಿಲ್ಲ” ಎಂದರು.

ಕೋಲಾರ ಕಾಂಗ್ರಸ್ ಅಭ್ಯರ್ಥಿ ಪೈಪೋಟಿಯಲ್ಲಿ ಸಚಿವ ಕೆಎಚ್​ ಮುನಿಯಪ್ಪ ಕುಟುಂಬ ಸದಸ್ಯ ಚಿಕ್ಕಪೆದ್ದಣ್ಣ ಮತ್ತು ರಮೇಶ್ ಕುಮಾರ್ ಬಣದ ಎಲ್‌ ಹನುಮಂತಯ್ಯ ಹೆಸರು ಕೇಳಿಬಂದಿದೆ. ಸಿಎಂ, ಡಿಸಿಎಂ ಯಾರಿಗೆ ಮಣೆ ಹಾಕುತ್ತಾರೋ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೀಸಲಾತಿ ರದ್ದು ಮಾಡುವುದೇ ಬಿಜೆಪಿ ಗುರಿ; ಅದರ ನಾಯಕರ ಹೇಳಿಕೆಗಳಿಂದಲೇ ಸ್ಪಷ್ಟ: ರಾಹುಲ್ ಗಾಂಧಿ

ಸಂವಿಧಾನವನ್ನು ಬದಲಿಸುವ ಮೂಲಕ ಪ್ರಜಾಪ್ರಭುತ್ವವನ್ನು ನಾಶಪಡಿಸುವುದು ಮತ್ತು ದಲಿತರು, ಹಿಂದುಳಿದ ವರ್ಗಗಳು...

‘ಪ್ರಧಾನಿ ಮೋದಿಗೆ ಗುಜರಾತ್‌ನಲ್ಲಿ ಮುಸ್ಲಿಂ ಒಬಿಸಿ ಮೀಸಲಾತಿ ಓಕೆ, ಇತರೆಡೆ ಮಾತ್ರ ಬೇಡ’

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮುಸ್ಲಿಂ ಒಬಿಸಿ ಮೀಸಲಾತಿ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ....

ಬಿಜೆಪಿ ನಾಯಕರು ಖಿನ್ನತೆಗೆ ಒಳಗಾಗಿದ್ದಾರೆ ಎಂದ ತೇಜಸ್ವಿ ಯಾದವ್!

ಬಿಹಾರದ ಎರಡನೇ ಹಂತದ ಲೋಕಸಭಾ ಚುನಾವಣೆಯ ನಂತರ ಬಿಜೆಪಿ ನಾಯಕರು ಖಿನ್ನತೆಗೆ...