ಬಿಜೆಪಿ ಟಿಕೆಟ್‌ಗಾಗಿ ಹಣ | ಚೈತ್ರಾ ಗ್ಯಾಂಗ್‌ನ ವಂಚನೆ ಪ್ರಕರಣ ಬಳಿಕ ಮತ್ತೊಂದು ಪ್ರಕರಣ ತಡವಾಗಿ ಬೆಳಕಿಗೆ

Date:

  • ಕನಕಗಿರಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಗಾಯತ್ರಿ ತಿಮ್ಮಾರೆಡ್ಡಿ
  • ಕಳೆದ ಜು.19ರಂದು ಬೆಂಗಳೂರಿನ ಅಶೋಕ ನಗರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್

ಉದ್ಯಮಿ ಗೋವಿಂದ ಪೂಜಾರಿ ಎಂಬುವವರಿಗೆ ಬೈಂದೂರು ಕ್ಷೇತ್ರದ ಬಿಜೆಪಿ ಶಾಸಕ ಟಿಕೆಟ್‌ ಕೊಡಿಸುವುದಾಗಿ ಕೋಟ್ಯಾಂತರ ರೂಪಾಯಿ ಹಣ ಕಳೆದುಕೊಂಡ ಘಟನೆ ಈಗಾಗಲೇ ರಾಜ್ಯಾದ್ಯಂತ ಸುದ್ದಿಯಾಗಿರುವ ಬೆನ್ನಲ್ಲೇ, ಕೊಪ್ಪಳ ಜಿಲ್ಲೆಯಲ್ಲೂ ಬಿಜೆಪಿ ಮುಖಂಡನಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಕೊಪ್ಪಳ ಜಿಲ್ಲೆಯ ಕನಕಗಿರಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಗಾಯತ್ರಿ ತಿಮ್ಮಾರೆಡ್ಡಿ ಅವರಿಗೆ ಟಿಕೆಟ್​ ಕೊಡಿಸುವಲ್ಲಿ ಅವರ ಪತಿ ಜಿ‌. ತಿಮ್ಮಾರೆಡ್ಡಿ ಗಿಲ್ಲೆಸೂಗುರ್ ಹಲವು ಪ್ರಯತ್ನ ಮಾಡಿದ್ದರು. ಈ ವೇಳೆ ಟಿಕೆಟ್​ ಕೊಡಿಸುತ್ತೇವೆಂದು ನಂಬಿಸಿ, ಮೂವರು ಚೈತ್ರಾ ಕುಂದಾಪುರ ಗ್ಯಾಂಗ್ ರೀತಿಯಲ್ಲೆ ವಂಚನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಕನಕಗಿರಿ ಪರಿಶಿಷ್ಟ ಮೀಸಲು ಕ್ಷೇತ್ರದ ಆಕಾಂಕ್ಷಿಯಾಗಿದ್ದ ಗಾಯತ್ರಿ ತಿಮ್ಮಾರೆಡ್ಡಿ ಅವರು ಬಿಜೆಪಿ ಟಿಕೆಟ್​ಗಾಗಿ ಪ್ರಯತ್ನಿಸಿದ್ದರು. ಈ ವೇಳೆ ದೆಹಲಿ ಮೂಲದ ವಿಶಾಲ್ ನಾಗ್ ಮತ್ತು ಬೆಂಗಳೂರಿನ ಜೀತು, ಗೌರವ್ ಟಿಕೆಟ್ ಕೊಡಿಸುತ್ತೇವೆಂದು ಸುಮಾರು 21 ಲಕ್ಷ ಹಣ ವಂಚನೆ ಮಾಡಿರುವುದಾಗಿ ವರದಿಯಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಘಟನೆ ನಡೆದು ಸುಮಾರು 3-4 ತಿಂಗಳುಗಳಾಗಿದ್ದು, ಚೈತ್ರಾ ಪ್ರಕರಣದ ಹಿನ್ನೆಲೆಯಲ್ಲಿ ಈ ಪ್ರಕರಣ ಈಗ ಮುನ್ನೆಲೆಗೆ ಬಂದಿದೆ. ಈ ಸಂಬಂಧ ಮೂವರ ವಿರುದ್ಧ ಬೆಂಗಳೂರಿನ ಅಶೋಕ ನಗರ ಠಾಣೆಯಲ್ಲಿ ತಿಮ್ಮಾರೆಡ್ಡಿ ಅವರು ಕಳೆದ ಜುಲೈ 19ರಂದು ದೂರು ದಾಖಲಿಸಿದ್ದು, ಎಫ್‌ಐಆರ್ ಕೂಡ ದಾಖಲಾಗಿದೆ.

ಈ ಬಗ್ಗೆ ಈ ದಿನ.ಕಾಮ್ ಜೊತೆಗೆ ಮಾತನಾಡಿರುವ ಬಿಜೆಪಿ ಮುಖಂಡ ಜಿ‌. ತಿಮ್ಮಾರೆಡ್ಡಿ ಗಿಲ್ಲೆಸೂಗುರ್, “ಈ ಬೆಳವಣಿಗೆ ನಡೆದು ಸುಮಾರು ಮೂರು-ನಾಲ್ಕು ತಿಂಗಳು ಆಗಿದೆ. ಬೆಂಗಳೂರಿನ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇನೆ. ಅಲ್ಲದೇ, ಈ ಬಗ್ಗೆ ಸಂಬಂಧಪಟ್ಟವರ ಜೊತೆಗೆ ಮಾತುಕತೆಯೂ ಆಗಿದೆ. ಚೈತ್ರಾ ಕುಂದಾಪುರ ಅವರ ವಂಚನೆ ಪ್ರಕರಣದ ಹಿನ್ನೆಲೆಯಲ್ಲಿ ನಮ್ಮ ಘಟನೆ ಕೂಡ ಚರ್ಚೆಯಾಗುತ್ತಿರಬಹುದು. ಯಾವುದಕ್ಕೂ ನಾಳೆ(ಸೆ.16) ಸಂಜೆಯೊಳಗೆ ಹಣ ವಾಪಸ್ ನೀಡುವ ಮಾತುಕತೆ ಮುಗಿಯಬಹುದು” ಎಂದು ಮಾಹಿತಿ ನೀಡಿದ್ದಾರೆ.

ಇದೀಗ ಬಿಜೆಪಿ ಹೆಸರಿನಲ್ಲಿ ಟಿಕೆಟ್ ಕೊಡುವ ಭರವಸೆ ನೀಡಿ, ವಂಚಿಸಿರುವ ಇಂತಹ ಪ್ರಕರಣಗಳು ಒಂದೊಂದಾಗಿ ಬೆಳಕಿಗೆ ಬರುತ್ತಿದ್ದು, ಚುನಾವಣೆಯ ವೇಳೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಟಿಕೆಟ್​ಗಾಗಿ ಬಹುದೊಡ್ಡ ‘ಡೀಲ್’ಗಳು ನಡೆದಿದೆಯಾ ಎಂಬ ಪ್ರಶ್ನೆಗಳು ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಹಾಗೂ ಅನುಮಾನಕ್ಕೆ ವೇದಿಕೆಯೊಗಿಸಿದೆ.

ಈ ಪ್ರಕರಣದಲ್ಲಿ ಆಗಿದ್ದೇನು?
ಈ ಪ್ರಕರಣದಲ್ಲೂ ಚೈತ್ರಾ ಕುಂದಾಪುರ ಗ್ಯಾಂಗ್ ರೀತಿಯಲ್ಲೇ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ.

ದೆಹಲಿ ಮೂಲದ ವಿಶಾಲ್ ನಾಗ್ ಮತ್ತು ಬೆಂಗಳೂರಿನ ಜೀತು, ಗೌರವ್ ಎಂಬುವರಿಂದ ವಂಚನೆ ನಡೆದಿದೆ. ಸುಮಾರು 21 ಲಕ್ಷ ರೂಪಾಯಿ ಹಣ ಪಂಗನಾಮ ಹಾಕಿರುವುದಾಗಿ ವರದಿಯಾಗಿದೆ.

‘ತಮಗೆ ಅಮಿತ್ ಶಾ ಪರಿಚಯವಿದೆ. ರಾಜ್ಯದಲ್ಲಿ ಸಮೀಕ್ಷೆ ಮಾಡುತ್ತಿದ್ದೇವೆ. ಅದರಲ್ಲಿ ನಿಮ್ಮ ಪತ್ನಿಯ ಹೆಸರು ಮುಂಚೂಣಿಗೆ ತರುತ್ತೇವೆ’ ಎಂದು ವಂಚಕರು ಯಾಮಾರಿಸಿದ್ದಾರೆ.

ತಾನು ಕೇಂದ್ರ ಬಿಜೆಪಿ ಚುನಾವಣೆ ಸಮೀಕ್ಷೆ ಮುಖ್ಯಸ್ಥನೆಂದು ಪರಿಚಯಿಸಿಕೊಂಡಿದ್ದ ವಿಶಾಲ್ ನಾಗ್‌ನನ್ನು ನಂಬಿ ಆಕಾಂಕ್ಷಿಯ ಪತಿ ತಿಮ್ಮಾರೆಡ್ಡಿ, ಬ್ಯಾಂಕ್ ಖಾತೆಗೆ 19 ಲಕ್ಷ ಹಾಗೂ ನಗದು ರೂಪದಲ್ಲಿ ಎರಡು ಲಕ್ಷ ರೂಪಾಯಿ ನೀಡಿದ್ದಾರೆ. ಕೊನೆಗೆ ಟಿಕೆಟ್ ಸಿಗದೇ ಹಣವೂ ವಾಪಸ್ ಬಾರದ ಹಿನ್ನೆಲೆಯಲ್ಲಿ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಗ್ನಿಪಥ್ ಯೋಜನೆಯಿಂದ ದೇಶದ ಯುವಕರಿಗೆ ಅನ್ಯಾಯ: ರಾಷ್ಟ್ರಪತಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ

ಅಗ್ನಿಪಥ್ ಯೋಜನೆಯಿಂದಾಗಿ ಸಶಸ್ತ್ರ ಪಡೆಗಳಲ್ಲಿ ನಿಯಮಿತ ಉದ್ಯೋಗವನ್ನು ಬಯಸುತ್ತಿರುವ ದೇಶದ ಯುವಕರಿಗೆ...

ತುಮಕೂರು | ಬೀಡಿ ಕಾರ್ಮಿಕರಿಗೆ ಪರ್ಯಾಯ ಪರಿಹಾರ ನೀಡದೆ ಮಾರಾಟ ನಿಷೇಧ ವಿಧೇಯಕ ಜಾರಿ; ಕಾರ್ಮಿಕರ ವಿರೋಧ

ರಾಜ್ಯದಲ್ಲಿರುವ ಸರಿಸುಮಾರು 6 ಲಕ್ಷದಿಂದ 7 ಲಕ್ಷ ಬೀಡಿ ಕಾರ್ಮಿಕರ ಬದುಕಿಗೆ...

ಸರ್ಕಾರಿ ಗೌರವದೊಂದಿಗೆ ನೆರವೇರಿದ ಶಾಸಕ ರಾಜಾ ವೆಂಕಟಪ್ಪ ನಾಯಕ ಅಂತಿಮ ಸಂಸ್ಕಾರ: ಸಿಎಂ ಭಾಗಿ

ನಿನ್ನೆ(ಫೆ.25) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ...

ವಿಜಯಪುರ | ಸಂವಿಧಾನ, ಸಾಮಾಜಿಕ ನ್ಯಾಯ, ಸಹಬಾಳ್ವೆ ಸಮಾಲೋಚನೆ ಸಭೆ

ನಮ್ಮ ದೇಶ ಬಹುಸಂಸ್ಕೃತಿಗೆ ಪ್ರಖ್ಯಾತಿಯನ್ನು ಪಡಿದಿದೆ. ವಿವಿಧತೆಯಲ್ಲಿ ಏಕತೆಯನ್ನು ನಮ್ಮ ರಾಷ್ಟ್ರ...