ಕೊಪ್ಪಳ | ಮುನಿಸು ಮರೆತು ಬಿಜೆಪಿ ಅಭ್ಯರ್ಥಿ ಕ್ಯಾವಟರ್ ಪರ ಪ್ರಚಾರಕ್ಕೆ ಸಿದ್ಧರಾದ ಕರಡಿ

Date:

ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಸಂಸದ ಸಂಗಣ್ಣ ಕರಡಿ ಅವರ ಮುನಿಸು ಮರೆತು ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ್ ಕ್ಯಾವಟರ್ ಪರ ಪ್ರಚಾರಕ್ಕೆ ಸಿದ್ಧರಾಗಿದ್ದಾರೆ.

ಸೋಮವಾರ ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ನಾನು ಬಿಜೆಪಿ ತೊರೆಯುವುದಿಲ್ಲ. ಪಕ್ಷದ ಜೊತೆಯಲ್ಲಿಯೇ ಇದ್ದು, ಮೋದಿ ಗೆಲ್ಲಿಸುತ್ತೇವೆ” ಎಂದರು.

“ಇಂದಿನಿಂದ ಪಕ್ಷದ ಪರ ಪ್ರಚಾರ ಮಾಡುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ನಾವೆಲ್ಲಾ ಶ್ರಮಿಸಬೇಕಿದೆ. ಈಗಿನ ಪರಿಸ್ಥಿತಿಯಲ್ಲಿ ಟಿಕೆಟ್ ಬದಲಾವಣೆ ಕಷ್ಟ ಎನ್ನುವುದು ನನಗೂ ಗೊತ್ತು” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್ ಮರು ಪರಿಶೀಲನೆಯಾಗಬೇಕು ಅಥವಾ ನನ್ನನ್ನು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಪರಿಗಣಿಸಬೇಕು ಎನ್ನುವುದು ಕಾರ್ಯಕರ್ತರ ಬೇಡಿಕೆ. ಈ ಬಗ್ಗೆ ವರಿಷ್ಠರ ಜೊತೆ ಮತ್ತೊಮ್ಮೆ ಮಾತನಾಡುವುದಾಗಿ ರಾಜ್ಯ ನಾಯಕರು ಹೇಳಿದ್ದಾರೆ. ನಾಳೆ ಅಮಿತ್ ಶಾ ರಾಜ್ಯಕ್ಕೆ ಬರಲಿದ್ದು, ಅವರೊಂದಿಗೆ ರಾಜ್ಯ ನಾಯಕರು ನನ್ನ ವಿಚಾರ ಚರ್ಚಿಸುವ ವಿಶ್ವಾಸವಿದೆ” ಎಂದು ತಿಳಿಸಿದರು.

“ಸೋಮವಾರ ಸಂಜೆಯಿಂದ ಕುಷ್ಟಗಿಯಲ್ಲಿ ನಮ್ಮ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಆರಂಭಿಸುತ್ತೇನೆ. ಪಕ್ಷಕ್ಕೆ ಬೆಂಬಲಿಸುವಂತೆ ನಮ್ಮ ಬೆಂಬಲಿಗರಿಗೆ ಮನವಿ ಮಾಡುತ್ತೇನೆ. ನರೇಂದ್ರ ಮೋದಿ ಅವರನ್ನು ನೋಡಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡುತ್ತೇನೆ” ಎಂದರು.

ಕಾಂಗ್ರೆಸ್ ಸೇರಲ್ಲ

“ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಹಲವು ಸುತ್ತಿನ ಸಂಧಾನ ಸಭೆಗಳು ನಡೆದಿವೆ. ರಾಜಕೀಯದಲ್ಲಿ ಮಾತು ಕಥೆ ನಡೆಯುತ್ತಲೇ ಇರುತ್ತವೆ. ಎಲ್ಲವೂ ಯಶಸ್ವಿಯಾಗುವುದಿಲ್ಲ. ಆದರೂ‌ ಒಂದೇ ಕಡೆ ಇರಬೇಕಾಗುತ್ತದೆ. ಕಾಂಗ್ರೆಸ್ ಸೇರುವ ವಿಚಾರ ಇಲ್ಲ” ಎಂದು‌ ಸ್ಪಷ್ಟಪಡಿಸಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿ, ಯೋಗಿಗಿಂತ ದೊಡ್ಡವರಿದ್ದಾರೆ ಎನ್ನುವವರು ದೇಶದ್ರೋಹಿ; ಬಿಜೆಪಿ ಅಭ್ಯರ್ಥಿ ಮಹೇಶ್‌ ಶರ್ಮಾ ವಿವಾದಾತ್ಮಕ ಹೇಳಿಕೆ

"ಪ್ರಧಾನಿ ಮೋದಿ-ಸಿಎಂ ಯೋಗಿಯನ್ನು ತಮ್ಮವರು ಎಂದು ಯಾರು ಪರಿಗಣಿಸುವುದಿಲ್ಲವೋ ಅವರು ತಮ್ಮ...

ಲೋಕಸಭಾ ಚುನಾವಣೆ | ಪ್ರಕಾಶ್ ಅಂಬೇಡ್ಕರ್‌ಗೆ ಎಐಎಂಐಎಂ ಬೆಂಬಲ: ಓವೈಸಿ

ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದ ಅಕೋಲಾ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ವಂಚಿತ್ ಬಹುಜನ ಅಘಾಡಿ...

ಕೇಂದ್ರ ಸರ್ಕಾರ ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ: ರಾಹುಲ್‌ ಗಾಂಧಿ ವಾಗ್ದಾಳಿ

"ಕೇಂದ್ರ ಸರ್ಕಾರ 20-25 ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ. ಉದ್ಯಮಿಗಳ...

ನರೇಂದ್ರ ಮೋದಿಯೇ ಭಾರತದ ದೊಡ್ಡ ಸಮಸ್ಯೆ: ಎಂ ಕೆ ಸ್ಟಾಲಿನ್

ಪ್ರಸ್ತುತ ಭಾರತದ ದೊಡ್ಡ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಿದ್ದಾರೆ...