ಕೊಪ್ಪಳ | ಅಧಿಕಾರಿಗಳ ವರ್ಗಾವಣೆ ಎಂಬುದು ಎಲ್ಲ ಸರ್ಕಾರದಲ್ಲೂ ದಂಧೆ: ಬಸವರಾಜ ರಾಯರಡ್ಡಿ

Date:

ಎಲ್ಲ ಸರ್ಕಾರದಲ್ಲಿಯೂ ಅಧಿಕಾರಿಗಳ ವರ್ಗಾವಣೆ ಎಂಬುದು ಒಂದು ದಂಧೆಯೇ ಆಗಿತ್ತು. ಈಗಲೂ ಅದೇ ಆಗಿದೆ ಎಂದು ಮುಖ್ಯಮಂತ್ರಿ ಅವರ ಆರ್ಥಿಕ ಸಲಹೆಗಾರ ಮತ್ತು ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಅವರು ತಮ್ಮ ಸರ್ಕಾರದ ಬಗ್ಗೆಯೂ ಆರೋಪಿಸಿದರು.

- Advertisement -

ಕೊಪ್ಪಳ ಕುಕನೂರು ತಾಲ್ಲೂಕಿನ ಕೋಮಲಾಪುರ ಗ್ರಾಮದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿ, “ಅಧಿಕಾರಿಗಳು ತಮ್ಮ ವರ್ಗಾವಣೆಗೆ ಶಾಸಕರು, ಸಚಿವರ‌‌ ಮೊರೆ ಹೋಗುತ್ತಿದ್ದು, ಯಾವುದೇ ಪಕ್ಷದ ಸರ್ಕಾರ ಅಧಿಕಾರದಲ್ಲಿದ್ದಾಗಲೂ ಈ ದಂಧೆ ನಡೆಯುತ್ತಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರ್ಗಾವಣೆ ದಂಧೆಗೆ ಕಡಿವಾಣ ಹಾಕಲು ಕ್ರಮ ವಹಿಸುವುದಾಗಿ ಹೇಳಿದ್ದಾರೆ. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಜಿಲ್ಲೆಯಲ್ಲಿ ಉನ್ನತ ಸ್ಥಾನದಲ್ಲಿರುವ ಅಧಿಕಾರಿಗಳ ವರ್ಗಾವಣೆಯೂ ದಂಧೆಯಾಗಿದೆ. ಹಿಂದಿನ ಸರ್ಕಾರದಲ್ಲಿಯೂ ಇದೇ ಸಮಸ್ಯೆ ಇತ್ತು” ಎಂದರು.

ಕೊಪ್ಪಳ ಎಸ್.ಪಿ. ಆಗಿದ್ದ ಯಶೋಧಾ ವಂಟಗೋಡಿ ಅವರನ್ನು ಕರ್ನಾಟಕ ‌ಲೋಕಾಯುಕ್ತದ ಎಸ್.ಪಿ. ಆಗಿ ಇತ್ತೀಚೆಗೆ ವರ್ಗಾವಣೆ ಮಾಡಲಾಗಿದ್ದು ಇದನ್ನು ರದ್ದುಪಡಿಸುವಂತೆ ರಾಯರಡ್ಡಿ ಮುಖ್ಯಮಂತ್ರಿ ಬಳಿ ಮನವಿ ಮಾಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿ, “ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಕೋರಿಕೆಯಂತೆ ಸಿ.ಎಂ. ಬಳಿ ಮನವಿ ಮಾಡಿದ್ದೆ. ಎಸ್.ಪಿ. ಯಾಗಿ ಯಾರೇ ಬಂದರೂ ನನಗೇನೂ ಸಮಸ್ಯೆಯಿಲ್ಲ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...