ಕೊಂಕಣ ರೈಲ್ವೆ ಭಾರತೀಯ ರೈಲ್ವೆಯಲ್ಲಿ ವಿಲೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಆಗ್ರಹ

Date:

Advertisements

ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸುವ ಸಂಬಂಧ ಕ್ರಮ ಕೈಗೊಳ್ಳುವಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದ ಶಾಸಕರ ತಂಡ ಸಚಿವರಿಗೆ ಮನವಿ ಸಲ್ಲಿಸಿದೆ.

ರಾಜ್ಯ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅವರು ಈ ಕುರಿತು ಕ್ರಮ ಕೈಗೊಳ್ಳಲು ಸಂಬಂಧಿತರಿಗೆ ಸೂಚಿಸಿದ್ದಾಗಿ ಪ್ರಕಟಣೆ ತಿಳಿಸಿದೆ.‌

ಜಾರ್ಜ್ ಫೆನಾರ್ಂಡಿಸ್ ಅವರು ಕೇಂದ್ರ ರೈಲ್ವೆ ಸಚಿವರಾಗಿದ್ದಾಗ ಅನುಷ್ಠಾನಕ್ಕೆ ತಂದ ಮಹತ್ವದ ಕೊಂಕಣ ರೈಲ್ವೆ ಯೋಜನೆಗೆ ಇಂದಿಗೆ ಸುಮಾರು 30 ವರ್ಷಗಳು ತುಂಬುತ್ತಿದೆ. ಏಕ ಹಳಿಯ ಪ್ರಯಾಣ ಸೌಲಭ್ಯ ಇರುವುದರಿಂದ ಹೆಚ್ಚುವರಿ ರೈಲ್ವೆ ಓಡಾಡಲು ಕಷ್ಟವಾಗುತ್ತದೆ ಮತ್ತು ಕೊಂಕಣ ರೈಲ್ವೆಯಲ್ಲಿ ಅನುದಾನದ ಕೊರತೆ ಇರುವುದರಿಂದ ನೂತನ ರೈಲ್ವೆ ನಿಲ್ದಾಣಗಳೂ ಸೇರಿದಂತೆ, ಮೂಲಭೂತ ಸೌಕರ್ಯ ವ್ಯವಸ್ಥೆಗೆ ಆರ್ಥಿಕ ಕೊರತೆ ಉಂಟಾಗುತ್ತಿದೆ. ಆದ್ದರಿಂದ ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯಲ್ಲಿ ವಿಲೀನ ಮಾಡುವುದರ ಮೂಲಕ ಭಾರತ ಸರ್ಕಾರದ ಅನುದಾನದ ಪಡೆದು ಕರಾವಳಿ ಪ್ರದೇಶದಲ್ಲೂ ಕೂಡ ಮಹತ್ವದ ರೈಲ್ವೆ ಯೋಜನೆ ಅನುಷ್ಠಾನ ಮಾಡಲು ಅವಕಾಶ ಮಾಡಿಕೊಡಬೇಕೆಂದು ನಿಯೋಗ ತಿಳಿಸಿದೆ.

Advertisements

ಈ ಸಂಬಂಧ ಸಚಿವರ ಜೊತೆ ನಿಯೋಗವು ಸುದೀರ್ಘವಾಗಿ ಚರ್ಚಿಸಿತು. ಭಾರತೀಯ ರೈಲ್ವೆಯಲ್ಲಿ ವಿಲೀನಗೊಂಡರೆ, ಮುಂದಿನ ದಿನಗಳಲ್ಲಿ ಸಿಂಗಲ್ ಲೈನನ್ನು ಹೊರತುಪಡಿಸಿ, ಡಬ್ಲಿಂಗ್ ಮಾಡುವುದು ಸೇರಿದಂತೆ ಅನೇಕ ಅಭಿವೃದ್ಧಿ ಯೋಜನೆ ಅನುಷ್ಠಾನಕ್ಕೆ ಲಭ್ಯ ಅವಕಾಶವನ್ನು ಸಚಿವರಿಗೆ ನಿಯೋಗ ಮನವರಿಕೆ ಮಾಡಿತು. ಸುದೀರ್ಘ ಚರ್ಚೆಯ ನಂತರ ಎಂ. ಬಿ. ಪಾಟೀಲ್ ಸಹಮತ ವ್ಯಕ್ತಪಡಿಸಿದರು.

ತಕ್ಷಣವೇ ಇಲಾಖಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಮಂಜುಳಾ ರವರಿಗೆ ದೂರವಾಣಿ ಮೂಲಕ ಸೂಚನೆ ನೀಡಿ ತಕ್ಷಣ ಕಡತ ಸಿದ್ದಪಡಿಸಿ, ಮುಂದೆ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದು, ಭಾರತೀಯ ರೈಲ್ವೆಯಲ್ಲಿ ವಿಲೀನವಾಗುವ ಬಗ್ಗೆ ಸಂಸದರು ಮತ್ತು ಶಾಸಕರ ನಿಯೋಗಕ್ಕೆ ಭರವಸೆ ನೀಡಿದರು.

ಸಂಸದ ಕೋಟರೊಂದಿಗೆ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮತ್ತು ಉಡುಪಿಯ ಶಾಸಕ ಯಶ್‍ಪಾಲ್ ಸುವರ್ಣ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಬ್ರಹ್ಮಾವರ ಪೊಲೀಸ್ ಠಾಣೆಯ 500ಮೀ ವಾಪ್ತಿಯಲ್ಲಿ ಆ.22ರವರೆಗೆ ನಿಷೇಧಾಜ್ಞೆ: ಜಿಲ್ಲಾಧಿಕಾರಿ

ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025ಕ್ಕೆ ಸಂಬಂಧಿಸಿದಂತೆ ಸಕ್ರಿಯ ಹಿಂದೂ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಉಡುಪಿ | ಕೆಂಪು ಕಲ್ಲು ಮರಳು ಸಮಸ್ಯೆ ಧರಣಿ ಅಂತ್ಯ, ಆಗಸ್ಟ್ 30 ಜಂಟಿ ಸಭೆ ನಿಗದಿ

ಕಟ್ಟಡ ಕಾರ್ಮಿಕರಿಗೆ ಕೆಂಪು ಕಲ್ಲು ಮರಳು ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಆಗಸ್ಟ್...

Download Eedina App Android / iOS

X