ಸಿಎಂ ನಡೆ ಖಂಡಿಸಿ ಗಾಂಧಿ ಪ್ರತಿಮೆ ಬಳಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಧರಣಿ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವಿರುದ್ಧ ಸುಳ್ಳು ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಮಾಜಿ ಸಮಾಜ ಕಲ್ಯಾಣ ಇಲಾಖೆ ಸಚಿವ, ಹಾಲಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರು ಸೋಮವಾರ ವಿಧಾನಸೌಧದಲ್ಲಿ ಧರಣಿ ಕುಳಿತಿದ್ದಾರೆ.

- Advertisement -

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಧರಣಿ ಕುಳಿತಿರುವ ಅವರಿಗೆ ಶಾಸಕ ಸುರೇಶ್ ಕುಮಾರ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಎನ್ ರವಿಕುಮಾರ್ ಸಾಥ್ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

‘ನನ್ನ ಮೇಲಿನ ಆರೋಪ ಹಿಂಪಡೆಯಿರಿ ಅಥವಾ ಸಿಬಿಐ ತನಿಖೆಗೆ ಕೊಡಿ’ ಎಂಬ ಪೋಸ್ಟ್‌ ಒಂದನ್ನು ಕೋಟ ಶ್ರೀನಿವಾಸ್ ಪೂಜಾರಿ ಹಿಡಿದುಕೊಂಡು ಪ್ರತಿಭಟಿಸುತ್ತಿದ್ದಾರೆ.

“ನನ್ನ ಮೇಲಿನ ಆರೋಪ ಸತ್ಯಕ್ಕೆ ದೂರವಾದುದು. ಅವರು ತಮ್ಮ ಆರೋಪ ವಾಪಸ್‌ ಪಡೆಯಬೇಕು. ಇಲ್ಲವಾದರೆ ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಬೇಕು” ಎಂದು ಸಿಎಂಗೆ ಪತ್ರ ಬರೆದು ಮನವಿ ಮಾಡಿದ್ದೆ. ಆದರೆ, ಸಿದ್ದರಾಮಯ್ಯ ಅವರು ನನ್ನ ಪತ್ರಕ್ಕೆ ಈವರೆಗೂ ಸ್ಪಂದಿಸಿಲ್ಲ. ಅವರ ಮೌನ ನೋವು ತಂದಿದೆ. ಆದ್ದರಿಂದ ಗಾಂಧಿ ಪ್ರತಿಮೆ ಬಳಿ ಸಾಂಕೇತಿಕವಾಗಿ ಧರಣಿ ಕೂತ್ತಿದ್ದೇನೆ. ರಾಜ್ಯದ ಜನತೆ ತೀರ್ಪು ನೀಡಲಿ” ಎಂದಿದ್ದಾರೆ.

ಏನಿದು ಆರೋಪ

ಕೋಟ ಶ್ರೀನಿವಾಸ್‌ ಪೂಜಾರಿ ಅವಧಿಯಲ್ಲಿ ಕೊಳವೆ ಬಾವಿ ಟೆಂಡರ್ ಪ್ರಕ್ರಿಯೆಯಲ್ಲಿ ಹಗರಣ ನಡೆದಿದೆ ಎಂದು ಅಂದಿನ ವಿರೋಧ ಪಕ್ಷ ಕಾಂಗ್ರೆಸ್ ಮಾಡಿತ್ತು. ಈ ಆರೋಪವನ್ನು ಇದೀಗ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಮಾಡಿದ್ದರು. ಇದು ಕೋಟ ಪ್ರತಿಭಟನೆಗೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...