ಕೆಪಿಸಿಸಿ ಪ್ರಚಾರ ಸಮಿತಿ: ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಡೆನಿಸ್ ಡಿ’ಸಿಲ್ವಾ ನೇಮಕ

Date:

Advertisements

ಕರ್ನಾಟಕ ಪ್ರದೇಶ ಕಾಂಗ್ರೆಸ್ (ಕೆಪಿಸಿಸಿ) ಪ್ರಚಾರ ಸಮಿತಿಗೆ ರಾಜ್ಯದ ಜಿಲ್ಲೆಗಳಿಗೂ ಜಿಲ್ಲಾ ಅಧ್ಯಕ್ಷರನ್ನು ನೇಮಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೆಕೆಪಿಸಿ ಪ್ರಚಾರ ಸಮಿತಿಗೆ ಕಾಂಗ್ರೆಸ್‌ ಮುಖಂಡ ಡೆನಿಸ್ ಡಿ’ಸಿಲ್ವಾ ಅವರನ್ನು ನೇಮಿಸಲಾಗಿದೆ.

ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ಅವರು ಎಲ್ಲ ಜಿಲ್ಲೆಗಳಿಗೂ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷರನ್ನು ನೇಮಿಸಿದ್ದಾರೆ. ಕಳೆದ 25 ವರ್ಷಗಳಿಂದ ಕಾಂಗ್ರೆಸ್‌ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡೆನಿಸ್ ಡಿ’ಸಿಲ್ವಾ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಿದ್ದಾರೆ.

ನೇಮಕಗಳ ಬಗ್ಗೆ ಪ್ರಕಟಣೆ ನೀಡಿರುವ ವಿನಯ್ ಕುಮಾರ್ ಸೊರಕೆ, “ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಹೊಸ ನೇಮಕಗಳನ್ನು ಅನುಮೋದಿಸಿದ್ದಾರೆ. ತಕ್ಷಣದಿಂದಲೇ ಜವಾಬ್ದಾರಿ ನಿರ್ವಹಣೆಯಲ್ಲಿ ತೊಡಗಲು ಡೆನಿಸ್ ಅವರಿಗೆ ಸೂಚಿಸಲಾಗಿದೆ. ಜಿಲ್ಲಾಮಟ್ಟ, ಕ್ಷೇತ್ರವಾರು, ಬ್ಲಾಕ್ ಮಟ್ಟ, ಪಂಚಾಯತ್ ಮಟ್ಟದಲ್ಲಿ ಪ್ರಚಾರ ಸಮಿತಿಯ ಪದಾಧಿಕಾರಿಗಳನ್ನು ನೇಮಿಸುವ ಕಾರ್ಯ ಆರಂಭಿಸುವಂತೆ ಅವರಿಗೆ ತಿಳಿಸಲಾಗಿದೆ” ಎಂದು ತಿಳಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಬಿಹಾರ ಚುನಾವಣೆ | ಗೇಮ್ ಚೇಂಜರ್ ಆಗ್ತಾರಾ ಪ್ರಶಾಂತ್ ಕಿಶೋರ್?

“ಬೂತ್ ಅಧ್ಯಕ್ಷರಾಗಿ, ವಾರ್ಡ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ, ದಕ್ಷಿಣ ಕನ್ನಡ ಯುವ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ, ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿಯಾಗಿ, ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಸಂಯೋಜಕರಾಗಿ ಹೀಗೆ ವಿವಿಧ ಹಂತಗಳಲ್ಲಿ ಡೆನಿಸ್ ಅವರು ಪಕ್ಷ ಸೇವೆ ಸಲ್ಲಿಸಿದ್ದಾರೆ” ಎಂದು ವಿನಯ್ ಕುಮಾರ್ ಸೊರಕೆ ವಿವರಿಸಿದ್ದಾರೆ.

“ಪಕ್ಷಕ್ಕಾಗಿ ಬೂತ್ ಮಟ್ಟದಿಂದ ದುಡಿದಿರುವ ಜಿಲ್ಲಾ ಮುಖಂಡರಾದ ಡೆನಿಸ್ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ನಗರ ಪಾಲಿಕೆ, ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಹಲವಾರು ಜವಾಬ್ದಾರಿಗಳನ್ನು ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಅತ್ಯುತ್ತಮ ಸಂಘಟಕರಾದ ಅವರು ಸಾಮಾಜಿಕ ಸಾಮರಸ್ಯ ಮೂಡಿಸುವ ಕಾರ್ಯಕ್ರಮಗಳು, ಜಾಗೃತಿ ಅಭಿಯಾನಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕವಾಗಿಯೂ ಗುರುತಿಸಿಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.

ಡೆನಿಸ್‌ ಅವರು ಭಾರತೀಯ ಕಥೋಲಿಕ ಯುವ ಸಂಚಾಲನದ ಮಂಗಳೂರು ಧರ್ಮಪ್ರಾಂತ್ಯದ ಅಧ್ಯಕ್ಷರಾಗಿ ಹಾಗೂ ರಾಜ್ಯಾಧ್ಯಕ್ಷರಾಗಿಯೂ ಸಮುದಾಯದ ಉನ್ನತಿಗೆ ಶ್ರಮಿಸಿದ್ದಾರೆ. ಸಾಕಷ್ಟು ಸಾಮಾಜಿಕ ಚಟುವಟಿಕೆಗಳನ್ನು ಕೂಡ ಆಯೋಜಿಸುತ್ತಾ ಬಂದಿರುವುದರ ಜೊತೆಗೆ ವಿಪತ್ತು ನಿರ್ವಹಣೆ ಪರಿಹಾರ ಕಾರ್ಯಾಚರಣೆಗಳಲ್ಲೂ ಪಾಲ್ಗೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಉದಯೋನ್ಮುಖ ಕವಿಗಳು ಕವಿತೆ ರಚಿಸಲು ಆದ್ಯತೆ ನೀಡಬೇಕು: ವಿ. ಕುಲಪತಿ ಮಲ್ಲಿಕಾ ಘಂಟಿ

'ಸಾಹಿತ್ಯದ ಕೆಲಸ ಸ್ಥಗಿತಗೊಂಡ ಜನರ ಬದುಕನ್ನು ಚಲನಶೀಲನಗೊಳಿಸುವಂತದ್ದಾಗಿದ್ದು, ಈ ದಿಸೆಯಲ್ಲಿ ಉದಯೋನ್ಮುಖ...

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

Download Eedina App Android / iOS

X