ಕೆಪಿಸಿಸಿ ಅಂದರೆ ಕರ್ನಾಟಕ ಪ್ರದೇಶ ಕಮಿಷನ್ ಕಮಿಟಿ: ಸಿ ಟಿ ರವಿ ವ್ಯಂಗ್ಯ

Date:

ಪಂಚರಾಜ್ಯಗಳ ಚುನಾವಣೆಗೆ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಎಟಿಎಂ ಮಾಡಿಕೊಂಡಿದ್ದಾರೆ. ಅಂಬಿಕಾಪತಿ, ಬಿಲ್ಡರ್ ಸಂತೋಷ್ ಕೃಷ್ಣಪ್ಪ ಅವರ ಮನೆಯಲ್ಲಿ ಸಿಕ್ಕ ಹಣವೇ ಇದಕ್ಕೆ ಸಾಕ್ಷಿ. ಹಾಗಾಗಿ, ಕೆಪಿಸಿಸಿ ಅಂದರೆ ಕರ್ನಾಟಕ ಪ್ರದೇಶ ಕಮಿಷನ್ ಕಮಿಟಿ ಎಂದು ಮಾಜಿ ಸಚಿವ ಸಿಟಿ ರವಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಿಎಂ ಸಿದ್ದರಾಮಯ್ಯ ಭ್ರಷ್ಟಾಚಾರ ಮುಕ್ತವಾದ ಸರ್ಕಾರ ಅಂತ ಯಾವಾಗಲೂ ಹೇಳುತ್ತಿರುತ್ತಾರೆ. ಆದರೆ ಅವರ ಮೂಗಿನ ಕೆಳಗೆ ಈ ರೀತಿ ಘಟನೆ ನಡೆದಿದೆ. ಕೆಪಿಸಿಸಿ ಅಂದರೆ ಕರ್ನಾಟಕ ಪ್ರದೇಶ ಕಮಿಷನ್ ಕಮಿಟಿ. 42 ಕೋಟಿ ಈಗ ಸಿಕ್ಕಿದೆಯಲ್ವಾ ಅದಕ್ಕೆ ಮೊದಲು ಉತ್ತರ ಕೊಡಿ’ ಎಂದು ಆಗ್ರಹಿಸಿದ್ದಾರೆ.

ಪತ್ತೆಯಾದ ಹಣದ ಬಗ್ಗೆ ಸಿಬಿಐ ತನಿಖೆ ಆಗಲೇಬೇಕು. 100 ಜನ ಬೇನಾಮಿ ಈ ಹಣಕ್ಕೆ ಇದ್ದಾರೆ. ಇಬ್ಬರು ಸಿಕ್ಕಿದ್ದಾರೆ. ಉಳಿದ 98 ಜನ ಬೇನಾಮಿಯ ಹೆಸರು ಹೊರ ಬರಬೇಕು. ಲೋಕಸಭಾ ಚುನಾವಣೆಗೆ 2 ಸಾವಿರ ಕೋಟಿ ಕೊಡುತ್ತೇನೆ ಅನ್ನೋದು ಚರ್ಚೆ ಆಗುತ್ತಿದೆ. ಬ್ರಾಂಡ್ ಬೆಂಗಳೂರು ಅಂದ್ರೆ ಭ್ರಷ್ಟ ಬೆಂಗಳೂರನ್ನ ಮಾಡಿಕೊಳ್ಳಲು ಹೋಗುತ್ತಿದ್ದಾರೆ ಎಂದು ಡಿ ಕೆ ಶಿವಕುಮಾರ್ ವಿರುದ್ಧ ಸಿ ಟಿ ರವಿ ಹರಿಹಾಯ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಗುತ್ತಿಗೆದಾರರ ಮನೆ ಮೇಲೆ ದಾಳಿ ಮಾಡಿದರೆ ಡಿಸಿಎಂ ಡಿಕೆ ಶಿವಕುಮಾರ್ ಅವರು ರಾಜಕೀಯ ಅಂತ ಹೇಳುತ್ತಾರೆ. ಐಟಿ ದಾಳಿ ಬಗ್ಗೆ ಪ್ರಿಯಾಂಗ್ ಖರ್ಗೆ ಕೂಡ ಪ್ರಶ್ನೆ ಮಾಡುತ್ತಾರೆ. ಹಾಗಾದರೆ 40, 42 ಕೋಟಿ ರೂಪಾಯಿ ಒಬ್ಬೊಬ್ಬರ ಮನೆಯಲ್ಲೂ ಸಿಕ್ಕಿದೆ ಅಲ್ವ, ಇದಕ್ಕೆ ಏನ್ ಹೇಳುತ್ತೀರಿ? ಹಾದಿಬೀದಿಯಲ್ಲಿ ಹೋಗುವವರ ಪ್ರಶ್ನೆಗೆ ಉತ್ತರಿಸಬೇಡಿ. ಈ ಹಣಕ್ಕೂ ನಿಮಗೂ ಸಂಬಂಧ ಇಲ್ಲವೆಂದಾದರೆ ಪ್ರಕರಣವನ್ನು ಸಿಬಿಐಗೆ ವಹಿಸಿ ಎಂದು ಸಿಟಿ ರವಿ ಸವಾಲು ಹಾಕಿದರು.

ಪತ್ರಿಕಾಗೋಷ್ಠಿಯಲ್ಲಿ ಎಂಎಲ್​ಸಿ ಛಲವಾದಿ ನಾರಾಯಣಸ್ವಾಮಿ, ಭಾಸ್ಕರ್ ರಾವ್ ಅವರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಲಿತರಿಗೆ ಮೀಸಲಿರುವ ಹಣ ಗ್ಯಾರಂಟಿಗಳಿಗೆ ಬಳಕೆಯಾದರೆ ಸರ್ಕಾರದ ವಿರುದ್ಧ ಹೋರಾಟ: ದಲಿತ ಸಂಘರ್ಷ ಸಮಿತಿ ಎಚ್ಚರಿಕೆ

ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ನಿರ್ಧರಿಸಿದ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಮೀಸಲು...

ಹರಿಯಾಣ ಚುನಾವಣೆ | ಉಚಿತ ವಿದ್ಯುತ್, ವೈದ್ಯಕೀಯ ಚಿಕಿತ್ಸೆ ಸೇರಿ 5 ಗ್ಯಾರಂಟಿ ಘೋಷಿಸಿದ ಎಎಪಿ

ಈ ವರ್ಷದ ಅಕ್ಟೋಬರ್‌ನಲ್ಲಿ ಹರಿಯಾಣದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್ಲ...

ಶಿರೂರು ಗುಡ್ಡ ಕುಸಿತ | ನೊಂದ ಕುಟುಂಬಗಳ ಜತೆ ಸರಕಾರ ನಿಲ್ಲಬೇಕು: ಎಚ್‌ ಡಿ ಕುಮಾರಸ್ವಾಮಿ

ರಾಜ್ಯ ಸರಕಾರವು ಗುಡ್ಡ ಕುಸಿತದಲ್ಲಿ ಜೀವ ಕಳೆದುಕೊಂಡಿರುವ ಕುಟುಂಬಗಳ ಜತೆ ನಿಲ್ಲಬೇಕು...

ಕಾವಡ್ ಯಾತ್ರೆ ವೇಳೆ ಅಂಗಡಿ ಮಾಲೀಕರ ಹೆಸರುಳ್ಳ ಫಲಕ ಹಾಕಲು ಆದೇಶ; ‘ಸಂವಿಧಾನದ ಮೇಲಿನ ದಾಳಿ’ ಎಂದ ಪ್ರಿಯಾಂಕಾ

ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ಜುಲೈ 22ರಿಂದ ನಡೆಯುವ ಕಾವಡ್ ಯಾತ್ರೆ ನಡೆಯಲಿದೆ....