ಕೆಪಿಎಸ್‌ಸಿ ನೇಮಕಾತಿ ಜಟಾಪಟಿ; ಕಾರ್ಯದರ್ಶಿ ಕೆ ಎಸ್ ಲತಾ ಕುಮಾರಿಗೆ 10 ದಿನ ರಜೆ ನೀಡಿದ ಸರ್ಕಾರ

Date:

ಕೆಪಿಎಸ್‌ಸಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಕಾರ್ಯದರ್ಶಿಗಳ ನಡುವಿನ ಶೀತಲ ಸಮರಕ್ಕೆ ತಡೆಯೊಡ್ಡಲು ರಾಜ್ಯ ಸರ್ಕಾರ ಕೆಪಿಎಸ್‌ಸಿ ಕಾರ್ಯದರ್ಶಿ ಕೆ ಎಸ್ ಲತಾ ಕುಮಾರಿ ಅವರಿಗೆ 10 ದಿನ ಗಳಿಕೆ ರಜೆ ನೀಡಿದೆ.

ಅಧ್ಯಕ್ಷರು ಮತ್ತು ಸದಸ್ಯರ ಕಾರ್ಯವೈಖರಿ ಕುರಿತು ಕೆಪಿಎಸ್‌ಸಿ ಕಾರ್ಯದರ್ಶಿ ಕೆ.ಎಸ್. ಲತಾ ಕುಮಾರಿ ಅವರು, “ಆಯೋಗ ಮತ್ತು ಸರ್ಕಾರಕ್ಕೆ ಮುಜುಗರ ಉಂಟಾಗದ ರೀತಿಯಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯಿಂದ ಕಾರ್ಯನಿರ್ವಹಿಸುವಂತೆ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರಿಗೆ ಅರಿವು ಮೂಡಿಸಬೇಕು. ವಿವಿಧ ಹುದ್ದೆಗಳಿಗೆ ನಿಯಮಾನುಸಾರ ಆಯ್ಕೆ ಪೂರ್ಣಗೊಳಿಸಲು ಸೂಚನೆ ನೀಡಬೇಕು” ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು.

ಇದರಿಂದ ಇಕ್ಕಟ್ಟಿಗೆ ಸಿಲುಕಿದ್ದ ರಾಜ್ಯ ಸರ್ಕಾರ ಒಂದು, ಅಧ್ಯಕ್ಷರು ಮತ್ತು ಸದಸ್ಯರ ನಡವಳಿಕೆ ಕುರಿತು ತಿಳಿವಳಿಕೆ ತುಂಬಲು ರಾಜ್ಯಪಾಲರಿಗೆ ಸರ್ಕಾರ ಸೂಚಿಸಬೇಕಿತ್ತು. ಇಲ್ಲ, ಕಾರ್ಯದರ್ಶಿ ಲತಾ ಕುಮಾರಿಯವರನ್ನು ವರ್ಗಾಯಿಸಬೇಕಿತ್ತು. ಇಂತಹ ಇಕ್ಕಟ್ಟಿನಲ್ಲಿ ಅವರಿಗೆ ರಜೆ ಮಂಜೂರು ಮಾಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರ ರಥ, ರಕ್ತ ಮತ್ತು ಭಾರತ ರತ್ನ

ಡಿಪಿಎಆರ್ ಇಲಾಖೆಯ ಈ ಕುರಿತು ಬುಧವಾರ ಆದೇಶ ಹೊರಡಿಸಿದೆ. ಕೆ.ಎಸ್. ಲತಾ ಕುಮಾರಿ ಅವರಿಗೆ ಫೆಬ್ರುವರಿ 7 ರಿಂದ ಫೆಬ್ರುವರಿ 17ರವರೆಗೆ ಗಳಿಕೆ ರಜೆ ನೀಡಲಾಗಿದೆ. ಅವರ ರಜೆ ಅವಧಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ರಾಕೇಶ್ ಕುಮಾರ್ ಕೆ ಅವರನ್ನು ಕೆಪಿಎಸ್‌ಸಿ ‍ಪ್ರಭಾರಿ ಕಾರ್ಯದರ್ಶಿಯನ್ನಾಗಿ ನಿಯುಕ್ತಿಗೊಳಿಸಿ ಆದೇಶಿಸಿದೆ.

ಕೆಪಿಎಸ್‌ಸಿಯ ನೇಮಕಾತಿ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್‌. ಸಾಹುಕಾರ್‌, ಕೆಲ ಸದಸ್ಯರು ಮತ್ತು ಲತಾಕುಮಾರಿ ಅವರ ನಡುವೆ ಜಟಾಪಟಿ ನಡೆಯುತ್ತಿದೆ. ಈ ಮಧ್ಯೆಯೇ ಅವರಿಗೆ ರಜೆ ನೀಡಿ ಕಳುಹಿಸಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಎ ರದ್ದಾಗದಿದ್ದರೆ ಬೃಹತ್ ಹೋರಾಟ; ಅಸ್ಸಾಂ ವಿಪಕ್ಷಗಳ ಎಚ್ಚರಿಕೆ

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಅನುಷ್ಠಾನಗೊಳಿಸದಂತೆ ಅಸ್ಸಾಂನ 16 ಪಕ್ಷಗಳ...

ರಾಮೇಶ್ವರ ಕೆಫೆ ಬಾಂಬ್ ಪ್ರಕರಣ | ಅಗತ್ಯ ಬಿದ್ದರೆ ತನಿಖೆ ಎನ್‌ಐಎಗೆ ವಹಿಸುತ್ತೇವೆ: ಸಿಎಂ ಸಿದ್ದರಾಮಯ್ಯ

"ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಎನ್‌ಐಎಗೆ ವಹಿಸುವ ಬಗ್ಗೆ ಅಗತ್ಯ...

ಮೋದಿಯ ‘ದ್ರೋಹದ ಗ್ಯಾರಂಟಿ’; ರೈಲ್ವೆ ಪಾಲಿಸಿ ವಿರುದ್ಧ ರಾಹುಲ್ ಕಿಡಿ

ಕೇಂದ್ರ ರೈಲ್ವೆ ಸಚಿವಾಲಯವು ಹಿರಿಯ ನಾಗರಿಕರಿಗಿದ್ದ ವಿನಾಯತಿಯನ್ನೂ ಕಿತ್ತುಕೊಂಡು 3,700 ಕೋಟಿ...

ಪೋಲಿಯೊ ನಿರ್ಮೂಲನೆ ಸ್ಥಿತಿಯನ್ನು ಕಾಯ್ದುಕೊಳ್ಳುವುದು ಮುಖ್ಯ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಭಾರತ ಪೋಲಿಯೊ ಮುಕ್ತ ರಾಷ್ಟ್ರವಾಗಿದ್ದನ್ನ ನಾವು ಮುಂದಿನ ದಿನಗಳಲ್ಲೂ ಕಾಯ್ದುಕೊಳ್ಳುವುದು ಮುಖ್ಯವಾಗಿದೆ....