ಕೆಆರ್​ಐಡಿಎಲ್​ ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ; ಇಲಾಖಾ ತನಿಖೆಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

Date:

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗುತ್ತಿಗೆದಾರ ಪಿ ಎಸ್​ ಗೌಡರ್​ ಕೆಆರ್​ಐಡಿಎಲ್​ ಅಧಿಕಾರಿಗಳ ವರ್ತನೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿರುವ ಪ್ರಕರಣವನ್ನು ಇಲಾಖಾ ತನಿಖೆಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಆದೇಶಿಸಿದ್ದಾರೆ.

- Advertisement -

ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (KRIDL)ನಿಂದ 2023-24ನೇ ಸಾಲಿನ ಬಾಕಿ ಬಿಲ್​ ಪಾವತಿಯಾಗದ ಹಿನ್ನೆಲೆಯಲ್ಲಿ ಮನನೊಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಗುತ್ತಿಗೆದಾರ ಪಿ ಎಸ್ ಗೌಡರ್ (48) ಡೆತ್​ನೋಟ್​ ಬರೆದಿರುವ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ಸಮಿತಿ ರಚಿಸಿ ವರದಿ ನೀಡುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಎಸಿಎಸ್​ಗೆ ಸಚಿವರು ಸೂಚನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕೌಟುಂಬಿಕ ಕಲಹವೂ ಇತ್ತು

ಗೌಡರ್ ಆತ್ಮಹತ್ಯೆಗೆ ಕೌಟುಂಬಿಕ ಕಾರಣವೂ ಒಂದು ಎಂಬ ಅಂಶ ಡೆತ್ ನೋಟ್‌ನಲ್ಲಿದೆ. ಗುತ್ತಿಗೆದಾರ ಪಿ.ಎಸ್. ಗೌಡರ್ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿದ್ದಲಿಂಗಪ್ಪ ಅವರ ಪುತ್ರ. ಆಸ್ತಿ ಹಂಚಿಕೆ ವಿಚಾರದಲ್ಲಿ ಸಹೋದರರ ನಡುವೆ ಮನಸ್ತಾಪವಿತ್ತು. ಒಮ್ಮೆ ದೈಹಿಕ ಹಲ್ಲೆಯೂ ನಡೆದಿತ್ತು, ನಂತರ ರಾಜಿ ಮಾಡಲಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಗೌಡರ್ ಅಣ್ಣ ಜಿ ಎಸ್ ನಾಗರಾಜ್, ತಮ್ಮ ಗೌಡರ ಶ್ರೀನಿವಾಸ್ ಅವರೊಂದಿಗೆ ಆಸ್ತಿ ಹಂಚಿಕೆ ವಿಚಾರವಾಗಿ ಮನಸ್ತಾಪವಿತ್ತು. ಹಲವು ಬಾರಿ ಪಂಚಾಯಿತಿ ಮಾಡಲಾಗಿತ್ತು. ಗೌಡರ ಶ್ರೀನಿವಾಸ್ ಅವರ ಪತ್ನಿ ಇಂದುಮತಿ ಮತ್ತು ಅವರ ತಂದೆ ಚಿತ್ರಶೇಖರಪ್ಪ ಅವರು ನಮಗೆ ಮಾನಸಿಕ ಹಿಂಸೆ ನೀಡಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ.

ಕೆಆರ್‌ಐಡಿಎಲ್ ಅಡಿಯಲ್ಲಿ ಒಂದು ಕಾಮಗಾರಿ ನಿರ್ವಹಿಸಿದ್ದು (ಕೃಷಿ ಇಲಾಖೆ ಆವರಣ, ಸಂತೇಬೆನ್ನೂರು) ಇದು 2023-24ನೇ ಸಾಲಿನಲ್ಲಿ ಪೂರ್ಣಗೊಂಡಿದೆ. ಆದರೆ ಇದುವರೆಗೂ ನನಗೆ ಕಾಮಗಾರಿ ಮೊತ್ತವನ್ನು ನೀಡದೆ ಮಾನಸಿಕವಾಗಿ ಹಿಂಸೆ ನೀಡಿರುತ್ತಾರೆ. ಹಾಗೂ ಈ ಸಂಸ್ಥೆಯಿಂದ ನನ್ನ ಕುಟುಂಬಕ್ಕೆ ದೊಡ್ಡ ಮೊತ್ತದ ಪರಿಹಾರ ಒದಗಿಸಿಕೊಡಬೇಕು ಎಂದು ಡೆತ್‌ನೋಟ್‌ನಲ್ಲಿ ಕೋರಿರುವುದಾಗಿ ತಿಳಿದು ಬಂದಿದೆ.

ಡೆತ್‌ ನೋಟ್‌ ಆಧರಿಸಿ ಎಸ್​ ಗೌಡರ್​ ಪತ್ನಿ ವಸಂತಕುಮಾರಿ ಸಂತೇಬೆನ್ನೂರು ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಕೆಆರ್‌ಐಡಿಎಲ್‌ ಸಂಸ್ಥೆ ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...