ದುಡ್ಡು ಮಾಡಲು ಅಡ್ಡ ಬರದ ಎಲೆಕ್ಷನ್, ಜನರ ಕೆಲಸಕ್ಕೆ ಅಡ್ಡ ಬರುತ್ತಾ? ಅಧಿಕಾರಿಗಳ ವಿರುದ್ಧ ಕೃಷ್ಣ ಬೈರೇಗೌಡ ಕಿಡಿ

Date:

ದುಡ್ಡು ಮಾಡಲು ಎಲೆಕ್ಷನ್ ಅಡ್ಡ ಬರಲ್ಲ, ಆದ್ರೆ ಜನರ ಕೆಲಸ ಮಾಡೋಕೆ ಮಾತ್ರ ಎಲೆಕ್ಷನ್ ಅಡ್ಡ ಬರುತ್ತಾ..? ಹೀಗೆ ಅಧಿಕಾರಿಗಳನ್ನು ಪ್ರಶ್ನಿಸುವ ಮೂಲಕ ಕಂದಾಯ ಸಚಚ ಕೃಷ್ಣ ಬೈರೇಗೌಡ ಅವರು ಉಪ ವಿಭಾಗಾಧಿಕಾರಿಗಳನ್ನು (ಎಸಿ) ತೀವ್ರ ತರಾಟೆಗೆ ತೆಗೆದುಕೊಂಡರು.

- Advertisement -

ಎಸಿ ನ್ಯಾಯಾಲಯಗಳಲ್ಲಿ ಹೆಚ್ಚು ಸಂಖ್ಯೆಯಲ್ಲಿ ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸದೆ ಬಾಕಿ ಉಳಿಸಿಕೊಂಡಿರುವ ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು, ಕೊಪ್ಪಳ, ಮೈಸೂರು, ಮಂಗಳೂರು ಹಾಗೂ ಬೆಳಗಾವಿ ಜಿಲ್ಲೆಗಳ ಆಯ್ದ 30 ಉಪ-ವಿಭಾಧಿಕಾರಿಗಳು ಹಾಗೂ ವಲಯ ಆಯುಕ್ತರ ಜೊತೆ ಇಂದು ವಿಕಾಸಸೌಧದಲ್ಲಿ ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಕೋರ್ಟ್‌ನಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಅಂದ್ರೆ ಎಲೆಕ್ಷನ್‌ ಕೆಲಸ ಇತ್ತು ಅಂತ ಸಾಬೂಬು ಹೇಳ್ತೀರಾ. ಹಲವು ವರ್ಷಗಳಿಂದ ಎಸಿ ನ್ಯಾಯಾಲಯಗಳಿಗೆ ಅಲೆದಾಡಿ ಜನ ಬಸವಳಿಸಿದ್ದಾರೆ. ಹೀಗಾಗಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಬೇಕು ಎಂದು ನಾವು ಕಳೆದ ಒಂದು ವರ್ಷದಿಂದ ರಾಜ್ಯಾದ್ಯಂತ ಓಡಾಡಿ ಸಭೆ ನಡೆಸಿ ಎಲ್ಲಾ ಅಧಿಕಾರಿಗಳಿಗೂ ಗುರಿ ನಿಗದಿ ಮಾಡಲಾಗಿದೆ. ಆದರೆ, ಕಳೆದ ಮಾರ್ಚ್‌ನಿಂದ ಪ್ರಕರಣ ವಿಲೇವಾರಿ ಕೆಲಸ ಮತ್ತೆ ನಿಂತ ನೀರಾಗಿದೆ” ಎಂದ ತೀವ್ರ ಅಸಮಾಧಾನ ಹೊರಹಾಕಿದರು.

“ರಾಜ್ಯಾದ್ಯಂತ ಎಸಿ ನ್ಯಾಯಾಲಯಗಳಲ್ಲಿ ಒಟ್ಟಾರೆ 36,430 ಪ್ರಕರಣಗಳು ಬಾಕಿ ಇವೆ. ಈ ಪೈಕಿ ಅತ್ಯಧಿಕ ಬೆಂಗಳೂರು ಉತ್ತರ ವಲಯದಲ್ಲಿ 5,419 ಹಾಗೂ ಬೆಂ.ದಕ್ಷಿಣ ವಲಯದಲ್ಲಿ 4,351 ಪ್ರಕರಣಗಳು ಬಾಕಿ ಇವೆ. ಅಲ್ಲದೆ, ಈ ಎರಡೂ ವಿಭಾಗದಲ್ಲಿ ಅಧಿಕಾರಿಗಳು ಶೇ.65ಕ್ಕಿಂತ ಹೆಚ್ಚು ತನ್ನ ಕಾರ್ಯಕ್ಷೇತ್ರದ (ಜ್ಯೂರಿ ಸೆಕ್ಷನ್) ಹೊರಗಿನ ಪ್ರಕರಣಗಳನ್ನೂ ದಾಖಲಿಸಿಕೊಂಡಿದ್ದಾರೆ. ಪ್ರಕರಣಗಳ ಇತ್ಯರ್ಥವೂ ಆಮೆ ಗತಿಯಲ್ಲಿ ಸಾಗಿದೆ” ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಬೆಂ.ಉತ್ತರ ವಿಭಾಗಾಧಿಕಾರಿ ಪ್ರಮೋದ್‌ ಪಾಟೀಲ್‌ ಹಾಗೂ ಬೆಂ.ದಕ್ಷಿಣ ವಿಭಾಗಾಧಿಕಾರಿ ರಜನೀಕಾಂತ ಚೌಹ್ಹಾಣ್‌ ವಿರುದ್ಧ ಆಕ್ರೋಶ ಹೊರಹಾಕಿದ ಸಚಿವರು, “ನಿಮ್ಮ ಕಾರ್ಯಕ್ಷೇತ್ರದ ಹೊರಗಿನ ಪ್ರಕರಣಗಳನ್ನೂ ಕಾನೂನು ಬಾಹೀರವಾಗಿ ದಾಖಲಿಸಿಕೊಂಡಿದ್ದೀರ. ಹೀಗೆ ಮಾಡಲು ಎಷ್ಟು ಹಣ ತೆಗೆದುಕೊಂಡಿರಿ” ಎಂದು ಖಾರವಾಗಿ ಪ್ರಶ್ನಿಸಿದರು.

ಸಭೆಯಲ್ಲಿ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಆಯುಕ್ತರಾದ ಸುನೀಲ್‌ ಕುಮಾರ್‌, ಪ್ರಾದೇಶಿಕ ಆಯುಕ್ತರಾದ ಆದಿತ್ಯ ಬಿಸ್ವಾಸ್‌ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...