ಕೃಷ್ಣ ಜಲಭಾಗ್ಯ ನಿಗಮ ಪರಿಹಾರ ಅಕ್ರಮ; ಶೀಘ್ರ ತನಿಖಾ ತಂಡ ರಚನೆ: ಡಿಸಿಎಂ ಡಿ ಕೆ ಶಿವಕುಮಾರ್

Date:

ಕೃಷ್ಣ ಜಲಭಾಗ್ಯ ನಿಗಮದಲ್ಲಿ ಪರಿಹಾರ ಕೊಡಿಸುವ ನೆಪದಲ್ಲಿ ಅಕ್ರಮ ನಡೆದಿದ್ದು. ಇದರಲ್ಲಿ ಒಂದಷ್ಟು ಜನ ಶಾಮೀಲಾಗಿದ್ದಾರೆ. ಇಲ್ಲಿ ನಮ್ಮ ರೈತರನ್ನು ಉಳಿಸಲು ತನಿಖಾ ತಂಡ ರಚಿಸಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ವಿಧಾನಸಭೆ ಅಧಿವೇಶನದ ಪ್ರಶ್ನೋತ್ತರ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ, ಕೃಷ್ಣ ಜಲಭಾಗ್ಯ ನಿಗಮದ ಅಡಿ ಸಮರ್ಪಕವಾದ ನೀರಾವರಿ ಕೆಲಸಗಳು ನಡೆಯುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, “ನ್ಯಾಯಲಯಗಳಲ್ಲಿ ಭೂಸ್ವಾಧೀನದ ಕುರಿತು ಪ್ರಕರಣಗಳು ನಡೆಯುತ್ತಿವೆ. ವಿಜಯಪುರ, ಬಾಗಲಕೋಟೆ, ರಾಯಚೂರು ಭಾಗದಲ್ಲಿ ನ್ಯಾಯಲಯದ ಮೂಲಕ ಎಕರೆಗೆ 74 ಲಕ್ಷ ಹಾಗೂ ಸಬ್ಅರ್ಬ್ ಭೂಮಿಗೆ 1 ಕೋಟಿ 26 ಲಕ್ಷ ಪರಿಹಾರ ಪಡೆಯುತ್ತಿದ್ದಾರೆ. ಸುಮಾರು 285 ಪ್ರಕಣಗಳಲ್ಲಿ ಈ ರೀತಿಯಾಗಿದೆ. 367 ಪ್ರಕರಣಗಳಿಗೆ ಪುನರ್ ವಸತಿ ಕಲ್ಪಿಸುವ ವಿಚಾರವಾಗಿ ಒಂದು ಎಕರೆಗೆ 5 ಕೋಟಿ 18 ಲಕ್ಷ ಪರಿಹಾರ ನೀಡಬೇಕು ಎಂದು ಕೋರ್ಟ್ ಆದೇಶ ಮಾಡಿದೆ. ಪೆರಿಫೆರಲ್ ರಿಂಗ್ ರಸ್ತೆಗೆ ಬೆಂಗಳೂರಿನಲ್ಲೇ ಇಷ್ಟು ದೊಡ್ಡ ಮೊತ್ತದ ಪರಿಹಾರ ನೀಡಲು ಆಗುತ್ತಿಲ್ಲ” ಎಂದರು.

“ಭೂ ಸ್ವಾಧೀನ ಪ್ರಕರಣಗಳನ್ನು ನಡೆಸುತ್ತಿರುವ ಎಲ್ಲ ಸರ್ಕಾರಿ ವಕೀಲರನ್ನು ಹಿಂದಕ್ಕೆ ಪಡೆಯಲಾಗುವುದು. ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಲಾಗುವುದು. ಇದರ ಬಗ್ಗೆ ಕಾನೂನು ಸಚಿವರ ಬಳಿ ಚರ್ಚೆ ನಡೆಸಲಾಗುವುದು” ಎಂದು ಡಿ ಕೆ ಶಿವಕುಮಾರ್ ಹೇಳಿದರು.

“ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿ ಸಚಿವ ಸಂಪುಟ ಉಪಸಮಿತಿ ಮಾಡಿ ಎಕರೆಗೆ 25 ಲಕ್ಷ ಪರಿಹಾರ ನೀಡಬೇಕು ಎಂದು ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಈಗ ದುಪ್ಪಟ್ಟು ಪರಿಹಾರ ನೀಡಬೇಕು ಎಂದು ನ್ಯಾಯಲಯ ಹೇಳಿದೆ. ಇದಕ್ಕೆ ಎಲ್ಲಿಂದ ಹಣ ತರುವುದು” ಎಂದು ಪ್ರಶ್ನಿಸಿದರು.

“ಕೃಷ್ಣ ಜಲಭಾಗ್ಯ ನಿಗಮದ ಅಡಿ ಕೈಗೊಂಡಿರುವ ಕಾರ್ಯಕ್ರಮಗಳು ಮುಗಿಯಲು ಹೆಚ್ಚಿನ ಅನುದಾನದ ಅವಶ್ಯಕತೆಯಿದೆ. ನಮ್ಮ ಸರ್ಕಾರ ಆದ್ಯತೆ ಮೇರೆಗೆ ಕೆಲಸ ಮಾಡುತ್ತಿದೆ. ಈ ಯೋಜನೆಯ ಬಗ್ಗೆ ಪುನರ್ ಪರಿಶೀಲನೆ ನಡೆಸಿದಾಗ ಗಾಬರಿ ಹುಟ್ಟಿಸುವ ಸಂಗತಿಗಳು ಬೆಳಕಿಗೆ ಬಂದಿವೆ. ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಕಾಲದಲ್ಲಿ ಈ ಅಣೆಟಕಟ್ಟು ನಿರ್ಮಾಣದ ವೇಳೆ ಅನೇಕ ಜನರು 1-2 ಸಾವಿರ ರೂಪಾಯಿಗೆ ಜಮೀನು ಬಿಟ್ಟುಕೊಟ್ಟಿದ್ದಾರೆ. 5 ವರ್ಷದ ಹಿಂದೆಯೂ ರೈತರು ಎಕರೆಗೆ 5 ಸಾವಿರ ಪಡೆದು ಜಮೀನು ನೀಡಿದ್ದಾರೆ” ಎಂದರು.

ಇನ್ನು ಕನಕನಾಲ ಯೋಜನೆ ಜಾರಿಯ ಬಗ್ಗೆ ಬಸನಗೌಡ ತುರ್ವಿಹಾಳ ಅವರ ಪ್ರಸ್ತಾವನೆಗೆ ಉತ್ತರಿಸಿದ ಅವರು “ಮಸ್ಕಿ ನಾಲೆಯಿಂದ ಕನಕನಾಲಾ ಕಣಿವೆಗೆ ಪ್ರವಾಹದ ನೀರನ್ನು ತಿರುಗಿಸುವ ಹಾಗೂ ಕನಕನಾಲೆಯ ಆಧುನೀಕರಣ ಯೋಜನೆಗೆ ₹ 134.56 ಕೋಟಿ ಮೊತ್ತದ ಡಿಪಿಆರ್ ಗೆ ಅನುಮತಿ ನೀಡುವ ವಿಚಾರ ಸರ್ಕಾರದ ಮುಂದಿದೆ” ಎಂದು ಹೇಳಿದರು.

“ನಾನು ಮತ್ತು ಮುಖ್ಯಮಂತ್ರಿಗಳು ಅನೇಕ ಬಾರಿ ಭೇಟಿ ನೀಡಿ ಈ ಭಾಗವನ್ನು ವೀಕ್ಷಣೆ ಮಾಡಿದ್ದೇವೆ. ಶಾಸಕರ ಕ್ಷೇತ್ರದಲ್ಲಿ ₹ 980 ಕೋಟಿ ಮೊತ್ತದ ನೀರಾವರಿಗೆ ಸಂಬಂಧಿಸಿದ ಕಾಮಗಾರಿ ನಡೆಸಲು ಸರ್ಕಾರ ಮುಂದಾಗಿದೆ. ಇದು ಮುಗಿದ ನಂತರ ಕೆರೆ ತುಂಬಿಸುವ ಯೋಜನೆ ಮಾಡಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಕ್ತಿ ಯೋಜನೆಗೆ 2 ವರ್ಷ: 474.82 ಕೋಟಿ ಮಹಿಳೆಯರ ಉಚಿತ ಪ್ರಯಾಣ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಶಕ್ತಿ ಯೊಜನೆ'...

ತೋತಾಪುರಿ ಮಾವು ಖರೀದಿ ಮೇಲೆ ನಿರ್ಬಂಧ, ಆಂಧ್ರ ಸಿಎಂಗೆ ಸಿದ್ದರಾಮಯ್ಯ ಪತ್ರ

ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕದ ಮಾವು ಬೆಳೆಗಾರರ ನೆರವಿಗೆ ಧಾವಿಸಿದ್ದು, ಚಿತ್ತೂರು...

ರಾಜ್ಯದ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ ಅಲರ್ಟ್‌

ಕರ್ನಾಟಕಕ್ಕೆ ಮುಂಗಾರು ಮಳೆ ಪ್ರವೇಶಿಸಿ ಎರಡು ವಾರಗಳು ಕಳೆದಿವೆ. ರಾಜ್ಯದ ನಾನಾ...

Download Eedina App Android / iOS

X