ಬಿಜೆಪಿ ಜೊತೆ ಕೆಆರ್‌ಪಿಪಿ ವಿಲೀನ; ಮರಳಿ ಗೂಡು ಸೇರಿದ ಗಾಲಿ ಜನಾರ್ದನ ರೆಡ್ಡಿ

Date:

Advertisements

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ನಾಯಕ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಮರಳಿ ಬಿಜೆಪಿ ಸೇರಿದ್ದಾರೆ.

ಲೋಕಸಭಾ ಚುನಾವಣೆ ಹೊತ್ತಲ್ಲೇ ಅವರು ಮರಳಿ ಗೂಡು ಸೇರಿರುವುದು ಬಳ್ಳಾರಿ ಕ್ಷೇತ್ರದಲ್ಲಿ ಬಲ ಬಂದಂತಾಗಿದೆ. ಸೋಮವಾರ ಬಿ ಎಸ್ ​ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹಾಗೂ ಶ್ರೀರಾಮುಲು ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು. ಪಕ್ಷದ ಬಾವುಟ ನೀಡಿ ಜನಾರ್ದನ ರೆಡ್ಡಿ ಅವರನ್ನು ವಿಜಯೇಂದ್ರ ಪಕ್ಷಕ್ಕೆ ಸ್ವಾಗತಿಸಿದರು.

“ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ನೋಡಲು ಬಯಸುತ್ತೇನೆ. ಕೆಆರ್‌ಪಿಪಿ ಪಕ್ಷವನ್ನೂ ಬಿಜೆಪಿ ಜೊತೆ ವಿಲೀನಗೊಳಿಸಲಾಗಿದೆ” ಎಂದು ಜನಾರ್ದನ ರೆಡ್ಡಿ ತಿಳಿಸಿದ್ದಾರೆ.

Advertisements
Advertisements

ಇತ್ತೀಚೆಗೆ ದೆಹಲಿಗೆ ದೌಡಾಯಿಸಿ, ಗೃಹ ಸಚಿವ ಅಮಿತ್ ಶಾ ಜೊತೆ ರೆಡ್ಡಿ ಒಂದು ಸುತ್ತಿನ ಮಾತುಕತೆ ನಡೆಸಿದ್ದರು. ಈ ವೇಳೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ ಎನ್ನಲಾಗಿದೆ. ಬಿಜೆಪಿಯಲ್ಲಿ ವಿಲೀನವಾಗಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಯಕ ಜನಾರ್ದನ ರೆಡ್ಡಿ, ಕೊಪ್ಪಳ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಬದಲಾಯಿಸುವಂತೆ, ಅದೇ ಕ್ಷೇತ್ರದಿಂದ ಪತ್ನಿ ಅರುಣಾ ಲಕ್ಷ್ಮೀಗೆ ಟಿಕೆಟ್ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಗಂದೂರು ಸೇತುವೆ | ಶಿಷ್ಟಾಚಾರ ಉಲ್ಲಂಘನೆ, ಕಾರ್ಯಕ್ರಮದಿಂದ ದೂರ ಉಳಿದ ರಾಜ್ಯ ಸರ್ಕಾರ

ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ...

ಸಿದ್ದರಾಮಯ್ಯನವರೇ, ಸಾಮಾಜಿಕ ನ್ಯಾಯ ನಿಮ್ಮ ನುಡಿಯಲ್ಲಿದೆ, ಅದು ನಡೆಯಲ್ಲೂ ಇರಲಿ- ಪ್ರಕಾಶ್‌ ರಾಜ್‌

"ಸಾಮಾಜಿಕ ನ್ಯಾಯ ನಿಮ್ಮ ನುಡಿಯಲ್ಲಿದೆ, ಅದು ನಡೆಯಲ್ಲೂ ಇರಲಿ. ನಾಳೆ ರೈತರೊಂದಿಗೆ...

ದೇಶದ ಎರಡನೇ ಅತಿ ಉದ್ದದ ಕೇಬಲ್ ಸೇತುವೆ ರಾಜ್ಯದಲ್ಲಿ ಉದ್ಘಾಟನೆ

ಶರಾವತಿ ನದಿ ಹಿನ್ನೀರಿನ ಐತಿಹಾಸಿಕ ಸಿಗಂದೂರು ಸೇತುವೆಯನ್ನು ಕೇಂದ್ರ ಭೂ ಸಾರಿಗೆ...

ಧರ್ಮಸ್ಥಳ ಸಾವು ಪ್ರಕರಣ: ವಿಶೇಷ ತನಿಖಾ ತಂಡ ರಚಿಸುವಂತೆ ಕೋರಿ ಸಿಎಂಗೆ ಮಹಿಳಾ ಆಯೋಗ ಪತ್ರ

ಧರ್ಮಸ್ಥಳ ವ್ಯಾಪ್ತಿಯಲ್ಲಿನ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ವಿಶೇಷ ತನಿಖಾ...

Download Eedina App Android / iOS

X