ರಾಜಕೀಯ ತೆವಲಿಗೆ ಅಮಾಯಕರ ಮೇಲೆ ದೌರ್ಜನ್ಯ: ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ

Date:

  • ‘ಸಿಎಂ ಕಚೇರಿಯಲ್ಲೇ ವರ್ಗಾವಣೆಗೆ ಹಣ ಕೇಳುತ್ತಿದ್ದಾರೆ’
  • ‘ವೈಎಸ್‌ಟಿ ಟ್ಯಾಕ್ಸ್ ಬಗ್ಗೆ ಎಲ್ಲ ರಾಜಕಾರಣಿಗಳಿಗೂ ಗೊತ್ತಿದೆ’

ರಾಜ್ಯದಲ್ಲಿ ಹೊಸ ಹೊಸ ಟ್ಯಾಕ್ಸ್ ಗಳು ಆರಂಭವಾಗಿವೆ. ಟ್ಯಾಕ್ಸ್ ನೀಡಿದರೆ ಮಾತ್ರ ಇವರಿಗೆ ಲಾಭ. ‘ವೈಎಸ್‌ಟಿ’ ಟ್ಯಾಕ್ಸ್ ಬಗ್ಗೆ ಎಲ್ಲ ರಾಜಕಾರಣಿಗಳಿಗೂ ಗೊತ್ತಿದೆ. ಸರ್ಕಾರಿ ಅಧಿಕಾರಿಗಳ ವರ್ಗಾವಣೆಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಹಣ ಕೇಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್​ ಡಿ ಕುಮಾರಸ್ವಾಮಿ ಆರೋಪಿಸಿದರು.

ವರ್ಗಾವಣೆಗೆ ಬೇಸತ್ತು ನಾಗಮಂಗಲದ ಕೆಎಸ್​ಆರ್​ಟಿಸಿ ಚಾಲಕ ಜಗದೀಶ್​​ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ಬೆಳಗ್ಗೆ ಆಸ್ಪತ್ರೆಗೆ ಭೇಟಿ ನೀಡಿ ಚಾಲಕನ ಆರೋಗ್ಯ ವಿಚಾರಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಈ ಬಗ್ಗೆ ಕ್ರಮಕೈಗೊಳ್ಳಲಿ. ತಮ್ಮ ರಾಜಕೀಯ ತೆವಲಿಗೆ ಅಮಾಯಕರ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಜಗದೀಶ್ ಸದ್ಯ ವೆಂಟಿಲೇಟರ್‌ನಲ್ಲಿ ಇದ್ದಾರೆ. ಸರ್ಕಾರ ಬಂದು ಐವತ್ತು ದಿನ ಆಗಿಲ್ಲ. ವರ್ಗಾವಣೆ ಮಾಡಿಕೊಳ್ಳುವುದಾದರೆ ಮಾಡಿಕೊಳ್ಳಲಿ. ಆದರೆ, ಈ ರೀತಿ ಮಾಡುವುದು ಸರಿಯಲ್ಲ. ಜಗದೀಶ್ ಪತ್ನಿ ಪಂಚಾಯಿತಿ ಸದಸ್ಯೆ. ಆಗಲೇ ದ್ವೇಷ ರಾಜಕಾರಣ ಆರಂಭಿಸಿದ್ದಾರೆ. ಊರಿನಲ್ಲಿರುವ ಮಹದೇವ ಎಂಬ ರೌಡಿ ಜಗದೀಶ್​ ಕುಟುಂಬಕ್ಕೆ ಕಿರುಕುಳ ನೀಡಿದ್ದಾನೆ. ಈ ಹೆಣ್ಣು ಮಗಳು ಜೆಡಿಎಸ್ ಬಿಡುವಂತೆ, ಕಾಂಗ್ರೆಸ್ ಸೇರುವಂತೆ ಒತ್ತಡ ಹೇರಿದ್ದಾನೆ” ಎಂದು ಕಿಡಿಕಾರಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮತ್ತೊಂದೆಡೆ ಜಗದೀಶ್​​ಗೆ ಅಧಿಕಾರಿಗಳ ಮೂಲಕ‌ ಕಿರುಕುಳ ನೀಡುತ್ತಿದ್ದಾರೆ. ಡೆತ್ ನೋಟ್‌ನಲ್ಲಿ‌ ಜಗದೀಶ್ ಅವರು ಸ್ಪಷ್ಟವಾಗಿ ಬರೆದಿದ್ದಾರೆ. ಸಚಿವರ ಆದೇಶ ಇದೆ ಒತ್ತಡ ಇದೆ ಎಂದು ಅಧಿಕಾರಿಗಳು‌ ಹೇಳಿದ್ದಾರೆ. ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಅವರನ್ನು ಮಂತ್ರಿ ಸ್ಥಾನದಿಂದ ಕೆಳಗಿಳಿಸಿ. ಮಂತ್ರಿ ಸ್ಥಾನ ಏನು ಶಾಶ್ವತನಾ? ಘಟನೆ ಸಂಬಂಧ ಅಧಿಕಾರಿಗಳನ್ನು ಕೇಳಿದರೆ ಇನ್ನೂ ವ್ಯಕ್ತಿ ಸತ್ತಿಲ್ಲ, ಆ ಕಾರಣಕ್ಕೆ ಎಫ್‌ಐಆರ್ ದಾಖಲಿಸಿಲ್ಲ ಎನ್ನುತ್ತಾರೆ. ಇವರಿಗೆ ಮತ ಹಾಕಿದ್ದು ಜನರ ಜೀವದ ಜೊತೆ ಚೆಲ್ಲಾಟ ಆಡಲು ಅಲ್ಲ” ಎಂದು ವಾಗ್ದಾಳಿ ನಡೆಸಿದರು.

“ನಿನ್ನೆ ಅವರ ಕುಟುಂಬಕ್ಕೆ ಕರೆ ಮಾಡಿದಾಗ ಕುಟುಂಬದವರು ಅಳುತ್ತಿದ್ದರು. ರಾತ್ರಿ 1.30 ಕ್ಕೆ ಮೈಸೂರಿಗೆ ಶಿಫ್ಟ್ ಮಾಡಿದ್ದಾರೆ. ವೈದ್ಯರು ಕೈಲಾದ ಪ್ರಯತ್ನ ಮಾಡುತ್ತೇನೆ ಎಂದಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಮೀಸಲಾತಿ ಗೊಂದಲ ನಿವಾರಣೆಗೆ ಪ್ರತ್ಯೇಕ ಸಭೆ; ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಘಟನೆ ಹಿನ್ನೆಲೆ

“ರಾಜಕೀಯ ದ್ವೇಷದಿಂದ ವರ್ಗಾವಣೆ ಮಾಡಿದ್ದಾರೆ” ಎಂದು ಸಚಿವ ಎನ್ ಚಲುವರಾಯಸ್ವಾಮಿ ವಿರುದ್ಧ ಆರೋಪ ಮಾಡಿ ಕೆಎಎಸ್​ಆರ್​​ಟಿಸಿ ಬಸ್ ಚಾಲಕ ಜಗದೀಶ್ ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ಡಿಪೋ ಎದುರು ಬುಧವಾರ ನಡೆದಿತ್ತು. ಅಸ್ವಸ್ಥಗೊಂಡಿರುವ ಜಗದೀಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

“ಚುನಾವಣೆಯಲ್ಲಿ ಜೆಡಿಎಸ್ ಪರ ಕೆಲಸ ಮಾಡಿದ್ದಕ್ಕೆ ವರ್ಗಾವಣೆ ಮಾಡಲಾಗಿದೆ. ರಾಜಕೀಯ ದ್ವೇಷದಿಂದ ವರ್ಗಾವಣೆ ಮಾಡಿದ್ದಾರೆ” ಎಂದು ಸಚಿವ ಎನ್ ಚಲುವರಾಯಸ್ವಾಮಿ ವಿರುದ್ಧ ಜಗದೀಶ್ ಆಕ್ರೋಶ ವ್ಯಕ್ತಪಡಿಸಿ, ಡಿಪೋ ಬಳಿ ವಿಷ ಸೇವಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಬೀದಿ ನಾಯಿಗಳ ಸರ್ವೆ, ಸಂತಾನ ನಿಯಂತ್ರಣ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

ಹುಬ್ಬಳ್ಳಿ–ಧಾರವಾಡ ಅವಳಿ ನಗರಗಳಲ್ಲಿ ಬೀದಿ ನಾಯಿಗಳ ಸಮೀಕ್ಷೆ ಕಾರ್ಯವನ್ನು 15 ದಿನದೊಳಗಾಗಿ...

ಶಿರಾಡಿ ಘಾಟ್‌ನಲ್ಲಿ ಭೀಕರ ರಸ್ತೆ ಅಪಘಾತ: ಓರ್ವ ಸಾವು; ಐವರಿಗೆ ಗಾಯ

ಎರಡು ಕಾರುಗಳು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ...

ಬೀದರ್ | ಸೆ.15ಕ್ಕೆ ರಾಜ್ಯಾದ್ಯಂತ ಪ್ರಜಾಪ್ರಭುತ್ವ ದಿನಾಚರಣೆ : ಸಚಿವ ಈಶ್ವರ ಖಂಡ್ರೆ

ನಮ್ಮ ಸರಕಾರದ ತೀರ್ಮಾನದಂತೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸೆ.15ರಂದು ಕರ್ನಾಟಕ ರಾಜ್ಯದಾದ್ಯಂತ...

ಮಂಡ್ಯ | ಸರ್ಕಾರಿ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರ ಕಡೆಗಣಿಸಿದ ಜಿಲ್ಲಾಡಳಿತ: ಕಾರಸವಾಡಿ ಮಹದೇವ

ಈವೆಂಟ್ ಮ್ಯಾನೆಜ್‌ಮೆಂಟ್‌ ಹೆಸರಲ್ಲಿ ಕಮಿಷನ್ ಆಸೆಗೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರನ್ನು...