ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್‌ ನಾಯಕರ ಸಭೆ: ಲೋಕಸಭೆ ಚುನಾವಣೆ ಗೆಲ್ಲಲು ರಣತಂತ್ರ

Date:

Advertisements

ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆಲ್ಲುವುದಕ್ಕೆ ಕಾರ್ಯಸೂಚಿ ಸಿದ್ಧಪಡಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್‌ ನಾಯಕರು, ಸಚಿವರೊಂದಿಗೆ ಬುಧವಾರ(ಆಗಸ್ಟ್ 2) ದೆಹಲಿಯ ಅಕ್ಬರ್‌ ರಸ್ತೆಯಲ್ಲಿನ ಎಐಸಿಸಿ ಮುಖ್ಯ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಲಿದೆ. 

ಲೋಕಸಭೆ ಚುನಾವಣೆಯನ್ನೇ ಮುಖ್ಯ ಗುರಿಯಾಗಿಟ್ಟುಕೊಂಡು ಎರಡು ಹಂತಗಳಲ್ಲಿ ಸಭೆ ನಡೆಯಲಿದ್ದು, ಮೊದಲ ಹಂತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ, ಎಐಸಿಸಿ ಸದಸ್ಯರು, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಎಐಸಿಸಿ ಕಾರ್ಯದರ್ಶಿಗಳು, ಪ್ರಮುಖ ಸಚಿವರು ಸೇರಿ ಸುಮಾರು 37 ಮಂದಿಯನ್ನು ಉದ್ದೇಶಿಸಿ ರಾಹುಲ್‌ಗಾಂಧಿ ಅವರು ಮಾತನಾಡಲಿದ್ದಾರೆ.

ರಾಹುಲ್‌ ಗಾಂಧಿ ಮುಖ್ಯವಾಗಿ ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಕ್ಷೇತ್ರವಾರು ಮಾಹಿತಿ ಪಡೆಯಲಿದ್ದಾರೆ. ಪ್ರತಿ ಕ್ಷೇತ್ರದಲ್ಲೂ ಗೆಲ್ಲುವ ಅಭ್ಯರ್ಥಿಗಳ ಬಗ್ಗೆ ಪ್ರಾಥಮಿಕ ಚರ್ಚೆ ನಡೆಯಲಿದೆ. ಗೆಲ್ಲುವ ಅಭ್ಯರ್ಥಿಗಳು ಕಣಕ್ಕಿಳಿಸಲು ಈ ಕ್ಷಣದಿಂದಲೇ ಕೆಲಸ ಮಾಡುವಂತೆ ರಾಜ್ಯ ನಾಯಕರಿಗೆ ರಾಹುಲ್‌ ಗಾಂಧಿ ಸೂಚನೆ ನೀಡಲಿದ್ದಾರೆ.

ಎಲ್ಲ ಸಮೀಕರಣಗಳನ್ನೂ ಕ್ರೋಡೀಕರಿಸಲು ಚುನಾವಣೆ ಗೆಲ್ಲಲು ಯಾವ ಕಾರ್ಯಸೂಚಿಯನ್ನು ಮುಂದಿಟ್ಟುಕೊಂಡು ಹೋಗಬೇಕು ಎಂಬ ಬಗ್ಗೆ ಮಾರ್ಗಸೂಚಿ ಸಿದ್ಧಪಡಿಸಲಿದ್ದಾರೆ. ಮುಖ್ಯವಾಗಿ ನಿಗದಿತ ಕ್ಷೇತ್ರಗಳಲ್ಲಿ ಗೆಲ್ಲುವ ಸಾಮರ್ಥ್ಯವಿರುವ ಶಾಸಕರು ಹಾಗೂ ಸಚಿವರನ್ನೇ ಲೋಕಸಭೆಗೆ ಕಣಕ್ಕಿಳಿಸುವ ಬಗ್ಗೆಯೂ ಚರ್ಚೆಯಾಗಲಿದೆ. ಗೆಲ್ಲುವ ಸಾಧ್ಯತೆ ಹೆಚ್ಚಿದ್ದರೆ ಅವರನ್ನೇ ಮನವೊಲಿಸಲು ಸಾಧ್ಯತೆಯಿದೆ.

ಈ ಸುದ್ದಿ ಓದಿದ್ದೀರಾ? ಕ್ರಿಕೆಟ್‌ನಲ್ಲಿ ನಿಮ್ಮ ಪುತ್ರ ಎಷ್ಟು ರನ್ ಸ್ಕೋರ್‌ ಮಾಡಿದ್ದಾರೆ? ಅಮಿತ್ ಶಾಗೆ ಸ್ಟಾಲಿನ್‌ ಪುತ್ರ ತಿರುಗೇಟು

ಸಚಿವರೊಂದಿಗೆ ಪ್ರತ್ಯೇಕ ಸಭೆ

ಸಚಿವರ ಇಲಾಖಾವಾರು ಪ್ರಗತಿಯ ಬಗ್ಗೆ ಮೌಲ್ಯಮಾಪನ ನಡೆಯಲಿದ್ದು, ಜೊತೆಗೆ ಶಾಸಕರ ಅಸಮಾಧಾನದ ಬಗ್ಗೆಯೂ ರಾಹುಲ್‌ ಗಾಂಧಿ ಚರ್ಚೆ ನಡೆಸಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬ ಸಚಿವರೂ ಬದ್ಧತೆಯಿಂದ ಕೆಲಸ ಮಾಡಬೇಕು. ಕ್ಷೇತ್ರದ ಜನರಲ್ಲಿ ಭರವಸೆ ಮೂಡಿಸಬೇಕು. ಗ್ಯಾರಂಟಿ ಯೋಜನೆಗಳ ಲಾಭ ಮತದ ರೂಪ ಪಡೆಯುವಂತೆ ಕೆಲಸ ಮಾಡಬೇಕು. ಅಗತ್ಯವಾದರೆ ಪಕ್ಷಕ್ಕಾಗಿ ಸ್ಪರ್ಧೆಗೂ ಸಿದ್ಧವಿರಬೇಕು ಎಂದು ರಾಹುಲ್‌ ಗಾಂಧಿ ಸಲಹೆ ನೀಡುವ ಸಾಧ್ಯತೆಯಿದೆ.

ಲೋಕಸಭೆ ಚುನಾವಣೆ ದೃಷ್ಟಿಯಿಂದ ವಿರೋಧಪಕ್ಷಗಳು ಷಡ್ಯಂತ್ರ ನಡೆಸಿ ಭ್ರಷ್ಟಾಚಾರದಲ್ಲಿ ಸಿಲುಕಿಸುವ ಪ್ರಯತ್ನ ಮಾಡಲಿವೆ. ಈ ನಿಟ್ಟಿನಲ್ಲಿ ಜೆಡಿಎಸ್‌ ಹಾಗೂ ಬಿಜೆಪಿ ಒಂದಾಗಲಿವೆ ಎಂಬ ಮಾಹಿತಿಗಳಿವೆ. ಹೀಗಾಗಿ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು ಎಂದು ರಾಹುಲ್‌ಗಾಂಧಿ ಸೂಚನೆ ನೀಡುವ ಸಾಧ್ಯತೆಯಿದೆ.

ಈ ಮೊದಲು ವಿಪಕ್ಷ ನಾಯಕರ ಸಭೆಗೆ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ್ದ ರಾಹುಲ್‌ಗಾಂಧಿ ಅವರು ಜು.17 ರಂದೇ ರಾಜ್ಯ ಸಚಿವರೊಂದಿಗೆ ಸಭೆ ನಡೆಸಬೇಕಿತ್ತು. ಆದರೆ ಕೇರಳ ಮಾಜಿ ಮುಖ್ಯಮಂತ್ರಿ ಊಮ್ಮನ್‌ ಚಾಂಡಿ ನಿಧನದಿಂದ ಸಭೆ ಮುಂದೂಡಿಕೆಯಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಕೆಲಸಕ್ಕಾಗಿ ಮಗುವನ್ನು ಕಾಡಿಗೆ ಎಸೆದ ಪೋಷಕರು; ಬಂಡೆ ಕೆಳಗೆ ಬದುಕುಳಿದ ಶಿಶು

ಕಾಡಿನ ತಂಪಾದ ನೆಲದಲ್ಲಿ, ತೆರೆದ ಆಕಾಶದ ಕೆಳಗೆ ಆ ಮಗು ಕೂಗುತ್ತಿತ್ತು....

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

‘ನನ್ನ ಗಂಡನನ್ನು ಭೇಟಿಯಾಗುವ ಅರ್ಹತೆ ನನಗಿಲ್ಲವೇ?’: ರಾಷ್ಟ್ರಪತಿ, ಮೋದಿಗೆ ಪತ್ರ ಬರೆದ ವಾಂಗ್ಚುಕ್ ಪತ್ನಿ

ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಇಟ್ಟುಕೊಂಡು...

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

Download Eedina App Android / iOS

X