ತೆಲಂಗಾಣ | ಚುನಾವಣಾ ಪ್ರಚಾರ ವಾಹನದಿಂದ ಮಗುಚಿ ಬಿದ್ದ ಸಚಿವ ಕೆಟಿಆರ್; ತಪ್ಪಿದ ಭಾರೀ ದುರಂತ

Date:

ತೆಲಂಗಾಣ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ತೆರೆದ ವಾಹನದಲ್ಲಿ ನಿಝಾಮಾಬಾದ್ ಜಿಲ್ಲೆಯ ಆರ್ಮೂರ್‌ನಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ವಾಹನ ತಕ್ಷಣ ಬ್ರೇಕ್ ಹಾಕಿದ ಪರಿಣಾಮ ತೆಲಂಗಾಣ ಸಚಿವ ಮತ್ತು ಬಿಆರ್‌ಎಸ್ ನಾಯಕ ಕೆಟಿಆರ್ ರಾವ್ ವಾಹನದಿಂದ ಕೆಳಗೆ ಬಿದ್ದಿರುವ ಘಟನೆ ನಡೆದಿದೆ.

- Advertisement -

ನಿಝಾಮಾಬಾದ್‌ನ ಆರ್ಮೂರಿನಲ್ಲಿ ಆಯೋಜಿಸಿದ್ದ ಬಿಆರ್‌ಎಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ವೇಳೆ ಈ ಘಟನೆ ಇಂದು ನಡೆದಿದೆ. ಬಿಆರ್‌ಎಸ್ ಅಭ್ಯರ್ಥಿ ಜೀವನ್ ರೆಡ್ಡಿ ನಾಮಪತ್ರ ಸಲ್ಲಿಕೆಯಲ್ಲಿ ಸಚಿವ ಕೆಟಿಆರ್ ಹಾಗೂ ಇತರ ಮುಖಂಡರು ಭಾಗವಹಿಸಿದ್ದರು. ಇದಕ್ಕಾಗಿ ಪ್ರಚಾರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ, ವಾಹನ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಕೆಟಿಆರ್, ಸಂಸದ ಸುರೇಶ್ ರೆಡ್ಡಿ ಹಾಗೂ ಅಭ್ಯರ್ಥಿ ಜೀವನ್ ರೆಡ್ಡಿ ವಾಹನದ ಮೇಲೆ ಅಳವಡಿಸಿದ್ದ ರೇಲಿಂಗ್‌ನಿಂದ ಕೆಳಕ್ಕೆ ಬಿದ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ದಿಢೀರ್ ಬ್ರೇಕ್ ಹಾಕಿದ್ದರಿಂದ ವಾಹನದ ರೈಲಿಂಗ್ ಮೇಲೆ ನಿಂತಿದ್ದ ಜನರ ಭಾರ ತಾಳಲಾರದೆ ಮುರಿದಿದ್ದರಿಂದ ಈ ಘಟನೆ ಸಂಭವಿಸಿದೆ. ತಕ್ಷಣ ಎಚ್ಚೆತ್ತ ಕೆಟಿಆರ್ ಭದ್ರತಾ ಸಿಬ್ಬಂದಿ, ಕೆಟಿಆರ್ ವಾಹನದಿಂದ ಕೆಳಕ್ಕೆ ಬೀಳದಂತೆ ಅವರನ್ನು ರಕ್ಷಣೆ ಮಾಡಿದ್ದಾರೆ. ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

ಕೆಟಿಆರ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆರ್ಮೂರ್ ಪಟ್ಟಣದ ಹಳೆ ಆಲೂರು ರಸ್ತೆಯಲ್ಲಿ ಈ ಘಟನೆ ನಡೆದಿದೆ. ಹೆಚ್ಚಿನ ಗಾಯಗಳಾಗದ ಕಾರಣ ಜೀವನ್ ರೆಡ್ಡಿ ಜತೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಕೆಟಿಆರ್, ‘ಅದೃಷ್ಟವಶಾತ್ ಯಾವುದೇ ದೊಡ್ಡ ಅವಘಡ ಸಂಭವಿಸಿಲ್ಲ. ನಾನು ಸುರಕ್ಷಿತವಾಗಿದ್ದೇನೆ’ ಎಂದು ಹೇಳಿ ಬಳಿಕ ಕೊಡಂಗಲ್ ರೋಡ್ ಶೋನಲ್ಲಿ ಭಾಗವಹಿಸಲು ತೆರಳಿದರು.

ಕಾಂಗ್ರೆಸ್-ಬಿಆರ್‌ಎಸ್ ಕಾರ್ಯಕರ್ತರ ನಡುವೆ ಘರ್ಷಣೆ

ಹೈದರಾಬಾದ್‌ನ ಇಬ್ರಾಹಿಂ ಪಟ್ಟಣಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾಂಗ್ರೆಸ್-ಬಿಆರ್‌ಎಸ್ ಪಕ್ಷಗಳ ಅಭ್ಯರ್ಥಿಗಳು ಒಂದೇ ಸಮಯದಲ್ಲಿ ನಾಮಪತ್ರ ಸಲ್ಲಿಸಲು ಹೊರಟಿದ್ದರಿಂದ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಕಾರ್ಯಕರ್ತರ ನಡುವೆ ಕಲ್ಲು ತೂರಾಟ ಕೂಡ ನಡೆದಿದೆ. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಲಾಠಿ ಚಾರ್ಜ್ ನಡೆಸಿ, ಗುಂಪನ್ನು ಚದುರಿಸಿದ್ದರಿಂದ ಹೆಚ್ಚಿನ ಘರ್ಷಣೆ ನಡೆಯುವುದನ್ನು ತಪ್ಪಿಸಿದ್ದಾರೆ.

ತೆಲಂಗಾಣದಲ್ಲಿ ನ.30 ರಂದು ಚುನಾವಣೆ ನಡೆಯಲಿದ್ದು, 119 ಸ್ಥಾನಗಳಿಗೆ ಕಣದಲ್ಲಿರುವ ಅಭ್ಯರ್ಥಿಗಳ ಭವಿಷ್ಯವು ಡಿಸೆಂಬರ್ 3ರಂದು ನಿರ್ಧಾರವಾಗಲಿದೆ. ಒಟ್ಟು ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಯು ನಡೆಯಲಿದ್ದು, ಡಿ.3ರಂದೇ ಎಲ್ಲ ರಾಜ್ಯಗಳಿಗೆ ಮತ ಎಣಿಕೆ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR: ಪಶ್ಚಿಮ ಬಂಗಾಳದ ಅವಾಂತರಗಳು

ಮುಖ್ಯ ಚುನಾವಣಾ ಆಯುಕ್ತರು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂಬ ದೂರಿನ ಮೇರೆಗೆ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಿದರೂ CEC ವಿರುದ್ಧ ಪ್ರತಿಭಟನೆ ಮುಂದುವರೆಯುತ್ತದೆ: CJP

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆ ರಾಜೀನಾಮೆಯಿಂದ ಅಂತ್ಯಗೊಳ್ಳುವುದಿಲ್ಲ....

ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಸಿಜೆಪಿ ‘ಜನತಾ ನ್ಯಾಯಾಲಯ’ – ಎಸ್‌ಐಆರ್ ಅನ್ಯಾಯಗಳ ವಿರುದ್ಧ ಪ್ರತಿಭಟನೆಯ ಕಹಳೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಕ್ರಮಗಳು, ಮುಖ್ಯ ಚುನಾವಣಾ...