ಕುಳುವ ಸಮುದಾಯವನ್ನು ಎಸ್.ಸಿ ಪಟ್ಟಿಯಿಂದ ತೆಗೆಯಲು ಸಾಧ್ಯವೇ ಇಲ್ಲ: ಸಿಎಂ ಸಿದ್ದರಾಮಯ್ಯ

Date:

Advertisements

ಕುಳುವ ಸಮುದಾಯವನ್ನು ಪರಿಶಿಷ್ಟ ಜಾತಿಯ ಪಟ್ಟಿಯಿಂದ ತೆಗೆಯಲು ಸಾಧ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆಯ ಮಾತುಗಳನ್ನು ಆಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.

ಕುಳುವ ಸಮಾಜದ ಹಲವರಲ್ಲಿ ತಮ್ಮನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಹೊರಗೆ ಇಡಬಹುದು ಎನ್ನುವ ಆತಂಕ ಹಲವರಲ್ಲಿದೆ. ಆದರೆ, ನಾನು ಹೇಳ್ತಾ ಇದ್ದೇನೆ. ಆ ಆತಂಕ ಬೇಡ ಎಂದರು.

Advertisements

ಶಿಕ್ಷಣ ಹೆಚ್ಚಾದಷ್ಟೂ ಜಾತಿ ವ್ಯವಸ್ಥೆ ನಶಿಸಬೇಕಿತ್ತು. ಆದರೆ ಹಾಗೇ ಉಳಿದುಕೊಂಡಿದೆ. ಬಸವಾದಿ ಶರಣರು 12ನೇ ಶತಮಾನದಲ್ಲೇ ಜಾತಿ ವ್ಯವಸ್ಥೆ ಮತ್ತು ತಾರತಮ್ಯದ ವಿರುದ್ಧ ಕ್ರಾಂತಿ ಮಾಡಿದ್ದರು. ನುಲಿಯ ಚಂದಯ್ಯ ಬಸವಾದಿ ಶರಣರಲ್ಲಿ ಪ್ರಮುಖರು. ಶರಣರಲ್ಲೇ ಅಗ್ರಗಣ್ಯರು. ಹೀಗಾಗಿ ಬಸವಣ್ಣನವರಿಗೆ ನುಲಿಯ ಚಂದಯ್ಯರ ಬಗ್ಗೆ ಬಹಳ ಅಭಿಮಾನ ಪ್ರೀತಿ ಇತ್ತು ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಹಿಂಡೆನ್‌ಬರ್ಗ್ 2.0? ಒಸಿಸಿಆರ್‌ಪಿ ವರದಿಯ ನಂತರ ಅದಾನಿ ಷೇರುಗಳು ತೀವ್ರ ಕುಸಿತ

ಸನಾದಿ ಅಪ್ಪಣ್ಣ ಕೂಡ ಕುಳುವ ಸಮಾಜದವರು. ಡಾ. ರಾಜ್ ಕುಮಾರ್ ಅವರ ಅಭಿನಯದ ಸನಾದಿ ಅಪ್ಪಣ್ಣ ಸಿನಿಮಾವನ್ನು ನಾನು ಹಲವು ಬಾರಿ ನೋಡಿದ್ದೇನೆ. ನನಗೆ ರಾಜ್ ಕುಮಾರ್ ಅವರ ಸಿನಿಮಾವನ್ನು ಬರಿ ಒಂದು ಸಾರಿ ನೋಡಿದರೆ ಸಮಾಧಾನ ಆಗುತ್ತಿರಲಿಲ್ಲ. ಅದಕ್ಕೇ ಪದೇ ಪದೇ ನೋಡುತ್ತಿದ್ದೆ ಎಂದರು.

ಸಮಾಜದಲ್ಲಿ ಸ್ವಾರ್ಥಿಗಳಿಂದ ಜಾತಿ ವ್ಯವಸ್ಥೆ ರೂಪುಗೊಂಡಿತು. ಯಾವ್ಯಾವ ಕಸುಬನ್ನು ಯಾರು ಮಾಡುತ್ತಿದ್ದಾರೋ ಅದದೇ ಕಸುಬನ್ನೇ ಮಾಡಿಕೊಂಡಿರಲಿ. ಅವರ್ಯಾರೂ ಪ್ರಗತಿ ಕಾಣಬಾರದು ಎನ್ನುವ ಸ್ವಾರ್ಥ ಜಾತಿ ವ್ಯವಸ್ಥೆಗೆ ಕಾರಣ ಎಂದರು.

ಧರ್ಮವನ್ನು ಅರ್ಥ ಮಾಡಿಕೊಳ್ಳಲು ದೊಡ್ಡ ಗ್ರಂಥಗಳನ್ನು ಓದುವ ಅಗತ್ಯವಿಲ್ಲ. ಮನುಷ್ಯ ಮನುಷ್ಯನನ್ನು ಪ್ರೀತಿಸುವುದೇ ಧರ್ಮ. ಜಾತಿ-ಧರ್ಮದ ಹೆಸರಲ್ಲಿ ಮನುಷ್ಯರನ್ನು ದ್ವೇಷಿಸುವುದೇ ಅಧರ್ಮ. ಧರ್ಮದ ಬಗ್ಗೆ ಭಾಷಣ ಮಾಡುವುದು ಸುಲಭ. ಆದರೆ ಧರ್ಮವಂತರಾಗಿ ಬದುಕುವುದು ಕಷ್ಟ. ಧರ್ಮದ ಬಗ್ಗೆ ಭಾಷಣ ಮಾಡುವವರು ಧರ್ಮವಂತರಾಗಿ ಬದುಕುತ್ತಿದ್ದಾರಾ ಎಂದು ಸಿಎಂ ಪ್ರಶ್ನಿಸಿದರು.

ಸಾಣೇಹಳ್ಳಿ ಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ವಹಿಸಿದ್ದರು.

ಕೊರಮ ಕೊರಚ ಕೊರವ ಸಮುದಾಯಗಳ ಒಕ್ಕೂಟದ ರಾಜ್ಯಾಧ್ಯಕ್ಷರಾದ ಶಿವಾನಂದ ಎಂ ಭಜಂತ್ರಿ, ಸಮುದಾಯದ ಮುಖಂಡರುಗಳಾದ ಎಕೆಎಂಎಸ್ ನ ಪಲ್ಲವಿ, ಬಿ.ಎಸ್. ಆನಂದಕುಮಾರ್ ಏಕಲವ್ಯ, ಆದರ್ಶ್ ಯಲ್ಲಪ್ಪ, ಎಂ.ವೆಂಕಟೇಶ್, ಜಿ.ಚಂದ್ರಣ್ಣ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿದ್ದರು.

ನುಲಿಯ ಚಂದಯ್ಯ ಭವನಕ್ಕೆ ನಿವೇಶನ ಮತ್ತು ಅನುದಾನ

ನುಲಿಯ ಚಂದಯ್ಯ ಭವನ ನಿರ್ಮಾಣಕ್ಕೆ ಅಗತ್ಯ ನಿವೇಶನ ಮತ್ತು ಅನುದಾನ ನೀಡಬೇಕು ಎನ್ನುವ ಸಮುದಾಯದ ಬೇಡಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿದರು. ಬೇಡಿಕೆ ಈಡೇರಿಕೆಯ ಭರವಸೆಯನ್ನು ವೇದಿಕೆಯಲ್ಲೇ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X