ಜೆಡಿಎಸ್‌ಗೆ ಮರುಜನ್ಮ ಕೊಟ್ಟಿದ್ದೇವೆ ಎಂದ ಯತ್ನಾಳ್‌ಗೆ ಕುಮಾರಸ್ವಾಮಿ ತಿರುಗೇಟು

Date:

Advertisements

ಜೆಡಿಎಸ್‌ಗೆ ಮರುಜನ್ಮ ಕೊಟ್ಟಿದ್ದೇವೆ ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು; “ಯಾರಿಗೆ ಯಾರು ಮರುಜನ್ಮ ಕೊಟ್ಟಿದ್ದಾರೆ ಎಂದು ಬೀದಿಯಲ್ಲಿ ಚರ್ಚೆ ಮಾಡುವ ಸಂಗತಿಯಲ್ಲ” ಎಂದು ತಿರುಗೇಟು ನೀಡಿದ್ದಾರೆ.

ಮಂಡ್ಯದಲ್ಲಿ ಶನಿವಾರ ರೈತ ಸಭಾಂಗಣ ನವೀಕರಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ನಂತರ ಅವರು ಮಾಧ್ಯಮಗಳ ಜತೆ ಅವರು ಮಾತನಾಡಿದರು.

“ಯಾವ ರೀತಿ ನನ್ನ ಪಕ್ಷ ಬಿಜೆಪಿಗೆ ಶಕ್ತಿ ತುಂಬಿದೆ ಅಥವಾ ಜೆಡಿಎಸ್‌ಗೆ ಬಿಜೆಪಿ ಶಕ್ತಿ ತುಂಬಿದೆಯಾ ಎಂಬ ಚರ್ಚೆ ಈಗ ಅನಗತ್ಯ. ದೆಹಲಿ ನಾಯಕರಿಗೆ ಅದರ ಬಗ್ಗೆ ಸಂಪೂರ್ಣ ಮಾಹಿತಿ ಇದೆ. ಅದನ್ನೆಲ್ಲ ನಾನು ಬೀದಿಯಲ್ಲಿ ನಿಂತು ಚರ್ಚೆ ಮಾಡಲೇ? ಅದರ ಅವಶ್ಯಕತೆ ಇಲ್ಲ. ನಾನು ಈ ಕ್ಷಣದವರೆಗೂ ಜೆಡಿಎಸ್ – ಬಿಜೆಪಿ ಎಂದು ಬೇರ್ಪಡಿಸಿ ಮಾತನಾಡಿಲ್ಲ” ಎಂದರು.

Advertisements

“ನಾನು ಚನ್ನಪಟ್ಟಣ ಸೇರಿದಂತೆ ಮೂರು ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಯೇ ನಿಲ್ಲುತ್ತಾರೆ ಎಂದು ಹೇಳಿದೇನೆಯೇ ಹೊರತು, ಜೆಡಿಎಸ್ ಅಭ್ಯರ್ಥಿಯನ್ನು ಹಾಕುತ್ತೇನೆ ಎಂದು ಹೇಳಿಲ್ಲ. ತ್ಯಾಗದ ಬಗ್ಗೆ ಮಾತನಾಡುವವರು ಅವರ ಆತ್ಮಕ್ಕೆ ಪ್ರಶ್ನೆ ಹಾಕಿಕೊಳ್ಳಬೇಕು‌. ನಮ್ಮ ಮೈತ್ರಿಗೆ ಅಡ್ಡಿ ಆಗಬಾರದು ಎಂದು ನಡೆದುಕೊಳ್ಳುತ್ತಿದ್ದೇನೆ. ಅರ್ಥ ಮಾಡಿಕೊಳ್ಳಬೇಕು” ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ

“ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಹೇಗಿದೆ ನೋಡ್ತಿದ್ದೇನೆ. ಆಡಳಿತ ನಡಿತಿದ್ಯಾ? ಸರ್ಕಾರ ಇದ್ಯಾ? ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿದೆ. ಬಾಗಲಕೋಟೆ, ಹಾವೇರಿ, ಚಿತ್ರದುರ್ಗದಲ್ಲಿ ಏನಾಗಿದೆ‌? ಈರುಳ್ಳಿ, ದ್ರಾಕ್ಷಿ, ಜೋಳ ಬೆಳೆಯುವವರ ಸ್ಥಿತಿ ಏನಾಗಿದೆ? ಅದರ ಬಗ್ಗೆ ಕೇಳುವವರು ದಿಕ್ಕಿಲ್ಲದಂತಾಗಿದೆ. ಬೆಂಗಳೂರು ನಗರ ಜಲಾವೃತವಾಗಿದೆ.
ಯಾರಾದ್ರು ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರಾ? ಅದರ ಬಗ್ಗೆ ಯಾರಿಗಾದ್ರು ಚಿಂತನೆ ಇಲ್ಲ” ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವರು ಕಿಡಿಕಾರಿದರು.

ಚನ್ನಪಟ್ಟಣ ಕ್ಷೇತ್ರದ ಬಗ್ಗೆ ಇಂದು ಸಂಜೆ ಚರ್ಚೆ

“ಚನ್ನಪಟ್ಟಣ ಉಪ ಚುನಾವಣೆಯ ಎನ್‌ಡಿಎ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿ ಇಂದು ಸಂಜೆ ಬೆಂಗಳೂರಿನಲ್ಲಿ ಸಭೆ ಇದ್ದು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಬಿಜೆಪಿ ಪಕ್ಷದ ನಾಯಕರ ಜತೆ ಸಮಾಲೋಚನೆ ನಡೆಸುವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X