ಕುಮಾರಣ್ಣ ತಿಮಿಂಗಿಲ ಹಿಡಿದು, ಅವರೇ ನುಂಗಿಕೊಳ್ಳಲಿ: ಡಿಸಿಎಂ ಡಿಕೆಶಿ ತಿರುಗೇಟು

Date:

“ಪೆನ್‌ಡ್ರೈವ್ ವಿಚಾರದಲ್ಲಿ ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿಯಲಿ, ಹಿಡಿದು, ಬಡಿದು ಅವರೇ ನುಂಗಿಕೊಳ್ಳಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಮ್ಮ ವಿರುದ್ಧ ಟೀಕೆ ಮಾಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.

- Advertisement -

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,“ಕುಮಾರಸ್ವಾಮಿಯವರಿಗೆ ಯಾರನ್ನು ಹಿಡಿದು ಬಡಿದು ಒಳಗೆ ಹಾಕಬೇಕು ಅನ್ನಿಸುತ್ತದೋ ಅವರನ್ನು ಒಳಗೆ ಹಾಕಿಸಲಿ. ತಿಮಿಂಗಿಲಗಳನ್ನು ಅವರೇ ನುಂಗಿಕೊಳ್ಳಲಿ. ನಾನು ನಿರ್ದೇಶಕನೂ ಅಲ್ಲ, ನಿರ್ಮಾಪಕನೂ ಅಲ್ಲ. ನಾನು ಕೇವಲ ಪ್ರದರ್ಶಕ ಅಷ್ಟೇ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಶಾಸಕರು, ಸಚಿವರಿಂದ ಮಾತನಾಡಿಸುತ್ತಿರುವವರು ಯಾರು ಎಂದು ಪರೋಕ್ಷವಾಗಿ ಕುಮಾರಸ್ವಾಮಿ ಅವರು ನಿಮ್ಮ ಬಗ್ಗೆ ಹೇಳಿದ್ದಾರೆ ಎಂದಾಗ, “ಬೇರೆಯವರಿಂದ ಮಾತನಾಡಿಸುವ, ಪ್ರತಿಭಟನೆ ಮಾಡಿಸುವ, ಬೇರೆಯವರ ಮೇಲೆ ಅನಗತ್ಯ ಆರೋಪ ಮಾಡುವ ಅಗತ್ಯ ನನಗಿಲ್ಲ. ನಾನು ಚುನಾವಣಾ ಪ್ರಚಾರದಲ್ಲಿ ನಿರತನಾಗಿದ್ಧೇನೆ. ನಾನು ರಾಜಕೀಯ ಪಕ್ಷದ ಅಧ್ಯಕ್ಷ. ಈ ಪ್ರಕರಣದಲ್ಲಿ ಒಂದು ಸಣ್ಣ ಹಸ್ತಕ್ಷೇಪವಿದ್ದರೂ ಅದಕ್ಕೆ ಬೆಲೆ ತೆರಲು ನಾನು ಸಿದ್ಧ. ಈಗ ಆ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಸಮಯ ಎಲ್ಲದಕ್ಕೂ ಉತ್ತರ ನೀಡಲಿದೆ” ಎಂದರು.

ದೇವೇಗೌಡರ ಕುಟುಂಬಕ್ಕೆ ಕಳಂಕ ತರಲು ರೇವಣ್ಣ ಅವರನ್ನು ಬಂಧಿಸಲಾಗಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ, “ರೇವಣ್ಣ ಅವರ ಪರಿಸ್ಥಿತಿ ನೋಡಿ ನನಗೂ ಬೇಸರವಾಗುತ್ತಿದೆ. ಅವರದು ದೊಡ್ಡ ಕುಟುಂಬ, ಈ ರೀತಿ ಆಗಬಾರದು ಎಂದು ಬಯಸುತ್ತೇನೆ. ಅವರು ನನಗೆ ಏನಾದಲೂ ಬಯಸಲಿ. ಆದರೆ ನಾನು ಮಾತ್ರ ಅವರಿಗೆ ಕೆಟ್ಟದ್ದು ಬಯಸುವುದಿಲ್ಲ. ನಾನು ಪ್ರಕೃತಿ ನಿಯಮ, ನ್ಯಾಯದ ಮೇಲೆ ನಂಬಿಕೆ ಇಟ್ಟವನು. ನಾನು ರಾಜಕೀಯ ಷಡ್ಯಂತ್ರಕ್ಕೆ ಗುರಿ ಆಗಿದ್ದವನೇ ಮತ್ತು ಅದರ ನೋವು ಅನುಭವಿಸಿದವನೇ. ಆ ವೇಳೆಯಲ್ಲಿ ನಾನು ಎಷ್ಟು ಗಟ್ಟಿಯಾಗಿ, ಧೈರ್ಯವಾಗಿ, ಆತ್ಮವಿಶ್ವಾಸದಿಂದ ಇದ್ದೆ ಎಂಬುದು ನನಗೆ ಮಾತ್ರ ಗೊತ್ತಿದೆ. ದೇವರು ನನಗೆ ಎಲ್ಲ ರೀತಿಯ ರಕ್ಷಣೆ ನೀಡಿದ್ದು, ನಾನು ಬೇರೆಯವರಿಗೆ ಕೆಟ್ಟದು ಬಯಸುವುದಿಲ್ಲ. ಆದರೆ ನನ್ನ ಬ್ರದರ್ ಕುಮಾರಣ್ಣನಿಗೆ ವಿಧಾನಸಭೆಯಲ್ಲಿ ಉತ್ತರ ನೀಡುತ್ತೇನೆ” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...