ಕುಮಾರಸ್ವಾಮಿ ನಮ್ಮ ವಿರುದ್ಧ ಏನಾದರೂ ದಾಖಲೆ ಹುಡುಕಬೇಕು ಅಂತ ಹರಸಾಹಸ ಪಡುತ್ತಿದ್ದಾರೆ: ಡಿ ಕೆ ಶಿವಕುಮಾರ್

Date:

ಕುಮಾರಸ್ವಾಮಿ ಅವರು ನನ್ನನ್ನು ಸದಾ ಸ್ಮರಿಸುತ್ತಿರಬೇಕು. ಇಲ್ಲದಿದ್ದರೆ ಅವರಿಗೆ ನಿದ್ದೆ ಬರುವುದಿಲ್ಲ. ಅವರು ಹಾಗೂ ಅವರ ಸಹೋದರರು ನನ್ನ ಸ್ಮರಿಸುತ್ತಲೇ ಇರುತ್ತಾರೆ. ಅವರು ನನ್ನ ದಾಖಲೆಗಳನ್ನು ಹುಡುಕಲು ಹರಸಾಹಸ ಪಡುತ್ತಿದ್ದಾರೆ. ನನ್ನ ಎಲ್ಲಾ ದಾಖಲೆಗಳು ಇ.ಡಿ ಸಿಬಿಐ ಬಳಿ ಇವೆ. ಹೊಸದಾಗಿ ಹುಡುಕುವುದೇನಿಲ್ಲ. ಅವರು ನನಗೆ ಕೇಳಿದ್ದರೆ ನಾನೇ ಅವರಿಗೆ ನನ್ನ ದಾಖಲೆಗಳನ್ನು ಒದಗಿಸುತ್ತಿದ್ದೆ. ನಾವು ಇನ್ನೂ ಅವರ ಸುದ್ದಿಗೆ ಹೋಗಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

- Advertisement -

ಪಂಚಮಸಾಲಿ ಲಿಂಗಾಯತರ ಮೀಸಲಾತಿ ವಿಚಾರವಾಗಿ ಸಮುದಾಯದ ನಾಯಕರ ಜತೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ, “ಮುಡಾ ಬಗ್ಗೆ ಇ.ಡಿ ಅವರು ಮಾಹಿತಿ ಸಂಗ್ರಹಿಸುತ್ತಿರಬಹುದು. ಅದನ್ನು ದಾಳಿ ಎಂದು ಹೇಗೆ ಹೇಳುತ್ತೀರಿ. ಅವರು ದಾಖಲೆ ಕೇಳಬಹುದು, ಇವರು ಕೊಡಬಹುದು. ದಾಖಲೆ ಪರಿಶೀಲನೆ ಮಾಡಬಹುದು. ಅದಕ್ಕಿಂತ ಹೆಚ್ಚಾಗಿ ಇನ್ನೇನು ಮಾಡಲು ಸಾಧ್ಯ? ದಾಖಲೆಗಳನ್ನು ಹೊಸದಾಗಿ ತಿದ್ದಲು ಸಾಧ್ಯವೇ? ಪ್ರಕರಣದ ಎಲ್ಲಾ ದಾಖಲೆಗಳು ಸಾರ್ವಜನಿಕವಾಗಿವೆ. ನಾವು ಕಾನೂನು ರೀತಿಯ ಹೋರಾಟ ಮಾಡುತ್ತೇವೆ. ವಾಸ್ತವಾಂಶ ಜನರ ಮುಂದಿಡುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ನೈಸ್ ರಸ್ತೆ ವಿಚಾರವಾಗಿ ಕುಮಾರಸ್ವಾಮಿ ಅವರ ವಿಚಾರವಾಗಿ ಕೇಳಿದಾಗ, “ನೈಸ್ ವ್ಯಾಪ್ತಿಯಲ್ಲಿ ಅವರ ಆಸ್ತಿ ಎಷ್ಟಿದೆ ಎಂದು ಮೊದಲು ಅವರು ಬಹಿರಂಗಪಡಿಸಲಿ. ಸಮಯ ಬಂದಾಗ ನಾನು ಅದನ್ನು ಹೇಳುತ್ತೇನೆ” ಎಂದು ತಿಳಿಸಿದರು.

“ಯಾವುದೇ ಸಮುದಾಯಕ್ಕೆ ಅನ್ಯಾಯವಾಗಬಾರದು ಎಂಬುದು ನಮ್ಮ ಸರ್ಕಾರದ ಉದ್ದೇಶ. ಮೀಸಲಾತಿ ವಿಚಾರ ನ್ಯಾಯಾಲಯದಲ್ಲಿದ್ದು ನಾವು ಹಸ್ತಕ್ಷೇಪ ಮಾಡಲು ಆಗುವುದಿಲ್ಲ. ಮುಂದಿನ ದಿನಗಳಲ್ಲಿ ಪಂಚಮಸಾಲಿ ಸಮುದಾಯದ ಜತೆ ಮತ್ತೆ ಚರ್ಚೆ ಮಾಡುತ್ತೇವೆ” ಎಂದು ಡಿಸಿಎಂ ತಿಳಿಸಿದರು.

ಕಾಲಮಿತಿಯಲ್ಲಿ ಮೀಸಲಾತಿ ನೀಡಬೇಕು ಎಂದರೆ ಅದು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ಹಿಂದೆ ಬಿಜೆಪಿ ಸರ್ಕಾರ ತರಾತುರಿಯಲ್ಲಿ ಬೇರೆ ಸಮಾಜಗಳಿಗೆ ನೋವಾಗುವಂತೆ ತೀರ್ಮಾನ ಮಾಡಿತ್ತು. ನಂತರ ಆ ಸರ್ಕಾರವೇ ನಾವು ಯಾವುದೇ ಮೀಸಲಾತಿ ಜಾರಿ ಮಾಡುವುದಿಲ್ಲ ಎಂದು ನ್ಯಾಯಾಲಯದಲ್ಲಿ ಅಫಿಡವಿಟ್ ಸಲ್ಲಿಸಿದೆ. ಈ ವಿಚಾರ ನ್ಯಾಯಾಲಯದಲ್ಲಿ ಇರುವಾಗ ನಾವು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ” ಎಂದರು

ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಬಗ್ಗೆ ಕೇಳಿದಾಗ, “ನಾನೇ ಅಭ್ಯರ್ಥಿ. ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಹಸ್ತದ ಗುರುತೇ ಅಭ್ಯರ್ಥಿ” ಎಂದು ತಿಳಿಸಿದರು.

WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...